ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ ನೇಮಕಗೊಂಡ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ 25753 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ವಜಾಗೊಳಿಸಿ ಏಪ್ರಿಲ್ 22ರಂದು ಕಲ್ಕತ್ತಾ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದರು.
ನೇಮಕಾತಿ ಹಗರಣದ ಕುರಿತು ಸಿಬಿಐ ತನಿಖೆ ಮುಂದುವರಿಸಿ, ಅದನ್ನು ಪೂರ್ಣಗೊಳಿಸಬೇಕು. ಅಲ್ಲಿಯವರೆಗೆ ನೇಮಕಗೊಂಡವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ
ನೇಮಕಾತಿ ಪ್ರಕ್ರಿಯೆ ಸೇರಿ ಯಾವುದೇ ದಾಖಲೆಗಳು ಸರ್ಕಾರದ ಬಳಿ ಇಲ್ಲ ಸರ್ಕಾರದ ಬಳಿ ದಾಖಲೆಯೇ ಇಲ್ಲ ಎಂದರೆ ಹೇಗೆ? ನೇಮಕಾತಿ ವೇಳೆ ಎಲ್ಲ ದಾಖಲೆಗಳನ್ನು ಕಂಪ್ಯೂಟರ್‌ನಲ್ಲಿ ದಾಖಲಿಸಿ ಇಡಬಹುದಿತ್ತಲ್ಲ ಎಂದು ರಾಜ್ಯ ಸರ್ಕಾರಕ್ಕೆ ಕೋರ್ಟ್ ಚಾಟಿ ಬೀಸಿತು.
2016ರಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕ ಮಾಡಲಾಗಿತ್ತು ಈ ಪ್ರಕ್ರಿಯೆಯನ್ನು ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿತ್ತು ನೇಮಕಗೊಂಡ 25,753 ಮಂದಿಯನ್ನು ವಜಾಗೊಳಿಸಬೇಕು ಹಾಗೂ ಅವರು ಇದುವರೆಗೆ ಪಡೆದ ವೇತನವನ್ನು ಶೇ.12ರಷ್ಟು ಬಡ್ಡಿಯೊಂದಿಗೆ ಹಂತಿರುಗಿಸಬೇಕು ಎಂದು ಆದೇಶ ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
