ನ್ಯಾಯಾಂಗ ನಿಂದನೆ | ರಾಮ್‌ದೇವ್, ಪತಂಜಲಿ ಎಂಡಿಗೆ ಬಿಗ್ ರಿಲೀಫ್‌

Date:

ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಎಂಡಿ ಆಚಾರ್ಯ ಬಾಲಕೃಷ್ಣ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಬಿಗ್ ರಿಲೀಫ್ ನೀಡಿದೆ. ನ್ಯಾಯಾಂಗ ನಿಂದನೆ ಪ್ರಕರಣವನ್ನು ಮಂಗಳವಾರ ಮುಕ್ತಾಯಗೊಳಿಸಿದೆ.

- Advertisement -

ಜಾಹೀರಾತು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೆಲವು ಜಾಹೀರಾತುಗಳನ್ನು ಪ್ರಕಟಸಿದಂತೆ ತಿಳಿಸಿದ್ದರೂ ಕೂಡಾ ಪತಂಜಲಿ ಸಂಸ್ಥೆ ಪ್ರಕಟಿಸಿತ್ತು. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿತ್ತು. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಂಪೆನಿಯು 2023ರ ನವೆಂಬರ್‌ನ ಆದೇಶವನ್ನು ಉಲ್ಲಂಘಿಸಿದೆ. ಗುಣಮುಖವಾಗದ ರೋಗಗಳನ್ನು ಗುಣಪಡಿಸುವ ಬಗ್ಗೆ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡುವ ಮೂಲಕ ಸುಪ್ರೀಂ ಕೋರ್ಟ್ ಮತ್ತು ಅದರ ಸ್ವಂತ ಜವಾಬ್ದಾರಿಯನ್ನು ಉಲ್ಲಂಘಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನು ಓದಿದ್ದೀರಾ? ಜಾಹೀರಾತು ಪ್ರಕರಣ | ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಮುಂದುವರಿಸಿದ ಪತಂಜಲಿ ಆಯುರ್ವೇದ

ಹಲವಾರು ಸತತ ವಿಚಾರಣೆಯಲ್ಲಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದದ ಕ್ಷಮೆಯನ್ನು ಸ್ವೀಕರಿಸಲು ನಿರಾಕರಿಸಿತು.

ಕ್ಷಮೆಯಾಚನೆಗೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಾಲಯವು ಏಪ್ರಿಲ್‌ನಲ್ಲಿ ನಡೆದ ವಿಚಾರಣೆಯಲ್ಲಿ, “ನಾವು ಇದನ್ನು ಸ್ವೀಕರಿಸಲು ನಿರಾಕರಿಸುತ್ತೇವೆ. ನಾವು ಇದನ್ನು ಉದ್ದೇಶಪೂರ್ವಕ ಅಸಹಕಾರವೆಂದು ಪರಿಗಣಿಸುತ್ತೇವೆ” ಎಂದು ಹೇಳಿತ್ತು. ಹಾಗೆಯೇ ಮತ್ತೊಂದು ವಿಚಾರಣೆಯಲ್ಲಿ ಪೀಠವು ಈ ಕ್ಷಮಾಪಣೆಯು ಬರೀ ಬಾಯಿ ಮಾತಿನ ಕ್ಷಮಾಪಣೆ ಎಂದಿತ್ತು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...