ಉದ್ಯೋಗಕ್ಕಾಗಿ ಜಮೀನು ಹಗರಣ: ಲಾಲು ಪ್ರಸಾದ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಸುಪ್ರೀಂ ನಕಾರ

Date:

ಉದ್ಯೋಗಕ್ಕಾಗಿ ಜಮೀನು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

- Advertisement -

ನ್ಯಾಯಮೂರ್ತಿ ಎಂ ಎಂ ಸುಂದರೇಶ್ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ಪ್ರಕರಣದ ವಿಚಾರಣೆಯ ಸಮಯದಲ್ಲಿ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ 77 ವರ್ಷದ ಲಾಲು ಯಾದವ್ ಅವರಿಗೆ ವಿನಾಯಿತಿ ನೀಡಿದೆ. ಆದರೆ ಎಫ್‌ಐಆರ್ ರದ್ದುಗೊಳಿಸಲಾಗದು ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಉದ್ಯೋಗಕ್ಕಾಗಿ ಜಮೀನು ಹಗರಣ | ಲಾಲು ಪ್ರಸಾದ್, ತೇಜಸ್ವಿ ಯಾದವ್‌ಗೆ ಜಾಮೀನು

ಇನ್ನು ಉದ್ಯೋಗಕ್ಕಾಗಿ ಜಮೀನು ಹಗರಣದಲ್ಲಿ ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯ ಸೆಕ್ಷನ್ 17 ಎ ಅನ್ವಯ ಮಾಡಿರುವ ವಿಷಯವನ್ನು ಎತ್ತಲು ಸುಪ್ರೀಂ ಕೋರ್ಟ್ ಯಾದವ್‌ಗೆ ಅವಕಾಶ ನೀಡಿದೆ. ಸೆಕ್ಷನ್ 17ಎ 2018ರ ತಿದ್ದುಪಡಿಯ ಮೂಲಕ ಸೇರಿಸಲಾಗಿದ್ದು, ಇದು ಪ್ರಾಮಾಣಿಕ ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ನೀಡುವ ಗುರಿಯನ್ನು ಹೊಂದಿದೆ. ಈ ಸೆಕ್ಷನ್ ಪ್ರಕಾರ ಯಾವುದೇ ಸರ್ಕಾರಿ ಅಧಿಕಾರಿಯು ತನ್ನ ಅಧಿಕೃತ ಕರ್ತವ್ಯದ ಭಾಗವಾಗಿ ತೆಗೆದುಕೊಂಡ ನಿರ್ಧಾರ ಅಥವಾ ಶಿಫಾರಸುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುವ ಮೊದಲು ಸಂಬಂಧಪಟ್ಟ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.

ಕಳೆದ ವರ್ಷ ಜುಲೈ 18ರಂದು ದೆಹಲಿಯ ವಿಶೇಷ ನ್ಯಾಯಾಲಯದಲ್ಲಿ ಈ ಪ್ರಕರಣದಲ್ಲಿ ಲಾಲು ವಿರುದ್ದ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

2004ರಿಂದ 2009ರವರೆಗೆ ಲಾಲು ರೈಲ್ವೆ ಸಚಿವರಾಗಿದ್ದಾಗ ಈ ಪ್ರಕರಣ ಮುನ್ನೆಲೆಗೆ ಬಂದಿದೆ. ಕಳೆದ ವರ್ಷ ಮೇ 29ರಂದು ಈ ಪ್ರಕರಣಕ್ಕೆ ತಡೆ ನೀಡಲು ಕೋರಿ ಲಾಲು ಸಲ್ಲಿಸಿದ್ದ ಅರ್ಜಿಯ್ನನು ವಜಾಗೊಳಿಸಿದ ದೆಹಲಿ ಹೈಕೋರ್ಟ್, ವಿಚಾರಣೆಗೆ ತಡೆ ನೀಡಲು ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಹೇಳಿತ್ತು. ಹಾಗೆಯೇ ಸಿಬಿಐ ಎಫ್‌ಐಆರ್ ರದ್ದುಗೊಳಿಸುವಂತೆ ಯಾದವ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿ ಮಾಡಿತ್ತು.

ಅದಾದ ಬಳಿಕ ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಲಾಲು ಸುಪ್ರೀಂ ಕೋರ್ಟ್‌ನ ಕದ ತಟ್ಟಿದ್ದರು. ಆ ವೇಳೆ ಪ್ರಕರಣಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...