ರೇಬಿಸ್ ಪೀಡಿತ ಶ್ವಾನಗಳಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್ ಸಮ್ಮತಿ

Date:

ಮಾನವನ ಜೀವಕ್ಕೆ ಕಂಟಕವಾಗಿ ಪರಿಣಮಿಸಿರುವ ರೇಬಿಸ್ ಪೀಡಿತ (ಹುಚ್ಚು ಹಿಡಿದ) ಹಾಗೂ ತೀವ್ರ ಆಕ್ರಮಣಕಾರಿ ಬೀದಿ ನಾಯಿಗಳಿಗೆ ದಯಾಮರಣ (Euthanasia) ನೀಡಲು ಸುಪ್ರೀಂ ಕೋರ್ಟ್ ಮಹತ್ವದ ಅನುಮತಿ ನೀಡಿದೆ. ದೇಶಾದ್ಯಂತ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಮತ್ತು ಮಾನವ ಹಕ್ಕುಗಳ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಿದೆ.

- Advertisement -

ಬೀದಿ ನಾಯಿಗಳ ಹಾವಳಿಯನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಒಳಪಡಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಆದೇಶ ನೀಡಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಾಣಿ ದಯೆ ಮತ್ತು ಮನುಷ್ಯನ ಜೀವ ರಕ್ಷಣೆಯ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಪ್ರಾಣಿಗಳ ಹಕ್ಕುಗಳ ರಕ್ಷಣೆ ಕಾನೂನುಬದ್ಧವಾಗಿ ಮುಖ್ಯವಾದರೂ, ಮನುಷ್ಯನ ಜೀವಕ್ಕೆ ಬೆಲೆ ಕಟ್ಟಲಾಗದು. ಹೀಗಾಗಿ, ಗುಣಪಡಿಸಲಾಗದ ಕಾಯಿಲೆಗಳಿಂದ ಬಳಲುತ್ತಿರುವ, ರೇಬಿಸ್ ಪೀಡಿತ ಮತ್ತು ಮನುಷ್ಯರ ಮೇಲೆ ಪದೇ ಪದೇ ಮಾರಣಾಂತಿಕ ದಾಳಿ ನಡೆಸುವ ಆಕ್ರಮಣಕಾರಿ ನಾಯಿಗಳನ್ನು ಮಾತ್ರ ಗುರುತಿಸಿ, ಅವುಗಳಿಗೆ ದಯಾಮರಣ ನೀಡಲು ಅವಕಾಶವಿದೆ ಎಂದು ನ್ಯಾಯಪೀಠ ತಿಳಿಸಿದೆ.

ಇದನ್ನು ಓದಿದ್ದೀರಾ? ‘ನೋಡ್ತಾ ಇರಿ, ಬಂಗಾಳದ ಥರ ಕೇರಳನೂ ಗೆಲ್ತೀವಿ’: ಪ್ರಲ್ಹಾದ್‌ ಜೋಷಿ ಬಡಾಯಿ!

ಈ ಪ್ರಕ್ರಿಯೆಯನ್ನು ಹೇಗಂದರೆ ಹಾಗೆ ಮಾಡುವಂತಿಲ್ಲ ಎಂದು ನ್ಯಾಯಾಲಯ ಎಚ್ಚರಿಸಿದೆ. ‘ಪ್ರಾಣಿ ಜನನ ನಿಯಂತ್ರಣ (Animal Birth Control – ABC) ನಿಯಮಾವಳಿ’ಗಳ ಅಡಿಯಲ್ಲಿ ಸ್ಥಳೀಯ ಆಡಳಿತಗಳು (ನಗರ ಪಾಲಿಕೆ, ಪುರಸಭೆ, ಪಂಚಾಯಿತಿ ಇತ್ಯಾದಿ) ಮಾತ್ರ ಈ ಕ್ರಮ ಕೈಗೊಳ್ಳಬೇಕು. ದಯಾಮರಣದ ಪ್ರಕ್ರಿಯೆಯು ಪಶುವೈದ್ಯರ ಮೇಲ್ವಿಚಾರಣೆಯಲ್ಲಿ, ನಿಯಮಾನುಸಾರ ಹಾಗೂ ಯಾವುದೇ ರೀತಿಯ ಅನಗತ್ಯ ಕ್ರೌರ್ಯವಿಲ್ಲದೆ ನಡೆಯಬೇಕು. ಎಲ್ಲ ಬೀದಿ ನಾಯಿಗಳನ್ನೂ ಕೊಲ್ಲಲು ಅಥವಾ ಸ್ಥಳಾಂತರಿಸಲು ಈ ಆದೇಶ ಅನ್ವಯಿಸುವುದಿಲ್ಲ, ಕೇವಲ ಅಪಾಯಕಾರಿ ಮತ್ತು ರೇಬಿಸ್ ಪೀಡಿತ ನಾಯಿಗಳಿಗೆ ಮಾತ್ರ ಇದು ಸೀಮಿತ ಎಂದು ಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಇತ್ತೀಚಿನ ವರ್ಷಗಳಲ್ಲಿ ಕೇರಳ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಬೀದಿ ನಾಯಿಗಳ ದಾಳಿಯಿಂದ ಶಾಲಾ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಗಂಭೀರವಾಗಿ ಗಾಯಗೊಂಡ ಹಾಗೂ ಪ್ರಾಣ ಕಳೆದುಕೊಂಡ ಘಟನೆಗಳು ವರದಿಯಾಗಿದ್ದವು. ಇದರಿಂದ ಆತಂಕಗೊಂಡಿದ್ದ ನಾಗರಿಕರು ಮತ್ತು ಕೆಲವು ಸಂಘಟನೆಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ಈ ಹಿನ್ನೆಲೆಯಲ್ಲಿ, ಪ್ರಾಣಿ ದಯಾ ಸಂಘಟನೆಗಳ ವಾದವನ್ನು ಆಲಿಸಿದ ಮೇಲೂ, ಸಾರ್ವಜನಿಕರ ಜೀವ ರಕ್ಷಣೆಗೆ ಮೊದಲ ಆದ್ಯತೆ ನೀಡಿರುವ ಸರ್ವೋಚ್ಚ ನ್ಯಾಯಾಲಯದ ಈ ನಿರ್ಧಾರವು ಸ್ಥಳೀಯ ಆಡಳಿತಗಳಿಗೆ ದೊಡ್ಡ ಮಟ್ಟದ ರಿಲೀಫ್ ಹಾಗೂ ಸ್ಪಷ್ಟ ಮಾರ್ಗಸೂಚಿಯನ್ನು ಒದಗಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...