ಎಎಪಿ ಕಚೇರಿ ಖಾಲಿ ಮಾಡಲು ಗಡುವು ದಿನಾಂಕ ವಿಸ್ತರಿಸಿದ ಸುಪ್ರಿಂ ಕೋರ್ಟ್

Date:

ನವದೆಹಲಿಯಲ್ಲಿರುವ ಎಎಪಿ ಮುಖ್ಯ ಕಚೇರಿಯನ್ನು ಖಾಲಿ ಮಾಡುವ ಗಡುವಿನ ದಿನಾಂಕವನ್ನು ಸುಪ್ರೀಂ ಕೋರ್ಟ್ ಆಗಸ್ಟ್‌ 10ರವರೆಗೂ ವಿಸ್ತರಿಸಿದೆ. ಈ ಮೊದಲು ಜೂನ್‌ 15ರೊಳಗೆ ಕಚೇರಿ ತೆರವುಗೊಳಿಸುವ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಎಎಪಿ ಹೆಚ್ಚುವರಿ ಸಮಯ ಕೇಳಿ ಮನವಿ ಸಲ್ಲಿಸಿದ ಹಿನ್ನೆಲೆ ಗಡುವನ್ನು ವಿಸ್ತರಿಸಲಾಗಿದೆ.

- Advertisement -

ರಜಾಕಾಲದ ನ್ಯಾಯಾಧೀಶರಾದ ವಿಕ್ರಮ್‌ ನಾಥ್ ಹಾಗೂ ಸಂದೀಪ್‌ ಮೆಹ್ತಾ ಅವರಿದ್ದ ಪೀಠ ಎಎಪಿ ಪರ ಹಾಜರಾಗಿದ್ದ ಸಲ್ಲಿಕೆಗಳನ್ನು ಗಮನಿಸಿ ಗಡುವಿನ ಅವಧಿಯನ್ನು ಆಗಸ್ಟ್‌ 10ಕ್ಕೆ ವಿಸ್ತರಿಸಿ ಆದೇಶ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಪ್ರಕರಣದ ವಾಸ್ತವ ಮತ್ತು ಸಂದರ್ಭಗಳನ್ನು ಪರಿಗಣಿಸಿ ಕೊನೆಯ ಅವಕಾಶಗಳನ್ನು ನೀಡಲಾಗುತ್ತಿದ್ದು, ಆಗಸ್ಟ್‌ 10ಕ್ಕೆ ಗಡುವನ್ನು ವಿಸ್ತರಿಸಲಾಗಿದೆ. ಅರ್ಜಿದಾರರು ಶಾಂತಿಯುತವಾಗಿ ಆಸ್ತಿಯನ್ನು ಹಸ್ತಾಂತರಿಸಬೇಕು” ಎಂದು ಪೀಠವು ಆದೇಶಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ನಮ್ಮದು ರಾಷ್ಟ್ರೀಯ ಪಕ್ಷವಾದ ಕಾರಣ ನ್ಯಾಯಾಲಯದಿಂದ ಹೆಚ್ಚುವರಿ ಜಾಗವನ್ನು ನೀಡುವುದಕ್ಕೆ ಅನುಮತಿಸಬೇಕು ಎಂದು ಈ ಹಿಂದೆ ಎಎಪಿ ಮಾಡಿದ ಮನವಿಗೆ ಸುಪ್ರೀಂ ಕೋರ್ಟ್ ಸಮ್ಮತ್ತಿಸಿರಲಿಲ್ಲ.

“ಪ್ರತೀ ವರ್ಷವು ನಮ್ಮ ಕಟ್ಟಡದ ವೆಚ್ಚವು ಹೆಚ್ಚಾಗುತ್ತಿದೆ.ಆಗಸ್ಟ್‌ವರೆಗೆ ನ್ಯಾಯಾಲಯ ಪರಿಗಣಿಸಬಹುದು. ಅದಕ್ಕಿಂತ ಹೆಚ್ಚು ಸಾಧ್ಯವಿಲ್ಲ.ಕೇಂದ್ರ ಮತ್ತು ಅವರ ನಡುವೆ ಯಾವುದೇ ರಾಜಕೀಯವಿರಬಹುದು. ಆದರೆ ನಮಗೆ 90 ಕೋರ್ಟ್‌ ಕೊಠಡಿಗಳ ಕೊರತೆಯಿದೆ” ಎಂದು ದೆಹಲಿ ಹೈಕೋರ್ಟ್‌ ಪರ ಹಾಜರಿದ್ದ ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಪ್ರತಿಭಟನೆ | AISA ನಾಯಕಿ ನೇಹಾ ಬೋರಾ ವಶಕ್ಕೆ; ಪೊಲೀಸ್‌ ಬಸ್‌ ಸುತ್ತುವರಿದ ಪ್ರತಿಭಟನಾಕಾರರು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ...

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ...