ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಸೇರ್ಪಡೆ ಮಾಡುವುದಕ್ಕಾಗಿ ಮಾಡಲಾದ ಸಂವಿಧಾನ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಇದನ್ನು ಓದಿದ್ದೀರಾ? ಮೈಸೂರು | ಧರ್ಮದ ಹೆಸರಿನಲ್ಲಿ ದ್ವೇಷ ಹರಡಲು ಸಂವಿಧಾನದಲ್ಲಿ ಅವಕಾಶವಿಲ್ಲ: ಸಚಿವ ಡಾ ಹೆಚ್ ಸಿ ಮಹದೇವಪ್ಪ
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಈ ಆದೇಶವನ್ನು ನೀಡಿದೆ. “ಈ ರಿಟ್ ಅರ್ಜಿಗಳಿಗೆ ಹೆಚ್ಚಿನ ಚರ್ಚೆ ಮತ್ತು ತೀರ್ಪು ಅಗತ್ಯವಿಲ್ಲ. ಸಂವಿಧಾನದ ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗೆ ಇರುವುದು. ನಾವು ಹಲವು ವರ್ಷಗಳ ನಂತರ ಪ್ರಕ್ರಿಯೆಯನ್ನು ಅನೂರ್ಜಿತಗೊಳಿಸಲಾಗುವುದಿಲ್ಲ” ಎಂದು ಪೀಠ ಹೇಳಿದೆ.
1976ರಲ್ಲಿ ತುರ್ತುಪರಿಸ್ಥಿತಿ ಸಂದರ್ಭದಲ್ಲಿ 42ನೇ ತಿದ್ದುಪಡಿಯ ಮೂಲಕ ಸಮಾಜವಾದಿ, ಜಾತ್ಯತೀತತೆ ಎಂಬ ಪದಗಳನ್ನು ಸಂವಿಧಾನದ ಮುನ್ನುಡಿ ಅಥವಾ ಪೀಠಿಕೆಗೆ ಸೇರ್ಪಡೆ ಮಾಡಲಾಗಿದೆ.
ಈ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಬಲರಾಮ್ ಸಿಂಗ್, ಅಶ್ವಿನಿ ಉಪಾಧ್ಯಾಯ ಎಂಬವರು ಅರ್ಜಿ ಸಲ್ಲಿಸಿದ್ದರು. ನವೆಂಬರ್ 22ರಂದು ಸುಪ್ರೀಂ ಕೋರ್ಟ್ ಪೀಠ ಅರ್ಜಿ ಪರಿಶೀಲಿಸಿ ಆದೇಶವನ್ನು ಕಾಯ್ದಿರಿಸಿತ್ತು.
