ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌ ಆದೇಶ

Date:

ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಶಿಕ್ಷಕಿಯನ್ನು ಶಾಲೆಯಿಂದ ಹೊರಹಾಕಿದ ಮತ್ತು ಗುಜರಾತ್‌ ಶಾಲೆಯೊಂದರಲ್ಲಿ ಒಂದು ವರ್ಷದೊಳಗೆ ಶಿಕ್ಷಕಿಗೆ ಕೆಲಸ ನಿರಾಕರಿಸಿದ ಎರಡು ಶಾಲೆಗಳ ಕ್ರಮಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಖಂಡಿಸಿದೆ. ಹಾಗೆಯೇ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ, ಸಮಾನ ಅವಕಾಶ ನೀತಿಯನ್ನು ರೂಪಿಸಲು ಸಮಿತಿಯನ್ನು ರಚಿಸಿದೆ.

- Advertisement -

2022ರ ಡಿಸೆಂಬರ್‌ನಲ್ಲಿ ಲಿಂಗ ಆಧಾರಿತ ತಾರತಮ್ಯ ಮಾಡಿ ಯುಪಿಯ ಲಖಿಂಪುರ ಖೇರಿ ಶಾಲೆಯು ತಮ್ಮನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಲಿಂಗತ್ವ ಅಲ್ಪಸಂಖ್ಯಾತರಾದ ಜೇನ್ ಕೌಶಿಕ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅವರಿಗೆ 2023ರ ಜುಲೈನಲ್ಲಿ ಗುಜರಾತ್‌ನ ಶಾಲೆಯೊಂದರಲ್ಲಿ ಲಿಂಗದ ಆಧಾರದಲ್ಲಿ ಉದ್ಯೋಗ ನೀಡಲು ನಿರಾಕರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನು ಓದಿದ್ದೀರಾ? ಕೋರ್ಟ್‌ಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರು, ವಿಶೇಷ ಚೇತನರಿಗೆ ಪ್ರತ್ಯೇಕ ಶೌಚಾಲಯ: ಸುಪ್ರೀಂ ಕೋರ್ಟ್ ಆದೇಶ

ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠವು, “ಈ ತೀರ್ಪು ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವಲ್ಲಿ ಸಹಾಯ ಮಾಡುತ್ತದೆ. ಹಾಗೆಯೇ ತಾರತಮ್ಯದ ವಿರುದ್ಧ ಮಾರ್ಗಸೂಚಿಗಳನ್ನು ನೀಡುತ್ತದೆ” ಎಂದು ಹೇಳಿದೆ.

ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶೆ ಆಶಾ ಮೆನನ್ ನೇತೃತ್ವದ ಸಮಿತಿಯು, ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರರು, ಶಿಕ್ಷಣ ತಜ್ಞರು ಮತ್ತು ಆರೋಗ್ಯ ತಜ್ಞರು ಸೇರಿದಂತೆ ಸದಸ್ಯರನ್ನು ಒಳಗೊಂಡಿದ್ದು, ಈ ವಿಷಯವನ್ನು ಅಧ್ಯಯನ ಮಾಡಿ ಸಮಾನ ಅವಕಾಶ ನೀತಿಯನ್ನು ಪ್ರಸ್ತಾಪಿಸಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗೆಯೇ ಲಿಂಗತ್ವ ಅಲ್ಪಸಂಖ್ಯಾತರಿಗೆ ಸಮಾನ ಉದ್ಯೋಗಾವಕಾಶ, ಸಮಗ್ರ ವೈದ್ಯಕೀಯ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವಂತೆ ಸಮಿತಿಯನ್ನು ಕೋರ್ಟ್ ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...