ಮಸೀದಿಗಳಿಗೆ ‘ಬಾಬರ್’ ಹೆಸರಿಡುವುದಕ್ಕೆ ನಿಷೇಧ ಕೋರಿದ್ದ ಅರ್ಜಿ ವಜಾ!

Date:

ಯಾವುದೇ ಮಸೀದಿ ಅಥವಾ ಧಾರ್ಮಿಕ ರಚನೆಗಳಿಗೆ ಮೊಘಲ್ ಚಕ್ರವರ್ತಿ ಬಾಬರ್ ಅಥವಾ ಬಾಬರಿ ಮಸೀದಿಯ ಹೆಸರಿಡುವುದನ್ನು ನಿಷೇಧಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

- Advertisement -

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದೆ. ಬಳಿಕ, ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ‘ಬಾಬರಿ ಮಸೀದಿ’ ಮಾದರಿಯ ಮಸೀದಿ ನಿರ್ಮಿಸುವುದಾಗಿ ಅಮಾನತುಗೊಂಡ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ಅವರು 2025ರ ಡಿಸೆಂಬರ್‌ನಲ್ಲಿ ಘೋಷಿಸಿದ್ದರು. ಅವರ ಘೋಷಣೆಯನ್ನು ಆಧಾರವಾಗಿಟ್ಟುಕೊಂಡು ಯಾವುದೇ ಧಾರ್ಮಿಕ ಕಟ್ಟಡಗಳಿಗೆ ಬಾಬರ್ ಅಥವಾ ಬಾಬರಿ ಮಸೀದಿ ಎಂಬ ಹೆಸರು ಇಡದಂತೆ ನಿಷೇಧ ಹೇರಬೇಕೆಂದು ಅರ್ಜಿ ಸಲ್ಲಿಸಲಾಗಿತ್ತು.

ಬಾಬರ್‌ನನ್ನು ‘ಆಕ್ರಮಣಕಾರಿ’ ಎಂದಿದ್ದ ಅರ್ಜಿದಾರರು, “ಭಾರತದಾದ್ಯಂತ ಯಾವುದೇ ಮಸೀದಿ ಅಥವಾ ಧಾರ್ಮಿಕ ರಚನೆಯನ್ನು ನಿರ್ಮಾಣ ಮಾಡುವುದು, ಸ್ಥಾಪಿಸುವುದು ಅಥವಾ ಹೆಸರಿಸುವುದನ್ನು ತಡೆಯಬೇಕು ಮತ್ತು ನಿಷೇಧ ಹೇರಬೇಕು. ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ, ಎಲ್ಲ ರಾಜ್ಯಗಳು ಹಾಗೂ ಇತರರಿಗೆ ನಿರ್ದೇಶನ ನೀಡಬೇಕು” ಎಂದು ಮನವಿ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...