ಹೊಸ ಸಂಸತ್ ಭವನ ಉದ್ಘಾಟನೆ | ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

Date:

  • ನೂತನಸಂಸತ್ ಭವನ ಉದ್ಘಾಟನೆ ಸಂಬಂಧ ಅರ್ಜಿ ಸಲ್ಲಿಸಿದ್ದ ವಕೀಲ ಜಯ ಸುಕಿನ್
  • ಕಾಂಗ್ರೆಸ್‌ ಸೇರಿ 20 ಪಕ್ಷಗಳಿಂದ ಸಂಸತ್ ಭವನ ಉದ್ಘಾಟನಾ ಸಮಾರಂಭ ಬಹಿಷ್ಕಾರ

ಭಾರತದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ 26) ತಿರಸ್ಕರಿಸಿದೆ.

ನೂತನ ಸಂಸತ್‌ ಭವನ ಕಟ್ಟಡವನ್ನು ರಾಷ್ಟ್ರಪತಿಯವರು ಉದ್ಘಾಟಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರಲ್ಲ. ಹೊಸ ಸಂಸತ್ ಭವನ ಉದ್ಘಾಟನೆಯನ್ನು ರಾಷ್ಟ್ರಪತಿಯವರಿಂದ ಮಾಡಿಸಲು ಲೋಕಸಭೆ ಕಾರ್ಯಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಹೊಸ ಸಂಸತ್‌ ಭವನ ಉದ್ಘಾಟನೆ ಸಂಬಂಧ ವಕೀಲ ಜಯ ಸುಕಿನ್‌ ಅವರು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ ಮತ್ತು ಪಿ ಎಸ್‌ ನರಸಿಂಹ ಅವರನ್ನು ಒಳಗೊಂಡ ರಜಾಕಾಲದ ಪೀಠ ಅರ್ಜಿ ವಿಚಾರಣೆ ನಡೆಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅರ್ಜಿ ವಿಚಾರಣೆ ನಡೆಸಲು ಪೀಠ ತಿರಸ್ಕರಿಸಿದೆ. “ನೀವು ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ ಎಂಬುದು ತಿಳಿದಿದೆ. ಇಂತಹ ಅರ್ಜಿಗಳನ್ನು ನಾವು ಪರಿಗಣಿಸುವುದಿಲ್ಲ” ಎಂದು ಪೀಠ ಅಭಿಪ್ರಾಯಪಟ್ಟು ವಿಚಾರಣೆ ನಿರಾಕರಿಸಿತು. ನಂತರ ಅರ್ಜಿದಾರರು ನೂತನ ಸಂಸತ್‌ ಕಟ್ಟಡ ಉದ್ಘಾಟನೆ ಸಂಬಂಧ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದರು.

ಮೇ 18ರಂದು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಬಿಡುಗಡೆ ಮಾಡಿರುವ ಆಹ್ವಾನ ಪತ್ರಿಕೆ ದೇಶದ ಸಂವಿಧಾನವನ್ನು ಉಲ್ಲಂಘಿಸುತ್ತಿದೆ. ರಾಷ್ಟ್ರಪತಿ ದೇಶದ ಪ್ರಥಮ ಪ್ರಜೆ ಮತ್ತು ಅವರು ಸಂಸತ್‌ನ ಮುಖ್ಯಸ್ಥರು. ದೇಶಕ್ಕೆ ಸಂಬಂಧಿಸಿದ ಎಲ್ಲ ನಿರ್ಧಾರಗಳನ್ನು ರಾಷ್ಟ್ರಪತಿಗಳ ಹೆಸರಿನಲ್ಲಿಯೇ ಕೈಗೊಳ್ಳಲಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಸಂವಿಧಾನದ 79ನೇ ವಿಧಿಯ ಅನ್ವಯ ರಾಷ್ಟ್ರಪತಿಗಳು ಸಂಸತ್ತಿನ ಅವಿಭಾಜ್ಯ ಅಂಗ. ಆದ್ದರಿಂದ ಉದ್ಘಾಟನಾ ಕಾರ್ಯಕ್ರಮದಿಂದ ಅವರನ್ನು ದೂರ ಇರಿಸುವಂತಿಲ್ಲ ಎಂದು ಹೇಳಲಾಗಿತ್ತು.

ಈ ಹಿನ್ನೆಲೆಯಲ್ಲಿ ಲೋಕಸಭೆಯ ಕಾರ್ಯಾಲಯಕ್ಕೆ ಹೊಸ ಸಂಸತ್ ಭವನ ಕಟ್ಟಡವನ್ನು ರಾಷ್ಟ್ರಪತಿಗಳಿಂದ ಉದ್ಘಾಟಿಸಲು ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು.

ಈ ಸುದ್ದಿ ಓದಿದ್ದೀರಾ? ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದ ಎಎಪಿ ನಾಯಕ ಸತ್ಯೇಂದ್ರ ಜೈನ್‌; ಐಸಿಯುನಲ್ಲಿ ಚಿಕಿತ್ಸೆ

ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಕಾಂಗ್ರೆಸ್ ಸೇರಿ 20 ಪಕ್ಷಗಳು ಈ ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಆದರೆ ಹೊಸ ಸಂಸತ್‌ ಭವನ ಉದ್ಘಾಟನೆ ಸಮಾರಂಭಕ್ಕೆ ಏಳು ಪಕ್ಷಗಳು ಹಾಜರಾಗುವುದಾಗಿ ಪ್ರಕಟಿಸಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...