ಕುಸ್ತಿ ಪಟುಗಳ ಪ್ರತಿಭಟನೆ: ದೆಹಲಿ ಪೊಲೀಸರಿಗೆ ಸುಪ್ರೀಂ ನೋಟಿಸ್‌

Date:

Advertisements

ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿ ಪಟುಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಬುಧವಾರ ವಿಚಾರಣೆ ನಡೆಸಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಕೆಲ ಕೋಚ್‌ಗಳು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದಾಗಿ ಮಹಿಳಾ ಕುಸ್ತಿ ಪಟುಗಳು ದೆಹಲಿ ಪೊಲೀಸರಿಗೆ ದೂರು ನೀಡಿದರೂ, ಪೊಲೀಸ್‌ ಸಿಬ್ಬಂದಿ ಮಾತ್ರ ಬ್ರಿಜ್‌ ಭೂಷಣ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿಲ್ಲ ಎನ್ನಲಾಗಿದೆ.

ಈ ಹಿನ್ನೆಲೆ ಅರ್ಜಿ ವಿಚಾರಣೆ ನಡೆಸಿರುವ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಅವರನ್ನೊಳಗೊಂಡ ಪೀಠ, “ಅರ್ಜಿದಾರರು ದೂರು ನೀಡಿದರೂ ಬ್ರಿಜ್‌ ಭೂಷಣ್‌ ವಿರುದ್ಧ ಈವರೆಗೆ ಏಕೆ ಪ್ರಕರಣ ದಾಖಲಿಸಿಲ್ಲ” ಎಂದು ದೆಹಲಿ ಪೊಲೀಸರನ್ನು ಪ್ರಶ್ನಿಸಿದ್ದು, ಈ ಬಗ್ಗೆ ಮೂರು ದಿನಗಳ ಒಳಗಾಗಿ ಸ್ಪಷ್ಟನೆ ನೀಡುವಂತೆ ನೋಟಿಸ್‌ ಜಾರಿ ಮಾಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಭಾಗಿಯಾದ ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ

ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ 7 ಮಂದಿ ಮಹಿಳಾ ಕ್ರೀಡಾಪಟುಗಳು ಬ್ರಿಜ್‌ ಭೂಷಣ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ದೂರುದಾರರಲ್ಲಿ 16ನೇ ವಯಸ್ಸಿನ ಅಪ್ರಾಪ್ತ ಕುಸ್ತಿ ಪಟು ಕೂಡ ಇದ್ದಾರೆ. ಈ ಹಿನ್ನೆಲೆ ಬ್ರಿಜ್‌ ಭೂಷಣ್‌ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆಯೂ ಆಗ್ರಹಗಳು ಕೇಳಿಬಂದಿವೆ.

ಭಾರತದ ಜನಪ್ರಿಯ ಕುಸ್ತಿ ಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಹಲವು ಕುಸ್ತಿಪಟುಗಳು ಕಳೆದ ಕೆಲ ದಿನಗಳಿಂದ ಜಂತರ್‌ ಮಂತರ್‌ನಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ತೀರ್ಪಿನ ಕಾರಣ ನನ್ನ ಸಮುದಾಯದಿಂದಲೇ ಟೀಕೆಗೊಳಗಾದೆ: ಸಿಜೆಐ

"ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣ (ಒಳಮೀಸಲಾತಿ) ತೀರ್ಪಿನ ಕಾರಣದಿಂದಾಗಿ ನನ್ನ ಸಮುದಾಯದಿಂದಲೇ...

BREAKING NEWS | ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಚೇತೇಶ್ವರ ಪೂಜಾರ

ಟೆಸ್ಟ್ ಕ್ರಿಕೆಟ್‌ ದಿಗ್ಗಜರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ...

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X