ಇಡಬ್ಲ್ಯುಎಸ್‌ ಮೀಸಲಾತಿ | ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ

Date:

  • ಇಡಬ್ಲ್ಯುಎಸ್‌ ಮೀಸಲಾತಿ ಕುರಿತು ಮರುಪರಿಶೀಲನೆ ಅರ್ಜಿ ಮೇ 9ಕ್ಕೆ ವಿಚಾರಣೆ
  • ಮೀಸಲಾತಿ ವಿರೋಧಿಸಿ ತೀರ್ಪು ನೀಡಿದ್ದ ನ್ಯಾಯಮೂರ್ತಿ ರವೀಂದ್ರ ಭಟ್

ಆರ್ಥಿಕ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) ಮೀಸಲಾತಿ ಸಂಬಂಧದ ತೀರ್ಪು ಮರುಪರಿಶೀಲನೆಗೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

ಆರ್ಥಿಕ ದುರ್ಬಲ ವರ್ಗಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಶೇ 10 ಮೀಸಲಾತಿ ನೀಡಿ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಆ ಮೂಲಕ ಸುಪ್ರೀಂ ಕೋರ್ಟ್‌ ಸಂವಿಧಾನದ 103ನೇ ವಿಧಿಯ ತಿದ್ದುಪಡಿ ಹೇಳುವ ಇಡಬ್ಲ್ಯುಎಸ್‌ ಮೀಸಲಾತಿ ಸಿಂಧುತ್ವವನ್ನು ಮಾನ್ಯ ಮಾಡಿತ್ತು.

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಲಿದೆ. ಇಡಬ್ಲ್ಯುಎಸ್‌ ಮೀಸಲಾತಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮೇ 9ರಂದು ನಿಗದಿಪಡಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ವರ್ಷ ನವೆಂಬರ್ 7ರಂದು ಮುಖ್ಯ ನ್ಯಾಯಮೂರ್ತಿಯಾಗಿದ್ದ ಯು ಯು ಲಲಿತ್‌, ನ್ಯಾಯಮೂರ್ತಿಗಳಾದ ದಿನೇಶ್‌ ಮಹೇಶ್ವರಿ, ಎಸ್‌ ರವೀಂದ್ರ ಭಟ್, ಬೇಲಾ ಎಂ ತ್ರಿವೇದಿ ಮತ್ತು ಜೆ ಬಿ ಪರ್ದಿವಾಲಾ ಅವರ ಐವರು ಸದಸ್ಯರ ಪೀಠ ಆರ್ಥಿಕ ದುರ್ಬಲ ವರ್ಗಗಳಿಗೆ ಮೀಸಲಾತಿ ಸಂಬಂಧ ವಿಚಾರಣೆ ನಡೆಸಿತ್ತು.

ಆರ್ಥಿಕ ದುರ್ಬಲ ವರ್ಗಗಳಿಗೆ ಮೀಸಲಾತಿ ನೀಡುವ ಸಂವಿಧಾನದ 103ನೇ ವಿಧಿಯ ತಿದ್ದುಪಡಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿತ್ತು.

ಸಂವಿಧಾನದ ಈ ತಿದ್ದುಪಡಿಯನ್ನು 3:2ರ ಬಹುಮತದ ಮೂಲಕ ಮಾನ್ಯ ಮಾಡಿತು. ಈ ತಿದ್ದುಪಡಿಯು ಯಾವುದೇ ಕಾನೂನು ಉಲ್ಲಂಘಿಸಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು. ಮೂವರು ನ್ಯಾಯಮೂರ್ತಿಗಳು ಮೀಸಲಾತಿಯನ್ನು ಎತ್ತಿಹಿಡಿದರು. ಆದರೆ ನ್ಯಾ.ರವೀಂದ್ರ ಭಟ್ ಅವರು ಮೀಸಲಾತಿ ವಿರುದ್ಧ ತೀರ್ಪು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? 60 ಲಕ್ಷ ಶಿಶುಗಳಿಗೆ ಕ್ಯಾಲರಿಯುಕ್ತ ಆಹಾರವಿಲ್ಲ ಎಂದ ‘ದಿ ಲ್ಯಾನ್ಸೆಟ್’ ವರದಿ

ಆರ್ಥಿಕ ದುರ್ಬಲ ವರ್ಗದವರಿಗೆ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್‌ ತೀರ್ಪು ಮರುಪರಿಶೀಲಿಸುವಂತೆ ಡಿಎಂಕೆ ಸೇರಿ ಇತರರು ಅರ್ಜಿ ಸಲ್ಲಿಸಿದ್ದರು. ಇಡಬ್ಲ್ಯುಎಸ್‌ ಮೀಸಲಾತಿ ಕುರಿತು ತೀರ್ಪು ಪ್ರಶ್ನಿಸಿ ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಜಯ ಠಾಕೂರ್‌ ಮತ್ತೊಂದು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಫಾಲ| ಮಣಿಪುರವನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ ಎಂದ ಅಮಿತ್ ಶಾ!

ಮಣಿಪುರದ ಜನರನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ, ಆದರೆ ಬಿಜೆಪಿ ರಾಜ್ಯದ ವಿಭಜನೆಗೆ...

ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ!

ಕೇಂದ್ರ ನರೇಂದ್ರ ಮೋದಿ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದ ಫೆಬ್ರವರಿ...

ಒಡಿಶಾ| ಮೇಲ್ಸೇತುವೆಯಿಂದ ಬಿದ್ದ ಬಸ್‌; ಐವರು ಸಾವು, ಹಲವರಿಗೆ ಗಾಯ

ಒಡಿಶಾದ ಜಾಜ್‌ಪುರ ಜಿಲ್ಲೆಯ ಬಾರಾಬತಿ ಬಳಿಯ ರಾಷ್ಟ್ರೀಯ ಹೆದ್ದಾರಿ-16ರಲ್ಲಿ ಸುಮಾರು 50...

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ಭಾನುವಾರ ಗುಂಡಿನ...