ರಾಜಕೀಯ ಬಿಟ್ಟು ದೆಹಲಿಗೆ ತಕ್ಷಣ ನೀರು ಬಿಡುವಂತೆ ಹಿಮಾಚಲ ಪ್ರದೇಶಕ್ಕೆ ಸುಪ್ರೀಂ ನಿರ್ದೇಶನ

Date:

ಹರಿಯಾಣಕ್ಕೆ ಪೂರ್ವ ಸೂಚನೆ ನೀಡಿ ದೆಹಲಿಗೆ ತಕ್ಷಣ ನೀರು ಬಿಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ತೀವ್ರ ಬೇಸಿಗೆ ಹಿನ್ನಲೆಯಲ್ಲಿ ನೀರಿನ ಅಭಾವ ಎದುರಿಸುತ್ತಿರುವ ದೆಹಲಿಯು ಹಿಮಾಚಲ ಪ್ರದೇಶದಿಂದ ಹೆಚ್ಚುವರಿ ನೀರನ್ನು ಪಡೆದುಕೊಳ್ಳಲಿದೆ. ಕಣಿವೆ ರಾಜ್ಯವು ಕಡ್ಡಾಯವಾಗಿ 125 ಕ್ಯೂಸೆಕ್ಸ್ ಹೆಚ್ಚುವರಿ ನೀರನ್ನು ಪಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಇಂದು ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನೀರಿನ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಬೇಡಿ ಎಂದು ಬೇಸಿಗೆಕಾಲದ ಪೀಠದ ನ್ಯಾಯಾಧೀಶರಾದ ಪ್ರಶಾಂತ್ ಕೆ ಮಿಶ್ರಾ ಮತ್ತು ಕೆ ವಿ ವಿಶ್ವನಾಥನ್ ಆದೇಶಿಸಿದ್ದಾರೆ.

ದೆಹಲಿಗೆ ನೀರು ಹರಿಸಲು ತಮ್ಮದು ಯಾವುದೇ ಅಭ್ಯಂತರವಿಲ್ಲ ಎಂದು ಹಿಮಾಚಲ ಪ್ರದೇಶ ತಿಳಿಸಿದೆ. ಹಿಮಾಚಲದಿಂದ ಬಿಡುಗಡೆಯಾಗುವ ನೀರನ್ನು ಪ್ರತ್ಯೇಕಗೊಳಿಸಿ ದೆಹಲಿಗೆ ಹರಿಸಲು ಯಾವುದೇ ಯಾಂತ್ರಿಕ ಮಾನದಂಡಗಳಿಲ್ಲ ಎಂದು ಹರಿಯಾಣ ತಿಳಿಸಿದೆ.

ರಾಷ್ಟ್ರ ರಾಜಧಾನಿ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿರುವ ಕಾರಣ ಹರಿಯಾಣ ಸರ್ಕಾರಕ್ಕೆ ತುರ್ತಾಗಿ ನೀರು ಹರಿಸಲು ನಿರ್ದೇಶಿಸುವಂತೆ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.

ತೀವ್ರ ಬಿಸಿಲಿನ ಪರಿಣಾಮಗಳಿಂದಾಗಿ ನಗರದಲ್ಲಿ ನೀರಿನ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ. ನೆರೆಯ ರಾಜ್ಯ ಹರಿಯಾಣಕ್ಕೆ ಒಂದು ತಿಂಗಳು ಹೆಚ್ಚುವರಿ ನೀರು ಹರಿಸಲು ನಿರ್ದೇಶಿಸುವಂತೆ ಆಪ್‌ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ದೆಹಲಿಯ ನೀರಿನ ಅಗತ್ಯತೆಗಳನ್ನು ಪರಿಪೂರ್ಣಗೊಳಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯು ತೀವ್ರ ಬಿಸಿಲಿನಿಂದಾಗಿ ನೀರಿನ ಕೊರತೆಯನ್ನು ಅನುಭವಿಸುತ್ತಿದೆ ಎಂದು ದೆಹಲಿ ಸರ್ಕಾರ ಕೋರ್ಟ್‌ಗೆ ತಿಳಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆ; ‘ಚಾನ್ಸೇ ಇಲ್ಲ’ ಎಂದ ಕೇಂದ್ರ ಸಚಿವ ಮಾಂಝಿ

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಎನ್‌ಡಿಎ ಸರ್ಕಾರದ ಪಾಲುದಾರ ಜೆಡಿಯು ಕೇಂದ್ರ...

ಅಕ್ರಮವಾಗಿ ‘ಕೆಂಪು ಬೀಕನ್’ ಅಳವಡಿಸಿದ್ದ ಐಎಎಸ್ ಅಧಿಕಾರಿಯ ಆಡಿ ಕಾರು ವಶ

ತಮ್ಮ ಐಷಾರಾಮಿ ಕಾರಿಗೆ ಅಕ್ರಮವಾಗಿ 'ಕೆಂಪು ಬೀಕನ್' ದೀಪವನ್ನು ಅಳವಡಿಸಿದ ಆರೋಪದ...

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ...

ಟ್ರಂಪ್ ಮೇಲೆ ಗುಂಡಿನ ದಾಳಿ: ಸ್ನೇಹಿತನ ಬಗ್ಗೆ ಕಳವಳಗೊಂಡಿದ್ದೇನೆ ಎಂದ ಮೋದಿಗೆ ನೆಟ್ಟಿಗರ ಪಾಠ

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್...