ಮಧ್ಯಪ್ರದೇಶ: ಬಸಂತ ಪಂಚಮಿಯಂದು ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ ಸುಪ್ರೀಂ ಅಸ್ತು

Date:

ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜ್‌ಶಾಲೆ-ಕಮಲ್ ಮೌಲಾ ಮಸೀದಿಯಲ್ಲಿ ಬಸಂತ ಪಂಚಮಿಯಂದು ಹಿಂದೂ ಮತ್ತು ಮುಸ್ಲಿಂ ಸಮುದಾಯದವರಿಬ್ಬರಿಗೂ ಪ್ರಾರ್ಥನೆ ಸಲ್ಲಿಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠವು, ಬಸಂತ ಪಂಚಮಿಯಂದು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಹಿಂದೂಗಳಿಗೆ ಪೂಜೆ ಸಲ್ಲಿಸಲು ಹಾಗೂ ಅದೇ ದಿನ ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ಮುಸ್ಲಿಮರಿಗೆ ನಮಾಜ್ ಮಾಡಲು ಅವಕಾಶ ಕಲ್ಪಿಸಿದೆ. ನಮಾಜ್‌ಗೆ ಬರುವವರ ಪಟ್ಟಿಯನ್ನು ಮುಂಚಿತವಾಗಿ ಜಿಲ್ಲಾ ಆಡಳಿತಕ್ಕೆ ನೀಡುವಂತೆ ಮುಸ್ಲಿಂ ಸಮುದಾಯಕ್ಕೆ ಕೋರ್ಟ್ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಭಾರತೀಯ ಪುರಾತತ್ವ ಇಲಾಖೆಯ (ASI) ಸಂರಕ್ಷಿತ ಸ್ಮಾರಕವಾಗಿರುವ ಇದನ್ನು ಹಿಂದೂಗಳು ವಾಗ್ದೇವಿ (ಸರಸ್ವತಿ) ದೇವಾಲಯವೆಂದು ಪರಿಗಣಿಸಿದರೆ, ಮುಸ್ಲಿಮರು ಕಮಲ್ ಮೌಲಾ ಮಸೀದಿ ಎಂದು ಕರೆಯುತ್ತಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆ ತರುವುದು ಆಡಳಿತವೇ?

ಏನಿದು ವಿವಾದ?
ಭೋಜ್‌ಶಾಲೆ ಸಂಕೀರ್ಣವು ಶತಮಾನಗಳ ಹಿಂದಿನ ಸರಸ್ವತಿ ದೇವಾಲಯವಾಗಿತ್ತು, ನಂತರ ಅದನ್ನು ಕೆಡವಿ ಅಲಾವುದ್ದೀನ್ ಖಿಲ್ಜಿ ಆಳ್ವಿಕೆಯಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂಬುದು ಹಿಂದೂಪರ ಸಂಘಟನೆಗಳ ವಾದ. ಇದಕ್ಕೆ ಪೂರಕವಾಗಿ ಎಎಸ್‌ಐ ವರದಿಗಳು ಅಲ್ಲಿನ ಶಿಲಾಶಾಸನ ಮತ್ತು ಕೆತ್ತನೆಗಳನ್ನು ಉಲ್ಲೇಖಿಸಿವೆ. ಆದರೆ, ಕಳೆದ 700 ವರ್ಷಗಳಿಂದ ಇಲ್ಲಿ ನಮಾಜ್ ನಡೆಯುತ್ತಿದ್ದು, ಇದೊಂದು ಮಸೀದಿಯೇ ಹೊರತು ದೇವಾಲಯವಲ್ಲ ಎಂದು ಮುಸ್ಲಿಂ ಮುಖಂಡರು ಪ್ರತಿಪಾದಿಸುತ್ತಾರೆ.

ಪ್ರಸ್ತುತ ಕಾನೂನು ಸುವ್ಯವಸ್ಥೆಗಾಗಿ ಧಾರ್ ಜಿಲ್ಲೆಯಲ್ಲಿ 8,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಎಸ್‌ಐ ಸಿದ್ಧಪಡಿಸಿದ ವೈಜ್ಞಾನಿಕ ಸಮೀಕ್ಷಾ ವರದಿಯನ್ನು ಹೈಕೋರ್ಟ್ ಮೂಲಕ ಎರಡೂ ಸಮುದಾಯಗಳಿಗೆ ಹಂಚಿಕೊಳ್ಳಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...