ಕಾವೇರಿ ಜಲ ವಿವಾದ: ತಮಿಳುನಾಡಿನ ಅರ್ಜಿ ತ್ವರಿತ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

Date:

ನೆರೆಯ ಕರ್ನಾಟಕದೊಂದಿಗಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ತ್ವರಿತ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.

- Advertisement -

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠದ ಮುಂದೆ ಹಾಜರಾದ ತಮಿಳುನಾಡು ಪರ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ಅವರು, “ನೀರು ಹಂಚಿಕೆಯಲ್ಲಿ ಉಂಟಾಗಿರುವ ಭಾರೀ ಕೊರತೆಯಿಂದಾಗಿ ರಾಜ್ಯದ ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ,” ಎಂದು ವಿವರಿಸಿದರು. ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿಗಳು, ಆಗಸ್ಟ್ 13ರ ಗುರುವಾರ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಕಬಿನಿ ಮತ್ತು ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯಗಳಿಂದ 15 ದಿನಗಳ ಕಾಲ ನಿತ್ಯ 3,500 ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಜುಲೈ 30ರಂದು ನೀಡಿದ್ದ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ತಮಿಳುನಾಡು ಸರ್ಕಾರ ನ್ಯಾಯಾಲಯವನ್ನು ಕೋರಿದೆ. ಆಗಸ್ಟ್ 12ರೊಳಗೆ 4.536 ಟಿಎಂಸಿ (15 ದಿನಗಳ ಕಾಲ 3,500 ಕ್ಯುಸೆಕ್ ದರದಲ್ಲಿ) ನೀರು ಬಿಡುಗಡೆ ಮಾಡಲು ಆದೇಶಿಸುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಜೂನ್ 1 ರಿಂದ ಆಗಸ್ಟ್ 12ರ ವರೆಗಿನ ಅವಧಿಯಲ್ಲಿ ಬಿಳಿಗುಂಡ್ಲು ಅಂತರರಾಜ್ಯ ಗಡಿಯಲ್ಲಿ ಆಗಿರುವ ನೀರಿನ ಕೊರತೆಯನ್ನು ನೀಗಿಸಲು 26.954 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆ ಮಾಡಲು ಕರ್ನಾಟಕಕ್ಕೆ ನಿರ್ದೇಶಿಸುವಂತೆ ಸಿಡಬ್ಲ್ಯುಎಂಎಗೆ ಸೂಚನೆ ನೀಡಬೇಕು. ಜೊತೆಗೆ, ಕರ್ನಾಟಕದ ಜಲಾಶಯಗಳ ನೀರಿನ ಹರಿವನ್ನು ಪ್ರತಿ 10 ದಿನಗಳಿಗೊಮ್ಮೆ ಪರಿಶೀಲಿಸಿ, ಬಿಳಿಗುಂಡ್ಲುವಿನಲ್ಲಿ ದೈನಂದಿನ ಹಾಗೂ ಮಾಸಿಕ ನೀರಿನ ಹರಿವನ್ನು ಕಟ್ಟುನಿಟ್ಟಾಗಿ ಖಚಿತಪಡಿಸಿಕೊಳ್ಳಲು ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು ಎಂದು ತಮಿಳುನಾಡು ಮನವಿ ಮಾಡಿದೆ.

“ಪ್ರವಾಹದ ಕಾರಣದಿಂದಾಗಿ ಜಲಾಶಯಗಳಲ್ಲಿ ಹೆಚ್ಚುವರಿ ನೀರು ತುಂಬಿ ಅನಿವಾರ್ಯವಾಗಿ ನೀರು ಬಿಡಬೇಕಾದ ಬೆರಳೆಣಿಕೆಯ ಸಂದರ್ಭಗಳನ್ನು ಹೊರತುಪಡಿಸಿ, ಕರ್ನಾಟಕವು ಕಾವೇರಿ ನ್ಯಾಯಮಂಡಳಿಯ ಆದೇಶಗಳನ್ನು ನಿರಂತರವಾಗಿ ಉಲ್ಲಂಘಿಸುತ್ತಲೇ ಬಂದಿದೆ,” ಎಂದು ತಮಿಳುನಾಡು ಗಂಭೀರ ಆರೋಪ ಮಾಡಿದೆ.

​ಜುಲೈ 29 ರಿಂದ 15 ದಿನಗಳ ಕಾಲ 3,500 ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸಿನ ಬಗ್ಗೆಯೂ ತಮಿಳುನಾಡು ಪ್ರಸ್ತಾಪಿಸಿದೆ. “ಕರ್ನಾಟಕವು 15 ದಿನಗಳ ಕಾಲ 3,500 ಕ್ಯುಸೆಕ್ ನೀರು ಹರಿಸಿದರೂ, ನಮಗೆ ಕೇವಲ 4.536 ಟಿಎಂಸಿ ನೀರು ಮಾತ್ರ ಸಿಗಲಿದೆ. ಆ ಪ್ರಮಾಣದ ನೀರಿನ ಬಿಡುಗಡೆಯಿಂದಲೂ 5.379 ಟಿಎಂಸಿ ನೀರಿನ ಕೊರತೆ ಮುಂದುವರಿಯಲಿದೆ. ಜೂನ್ 1ರಿಂದ ಆಗಸ್ಟ್ 12ರ ವರೆಗಿನ ಲೆಕ್ಕಾಚಾರದ ಪ್ರಕಾರ ನಮಗೆ 26.95 ಟಿಎಂಸಿ ನೀರು ಬರಬೇಕಿದೆ. ಆದರೆ, ಪ್ರಾಧಿಕಾರ ಕೇವಲ 4.536 ಟಿಎಂಸಿ ನೀರು ಬಿಡಲು ಸೂಚಿಸಿದ್ದು, ಇದು ನಮಗೆ ಸಿಗಬೇಕಾದ ಪಾಲಿಗಿಂತ ತೀರಾ ಕಡಿಮೆಯಾಗಿದೆ,” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತ ನಾಯಕರ ಅವಹೇಳನ, ಪ್ರಚೋದನಕಾರಿ ಭಾಷಣ ಆರೋಪ: ಪ್ರತಾಪ್‌ ಸಿಂಹಗೆ ಮಧ್ಯಂತರ ರಕ್ಷಣೆ ನೀಡಲು ಕೋರ್ಟ್‌ ನಕಾರ

ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಮುದಾಯದ ನಾಯಕರನ್ನು...

ಕಾವೇರಿ ವಿವಾದ: 20 ಟಿಎಂಸಿ ಕೊರತೆ ಎಂದ ತಮಿಳುನಾಡು, ತೀವ್ರ ಬರಗಾಲದ ಸಂಕಷ್ಟ ಬಿಚ್ಚಿಟ್ಟ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ...

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...