ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಎಂಡಿ ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಬಿಗ್ ರಿಲೀಫ್ ನೀಡಿದೆ. ನ್ಯಾಯಾಂಗ ನಿಂದನೆ ಪ್ರಕರಣವನ್ನು ಮಂಗಳವಾರ ಮುಕ್ತಾಯಗೊಳಿಸಿದೆ.
ಜಾಹೀರಾತು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೆಲವು ಜಾಹೀರಾತುಗಳನ್ನು ಪ್ರಕಟಸಿದಂತೆ ತಿಳಿಸಿದ್ದರೂ ಕೂಡಾ ಪತಂಜಲಿ ಸಂಸ್ಥೆ ಪ್ರಕಟಿಸಿತ್ತು. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿತ್ತು. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು.
ಕಂಪೆನಿಯು 2023ರ ನವೆಂಬರ್‌ನ ಆದೇಶವನ್ನು ಉಲ್ಲಂಘಿಸಿದೆ. ಗುಣಮುಖವಾಗದ ರೋಗಗಳನ್ನು ಗುಣಪಡಿಸುವ ಬಗ್ಗೆ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡುವ ಮೂಲಕ ಸುಪ್ರೀಂ ಕೋರ್ಟ್ ಮತ್ತು ಅದರ ಸ್ವಂತ ಜವಾಬ್ದಾರಿಯನ್ನು ಉಲ್ಲಂಘಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದನ್ನು ಓದಿದ್ದೀರಾ? ಜಾಹೀರಾತು ಪ್ರಕರಣ | ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮುಂದುವರಿಸಿದ ಪತಂಜಲಿ ಆಯುರ್ವೇದ
ಹಲವಾರು ಸತತ ವಿಚಾರಣೆಯಲ್ಲಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದದ ಕ್ಷಮೆಯನ್ನು ಸ್ವೀಕರಿಸಲು ನಿರಾಕರಿಸಿತು.
ಕ್ಷಮೆಯಾಚನೆಗೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಾಲಯವು ಏಪ್ರಿಲ್‌ನಲ್ಲಿ ನಡೆದ ವಿಚಾರಣೆಯಲ್ಲಿ, “ನಾವು ಇದನ್ನು ಸ್ವೀಕರಿಸಲು ನಿರಾಕರಿಸುತ್ತೇವೆ. ನಾವು ಇದನ್ನು ಉದ್ದೇಶಪೂರ್ವಕ ಅಸಹಕಾರವೆಂದು ಪರಿಗಣಿಸುತ್ತೇವೆ” ಎಂದು ಹೇಳಿತ್ತು. ಹಾಗೆಯೇ ಮತ್ತೊಂದು ವಿಚಾರಣೆಯಲ್ಲಿ ಪೀಠವು ಈ ಕ್ಷಮಾಪಣೆಯು ಬರೀ ಬಾಯಿ ಮಾತಿನ ಕ್ಷಮಾಪಣೆ ಎಂದಿತ್ತು.
#BREAKING: Supreme Court closes contempt case against Baba Ramdev, Acharya Balkrishna in misleading ads case
— Bar and Bench (@barandbench) August 13, 2024
Closes all proceedings against them. pic.twitter.com/QA7WCSFJ5Q