ಅಲಹಾಬಾದ್ ಹೈಕೋರ್ಟ್‌ನ ಕಾರ್ಯನಿರ್ವಹಣೆ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ

Date:

ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

- Advertisement -

ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿ ಅವರು ತಮ್ಮ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ವಿಚಾರಣೆ ನಡೆಸುತ್ತಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಅಲಹಾಬಾದ್ ಹೈಕೋರ್ಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಈ ಬಗ್ಗೆ ನಾವು ಕಮೆಂಟ್ ಮಾಡಲು ಬಯಸುವುದಿಲ್ಲ. ಕೆಲವು ಹೈಕೋರ್ಟ್‌ಗಳಿಗೆ ಏನಾಗುತ್ತಿದೆ ಎಂಬ ಬಗ್ಗೆ ತಿಳಿದಿಲ್ಲ. ಕೆಲವು ಹೈಕೋರ್ಟ್‌ಗಳ ಪೈಕಿ ಅಲಹಾಬಾದ್ ಹೈಕೋರ್ಟ್ ಬಗ್ಗೆಯೂ ಚಿಂತಿಸಬೇಕಾಗಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಟೀಕಿಸಿದ್ದಾರೆ.

ಹೈಕೋರ್ಟ್‌ನಲ್ಲಿ ಪ್ರಕರಣಗಳ ಪಟ್ಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಲ್ಲೇಖ ಮಾಡಿದ ಅವರು, “ದುರದೃಷ್ಟವಶಾತ್ ಪ್ರಕರಣಗಳ ಪಟ್ಟಿ ಸಲ್ಲಿಕೆ ಕುಸಿದಿದೆ. ಯಾವ ವಿಷಯವನ್ನು ಪಟ್ಟಿ ಮಾಡಲಾಗುತ್ತಿದೆ ಎಂದು ಯಾರಿಗೂ ತಿಳಿದಿಲ್ಲ. ಕಳೆದ ಶನಿವಾರ ನಾನು ಅಲಹಾಬಾದ್ ಹೈಕೋರ್ಟ್‌ಗೆ ಭೇಟಿ ನೀಡಿದಾಗ ಸಂಬಂಧಪಟ್ಟ ನ್ಯಾಯಾಧೀಶರು ಮತ್ತು ರಿಜಿಸ್ಟ್ರಾರ್ ಜತೆಗೆ ದೀರ್ಘ ಸಂವಹನ ನಡೆಸಿದ್ದೇನೆ” ಎಂದು ಹೇಳಿದರು.

ಹಿರಿಯ ವಕೀಲ ಕಪಿಲ್ ಸಿಬಲ್ ಅವರು, “ನಾನು ಕೂಡ ಈ ಬಗ್ಗೆ ಕಮೆಂಟ್ ಮಾಡಲು ಬಯಸುವುದಿಲ್ಲ. ಯಾಕೆಂದರೆ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ” ಎಂದು ಹೇಳಿದ್ದಾರೆ.

ನಂತರ ಹೊರಡಿಸಿದ ಆದೇಶದಲ್ಲಿ, ಅನ್ಸಾರಿ ಅವರ ಅರ್ಜಿಯನ್ನು ಹೈಕೋರ್ಟ್ ಆಲಿಸುವವರೆಗೆ ವಿವಾದಿತ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

ಈ ವಿಷಯವನ್ನು ಆದಷ್ಟು ಬೇಗ ಹೈಕೋರ್ಟ್ ಮುಂದೆ ವಿಚಾರಣೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ತನ್ನ ಆದೇಶವನ್ನು ಅಲ್ಲಿನ ವಿಭಾಗೀಯ ಪೀಠದ ಗಮನಕ್ಕೆ ತರುವಂತೆಯೂ ನಿರ್ದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

ಸುದ್ದಿ ನೋಡಿದ ತಕ್ಷಣ ಪಿಐಎಲ್ ಹಾಕ್ತೀರಾ? – ನಕಲಿ ವೈದ್ಯಕೀಯ ಪದವಿ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ಚರ್ಚೆಯಾಗುವ ಸುದ್ದಿಗಳ ಆಧಾರದ ನಿಯಮಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌)...

ಸೇವಾ ಅವಧಿಯಲ್ಲಾದ ದೈಹಿಕ ಸಮಸ್ಯೆಯು ‘ಸೇವಾ ಸಂಬಂಧಿ’ ಎಂದೇ ಪರಿಗಣಿತ: ಸುಪ್ರೀಂ ಕೋರ್ಟ್

ಸೇನಾ ಪಡೆಗೆ ಸೇರ್ಪಡೆಯಾಗುವ ಸಂದರ್ಭದಲ್ಲಿ ಯಾವುದೇ ದೈಹಿಕ ಅಥವಾ ಮಾನಸಿಕ ಅನಾರೋಗ್ಯ...