2019ರ ಸಾರ್ವತ್ರಿಕ ಚುನಾವಣೆಯ ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Date:

  • ಕಾಂಗ್ರೆಸ್ ಪ್ರಣಾಳಿಕೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌
  • ಆದರ್ಶ ಅಗರ್‌ವಾಲ್, ಡಾ ಸೀಮಾ ಜೈನ್ ಅರ್ಜಿ ಸಲ್ಲಿಕೆ

2019ರ ಸಾರ್ವತ್ರಿಕ ಚುನಾವಣೆಯ ಕಾಂಗ್ರೆಸ್‌ ಪ್ರಣಾಳಿಕೆ ನೈತಿಕ ನೀತಿ ಸಂಹಿತೆಗೆ (ಎಂಸಿಸಿ) ವಿರುದ್ಧ ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ (ಏಪ್ರಿಲ್‌ 10) ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಪಿ ಎಸ್‌ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರ ತ್ರಿಸದಸ್ಯ ಪೀಠ ಅರ್ಜಿಯನ್ನು ವಿಚಾರಣೆ ನಡೆಸಿ, “ಅರ್ಜಿಯು ಸಂಪೂರ್ಣ ತಪ್ಪು ಗ್ರಹಿಕೆಗಳಿಂದ ಕೂಡಿದೆ” ಎಂದು ಅಭಿಪ್ರಾಯಪಟ್ಟಿದೆ.

ಕಾಂಗ್ರೆಸ್‌ ಪ್ರಣಾಳಿಕೆ ಸಂಬಂಧ ಉತ್ತರ ಪ್ರದೇಶದ ನಿವಾಸಿ ಆದರ್ಶ ಕುಮಾರ್‌ ಅಗರ್‌ವಾಲ್‌ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಭಾರತದ ಚುನಾವಣಾ ಆಯೋಗವನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿತ್ತು.

“2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಪ್ರಣಾಳಿಕೆ ನೈತಿಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ. ಆದ್ದರಿಂದ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವನ್ನು ಅಮಾನ್ಯಗೊಳಿಸಬೇಕು” ಎಂದು ಕೋರಿ ಆದರ್ಶ ಅಗರ್‌ವಾಲ್‌ ಮತ್ತು ಡಾ ಸೀಮಾ ಜೈನ್ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಸುಂಧರಾ ರಾಜೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ತನಿಖೆಗೆ ಒತ್ತಾಯಿಸಿ ಗೆಹ್ಲೋಟ್ ವಿರುದ್ಧ ಸಿಡಿದೆದ್ದ ಪೈಲಟ್‌

ಕಾನೂನಿಗೆ ಅನುಗುಣವಾಗಿ ಪಕ್ಷದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದೂ ಅರ್ಜಿಯಲ್ಲಿ ಕೋರಲಾಗಿತ್ತು.

ಕಾಂಗ್ರೆಸ್ ಪ್ರಣಾಳಿಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು 2020ರ ಫೆಬ್ರವರಿ 14ರಂದು ಸುಪ್ರೀಂ ಕೋರ್ಟ್ ಮುಂದೂಡಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

'ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಸುಸ್ಥಿರ ಬೆಳವಣಿಗೆ ಕಾಣಬೇಕು' 'ರಾಜ್ಯದ...

ಗುಜರಾತ್ | ಹಿಂದೂ ದೇಶದಲ್ಲಿರಬೇಕಾದರೆ ಜೈ ಶ್ರೀರಾಮ್ ಎನ್ನಬೇಕು ಎಂದವನ ಬಂಧನ

ವ್ಯಕ್ತಿಯೊಬ್ಬ ಹಿಂದೂ ದೇಶದಲ್ಲಿರಬೇಕಾದರೆ ನೀನು ಜೈ ಶ್ರೀರಾಮ್ ಎನ್ನಬೇಕು ಎಂದ ವ್ಯಕ್ತಿಯೊಬ್ಬನನ್ನು...

‘ಫ್ರೀಡಂ ಪಾರ್ಕ್’ನಿಂದ ನಮಗೆ ‘ಫ್ರೀಡಂ’ ಕೊಡಿ: ಸಿಎಂ ಸಿದ್ದರಾಮಯ್ಯಗೆ ‘ಮಹಾಧರಣಿ’ ಆಗ್ರಹ

ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ 'ಫ್ರೀಡಂ ಪಾರ್ಕ್‌'ಗೆ ಸೀಮಿತವಾಗಿದ್ದು,...

ತೆಲಂಗಾಣ ಪತ್ರಿಕೆಗಳಲ್ಲಿ ಜಾಹೀರಾತು; ರಾಜ್ಯದ ಬೊಕ್ಕಸ ದುರ್ಬಳಕೆ: ಆರ್‌ ಅಶೋಕ ಕಿಡಿ

'ರಾಜ್ಯದ ಬೊಕ್ಕಸ ಬರಿದು ಮಾಡಿ, ಹೆಮ್ಮಾರಿಯಾದ ಕಾಂಗ್ರೆಸ್ ಸರ್ಕಾರ' 'ಅಭಿವೃದ್ಧಿಗೆ...