ಡಿಜಿಟಲ್ ಅರೆಸ್ಟ್ ಪ್ರಕರಣಗಳ ಎಫ್‌ಐಆರ್‌ ಮಾಹಿತಿ ಸಿಬಿಐಗೆ ನೀಡಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

Date:

ಪೊಲೀಸ್ ಅಧಿಕಾರಿಗಳು, ನ್ಯಾಯಾಧೀಶರು ಎಂದು ಹೇಳಿಕೊಂಡು ದೇಶದಲ್ಲಿ ನಡೆದ ಎಲ್ಲಾ ಡಿಜಿಟಲ್ ಅರೆಸ್ಟ್ ಪ್ರಕರಣಗಳಿಗೆ ಸಂಬಂಧಿಸಿದ ಎಫ್‌ಐಆರ್ ಮಾಹಿತಿಗಳನ್ನು ಕೇಂದ್ರ ತನಿಖಾ ದಳಕ್ಕೆ(ಸಿಬಿಐ) ನೀಡುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

- Advertisement -

ಸೆಪ್ಟೆಂಬರ್ 1ರಿಂದ 16ರ ನಡುವೆ ಅಂಬಾಲಾದ ಹಿರಿಯ ನಾಗರಿಕ ದಂಪತಿಗಳು ಡಿಜಿಟಲ್ ಬಂಧನಕ್ಕೆ ಒಳಗಾಗಿ ತಮ್ಮ ಜೀವಮಾನದ ಉಳಿತಾಯವೆಲ್ಲವನ್ನೂ ಕಳೆದುಕೊಂಡಿದ್ದಾರೆ.ಈ ಸಂಬಂಧ ದಂಪತಿ ಸೆಪ್ಟೆಂಬರ್ 16ರಂದು ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಡಿಜಿಟಲ್ ಅರೆಸ್ಟ್ ಪ್ರಕರಣಗಳ ಹೆಚ್ಚಳ: ಸಿಬಿಐ, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್‌

ಈ ಹಿಂದೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯಮಾಲಾ ಬಾಗ್ಚಿ ಅವರ ದ್ವಿಸದಸ್ಯ ಪೀಠವು ಕೇಂದ್ರ ಮತ್ತು ಸಿಬಿಐಗೆ ನೋಟಿಸ್ ನೀಡಿದೆ. ಸುಪ್ರೀಂ ಕೋರ್ಟ್ ಹರಿಯಾಣ ಸರ್ಕಾರ ಹಾಗೂ ಅಂಬಾಲಾದ ಸೈಬರ್ ಅಪರಾಧ ಘಟಕಕ್ಕೂ ನೋಟಿಸ್ ನೀಡಿದೆ. ಇದೀಗ ಅದೇ ಪೀಠ ಸೋಮವಾರ ವಿಚಾರಣೆ ಮುಂದುವರಿಸಿದ್ದು ಎಫ್‌ಐಆರ್ ಮಾಹಿತಿಗಳನ್ನು ನೀಡುವಂತೆ ಸೂಚಿಸಿದೆ.

“ದೇಶದ ವಿವಿಧ ಭಾಗಗಳಲ್ಲಿ ಒಂದಕ್ಕಿಂತ ಅಧಿಕ ಇಂತಹ ಪ್ರಕರಣಗಳು ನಡೆದಿವೆ. ಇದು ದೇಶದಾದ್ಯಂತ ಮತ್ತು ದೇಶದ ಎಲ್ಲೆ ಮೀರಿ ನಡೆದಿರುವ/ ನಡೆಯುತ್ತಿರುವ ಅಪರಾಧ ಪ್ರಕರಣವಾದ ಕಾರಣ ದೇಶದಾದ್ಯಂತ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸುವಂತೆ ನಾವು ಸಿಬಿಐಗೆ ಸೂಚನೆ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಅಟಾರ್ನಿ ಜನರಲ್ ಆರ್‌ ವೆಂಕಟರಮಣಿ, “ಈ ಹಗರಣಗಳ ರುವಾರಿಗಳು ದೇಶದ ಹೊರಭಾಗದಲ್ಲಿದ್ದಾರೆ. ಮೈಯನ್ಮಾರ್, ಥೈಲ್ಯಾಂಡ್ ಸೇರಿದಂತೆ ಏಷ್ಯಾದ ಹಲವು ಭಾಗಗಳಲ್ಲಿ ಈ ತಂಡವಿದೆ” ಎಂದರು.

ಇನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಾಲ್‌ ಸೆಂಟರ್ ಕಚೇರಿ ತೆರೆದು ಅದರಲ್ಲೇ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಅಮೆರಿಕ, ಕೆನಡಾದ ಪ್ರಜೆಗಳನ್ನು ವಂಚಿಸುತ್ತಿದ್ದ ವಿವಿಧ ರಾಜ್ಯಗಳ 16 ಮಂದಿಯನ್ನು ಎಚ್‌ಎಸ್‌ಆರ್ ಲೇಔಟ್‌ನ ಪೊಲೀಸರು ಬಂಧಿಸಿದ್ದಾರೆ. ‘ಸಿಬಿಟ್ಸ್ ಸಲ್ಯೂಷನ್ಸ್‌ ಪ್ರೈವೇಟ್ ಲಿಮಿಟೆಡ್’ ಎಂಬ ಹೆಸರಲ್ಲಿ ಕಂಪನಿಯನ್ನು ನಡೆಸಲಾಗುತ್ತಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....