ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ | ಪೂರ್ಣೇಶ್‌ ಮೋದಿಗೆ ಸುಪ್ರೀಂ ಕೋರ್ಟ್‌ ನೋಟಿಸ್

Date:

  • ರಾಹುಲ್‌ ಗಾಂಧಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್
  • ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಾಹುಲ್‌ ಮೇಲ್ಮನವಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್‌ ನೀಡಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಶುಕ್ರವಾರ (ಜು 21) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಪೂರ್ಣೇಶ್‌ ಮೋದಿ ಹಾಗೂ ಗುಜರಾತ್‌ ಸರ್ಕಾರಕ್ಕೆ ನೋಟಿಸ್‌ ನೀಡಿದೆ.

ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಅವರಿಗೆ ಎರಡು ವರ್ಷ ಶಿಕ್ಷೆ ವಿಧಿಸಿದ ಗುಜರಾತ್ ಸೂರತ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶಕ್ಕೆ ಗುಜರಾತ್‌ ಹೈಕೋರ್ಟ್‌ ತಡೆ ನೀಡಲು ನಿರಾಕರಿಸಿತ್ತು.

ರಾಹುಲ್‌ ಗಾಂಧಿ ಅವರು ಈ ಆದೇಶ ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠ ವಿಚಾರಣೆ ನಡೆಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಹುಲ್ ಅವರ ಅರ್ಜಿಗೆ ಸಂಬಂಧಿಸಿ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಮತ್ತು ಗುಜರಾತ್‌ ಸರ್ಕಾರಕ್ಕೆ ಪೀಠ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.

ರಾಹುಲ್ ಗಾಂಧಿ ಅವರ ಪರ ಹಾಜರಾದ ಹಿರಿಯ ವಕೀಲ ಎ ಎಂ ಸಿಂಘ್ವಿ ಮತ್ತು ವಕೀಲ ಪ್ರಸನ್ನ ಎಸ್, ಶಿಕ್ಷೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿರುವ ಗುಜರಾತ್‌ ಹೈಕೋರ್ಟ್‌ನ ಆದೇಶವನ್ನು ಪೀಠದ ಅವಗಾಹನೆಗೆ ತಂದರು.

“ಈ ಹಂತದಲ್ಲಿ ಪ್ರತಿವಾದಿಗಳ ವಾದವನ್ನು ಆಲಿಸದೆ ನಾವು ಹೇಗೆ ತೀರ್ಪು ನೀಡಲು ಸಾಧ್ಯ?” ಎಂದು ನ್ಯಾಯಮೂರ್ತಿ ಬಿ ಆರ್‌ ಗವಾಯಿ ಪ್ರಶ್ನಿಸಿದರು.

ಪ್ರಕರಣದಲ್ಲಿ ಪ್ರತಿವಾದಿಗಳು ತಮ್ಮ ಹೇಳಿಕೆ ನೀಡಲು ನೋಟಿಸ್‌ ನೀಡಿ ಪೀಠ ವಿಚಾರಣೆ ಮುಂದೂಡಿತು.

2019ರಲ್ಲಿ ಲೋಕಸಭೆಗೆ ನಡೆದ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ರಾಹುಲ್ ಅವರು ಅವರು ಏಪ್ರಿಲ್ 13ರಂದು ಕೋಲಾರದಲ್ಲಿ ಭಾಷಣ ಮಾಡಿದ್ದರು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, “ಎಲ್ಲ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ?” ಎಂದು ಪ್ರಶ್ನಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕುರುವೈ ಬೆಳೆಗೆ ಕಾವೇರಿ ನೀರು: ಕರ್ನಾಟಕ ಮನವೊಲಿಸಲು ಕೇಂದ್ರಕ್ಕೆ ಎಂ ಕೆ ಸ್ಟಾಲಿನ್ ಪತ್ರ

ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಅವರಿಗೆ ಎರಡು ವರ್ಷ ಶಿಕ್ಷೆ ವಿಧಿಸಿ ಆದೇಶಿಸಿತ್ತು. ಬಳಿಕ ರಾಹುಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಮ್ಯಾಜಿಸ್ಟ್ರೇಟ್‌ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ಸಲ್ಲಿಸಿದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಜುಲೈ 7 ರಂದು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ...

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ | ಅಗತ್ಯ ಬಿದ್ದರೆ ತನಿಖೆ ಎನ್‌ಐಎಗೆ ವಹಿಸುತ್ತೇವೆ: ಸಿಎಂ ಸಿದ್ದರಾಮಯ್ಯ

"ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ...

ಮೋದಿಯ ‘ದ್ರೋಹದ ಗ್ಯಾರಂಟಿ’; ರೈಲ್ವೆ ಪಾಲಿಸಿ ವಿರುದ್ಧ ರಾಹುಲ್ ಕಿಡಿ

ಕೇಂದ್ರ ರೈಲ್ವೆ ಸಚಿವಾಲಯವು ಹಿರಿಯ ನಾಗರಿಕರಿಗಿದ್ದ ವಿನಾಯತಿಯನ್ನೂ ಕಿತ್ತುಕೊಂಡು 3,700 ಕೋಟಿ...

ಪೋಲಿಯೊ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದನ್ನ ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ....