ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಯ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಿಸೋಡಿಯಾ ಅವರನ್ನು 2023ರ ಮಾರ್ಚ್‌ನಲ್ಲಿ ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿತ್ತು.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಈ ಮಹತ್ವದ ಘಟನೆಗಳು ಜುಲೈ 2022 ರಲ್ಲಿ ಪ್ರಾರಂಭವಾಯಿತು. 2022ರ ಜುಲೈ 22ರಂದು, ಎಲ್‌ಜಿ ವಿಕೆ ಸಕ್ಸೇನಾ ಅವರು ಹೊಸ ಅಬಕಾರಿ ನೀತಿಯ ಅನುಷ್ಠಾನದಲ್ಲಿ ಆಪಾದಿತ ನಿಯಮ ಉಲ್ಲಂಘನೆ ಮತ್ತು ಕಾರ್ಯವಿಧಾನದ ಲೋಪಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದರು. ಮದ್ಯದ ಪರವಾನಗಿದಾರರಿಗೆ ಅನಗತ್ಯ ಪ್ರಯೋಜನಗಳನ್ನು ನೀಡಲಾಗಿದೆ ಎಂದು ದೆಹಲಿಯ ಮುಖ್ಯ ಕಾರ್ಯದರ್ಶಿಯ ವರದಿ ಹೇಳಿತ್ತು. ಆಪಾದಿತ ಅಕ್ರಮಗಳಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಎಲ್‌ಜಿ ದೆಹಲಿಯ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದರು. ಚಿಲ್ಲರೆ ಮದ್ಯದ ಪರವಾನಗಿಗಾಗಿ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ‘ಕಾರ್ಟೆಲೈಸೇಶನ್’ ಬಗ್ಗೆ ದೂರು ನೀಡಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿನೇಶ್ ಫೋಗಟ್ ವಿದಾಯ ಮತ್ತು ದೇಶಭಕ್ತರ ದ್ವೇಷ
ದೆಹಲಿಯ ಅಬಕಾರಿ ನೀತಿ 2021-2022ಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಎಫ್‌ಐಆರ್‌ನಲ್ಲಿ 15 ವ್ಯಕ್ತಿಗಳನ್ನು ಹೆಸರನ್ನು ಉಲ್ಲೇಖಿಸಿದ್ದು, ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಸಿಸೋಡಿಯಾ ಹೆಸರು ಕೇಳಿ ಬಂದಿತ್ತು. ಎಲ್-ಜಿ ಕಚೇರಿಯಿಂದ ನೀಡಲಾದ ಜ್ಞಾಪಕ ಪತ್ರದಲ್ಲಿ ಆರೋಪಗಳನ್ನು ಉಲ್ಲೇಖಿಸಿ ಎಫ್‌ಐಆರ್‌ನಲ್ಲಿ ಸಿಸೋಡಿಯಾ ಸೇರಿ ವಿಜಯ್ ನಾಯರ್, ಮನರಂಜನಾ ಮತ್ತು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಮಾಜಿ ಸಿಇಒ, ಓನ್ಲಿ ಮಚ್ ಲೌಡರ್, ಮನೋಜ್ ರೈ, ವೈನ್ ಮತ್ತು ಸ್ಪಿರಿಟ್ಸ್ ದೈತ್ಯ ಪೆರ್ನಾಡ್ ರಿಕಾರ್ಡ್‌ನ ಮಾಜಿ ಉದ್ಯೋಗಿ ಅಮನ್‌ದೀಪ್ ಧಾಲ್, ಬ್ರಿಂಡ್ಕೊ ಸ್ಪಿರಿಟ್ಸ್‌ನ ಮಾಲೀಕ ಮತ್ತು ಇಂಡೋಸ್ಪಿರಿಟ್‌ನ ಮಾಲೀಕ ಸಮೀರ್ ಮಹೇಂದ್ರು ಅವರು ಹೆಸರು ಇದೆ. ಆಗಸ್ಟ್ 2022 ರಲ್ಲೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿತ್ತು.
ಜುಲೈ 31ರಂದು ಹೊಸ ಅಬಕಾರಿ ನೀತಿ ರದ್ದು ಆಮ್ ಆದ್ಮಿ ಪಕ್ಷದ (ಎಎಪಿ) ಮಹತ್ವಾಕಾಂಕ್ಷೆಯ ದೆಹಲಿ ಅಬಕಾರಿ ನೀತಿಯನ್ನು 31 ಜುಲೈ 2022 ರಂದು ರದ್ದುಗೊಳಿಸಲಾಗಿತ್ತು. ಹೊಸ ನೀತಿಯನ್ನು ರದ್ದುಗೊಳಿಸಿದ ನಂತರ, ದೆಹಲಿ ಸರ್ಕಾರವು ನವೆಂಬರ್ 17, 2020 ರ ಮೊದಲು ಜಾರಿಗೆ ತಂದ ಹಳೆಯ ಅಬಕಾರಿ ಆಡಳಿತವನ್ನು ಮರಳಿ ತರಲು ನಿರ್ಧರಿಸಿತ್ತು. ಖಾಸಗಿಯವರಿಗೆ ಅನುಕೂಲ ಮಾಡಿಕೊಡುವ ಈ ನೀತಿಯಲ್ಲಿ ಸಾವಿರಾರು ಕೋಟಿ ರೂ ಅವ್ಯವಹಾರ ನಡೆದಿದೆ ಎಂದು ಹೇಳಲಾಗಿದೆ. ಇದರಲ್ಲಿ ದೆಹಲಿ ಸರ್ಕಾರದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಮಾತ್ರವಲ್ಲದೆ, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಮಗಳು ಕೆ ಕವಿತಾ ಮತ್ತು ಅವರ ಆಪ್ತರ ಹೆಸರು ಕೂಡ ಇದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಇ.ಡಿ ಹಾಗೂ ಸಿಬಿಐ ಬಂಧಿಸಿದೆ.