ಒಂದು ಕೈಯಲ್ಲಿ ಚಪ್ಪಾಳೆ ತಟ್ಟಲಾಗದು: ಅತ್ಯಾಚಾರ ಪ್ರಕರಣದ ಆರೋಪಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

Date:

Advertisements

ಸುಮಾರು 40 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ 23 ವರ್ಷದ ಆರೋಪಿಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ನೀಡಿದೆ. “ಆರೋಪಿ ಒಂಬತ್ತು ತಿಂಗಳಿನಿಂದ ಜೈಲಿನಲ್ಲಿದ್ದರೂ ಸರಿಯಾಗಿ ಆರೋಪ ಹೊರಿಸಲಾಗಿಲ್ಲ. ಅಷ್ಟಕ್ಕೂ ಮಹಿಳೆ ಮಗುವಲ್ಲ. ಒಂಟಿ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಜಾಮೀನು ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಆರೋಪಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ ಮಾಡಿದೆ. ಮಹಿಳೆ ತನ್ನ ಇಚ್ಚೆಯಂತೆಯೇ ಆರೋಪಿ ಜೊತೆಗೆ ಹೋಗಿದ್ದಾಗ ದೆಹಲಿ ಪೊಲೀಸರು ಆ ವ್ಯಕ್ತಿಯ ಮೇಲೆ ಹೇಗೆ ಅತ್ಯಾಚಾರ ಪ್ರಕರಣ ದಾಖಲಿಸಬಹುದು ಎಂದು ಪ್ರಶ್ನಿಸಿದೆ.

ಇದನ್ನು ಓದಿದ್ದೀರಾ? ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ ಕೋರ್ಟ್

Advertisements

“ಒಂದು ಕೈಯಲ್ಲಿ ಚಪ್ಪಾಳೆ ತಟ್ಟಲಾಗದು. ನೀವು ಯಾವ ಆಧಾರದ ಮೇಲೆ ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೀರಿ? ಆಕೆ ಮಗುವಲ್ಲ. ಮಹಿಳೆಗೆ 40 ವರ್ಷ. ಅವರು ಜೊತೆಯಾಗಿ ತಮ್ಮ ಇಚ್ಚೆಯಂತೆ ಜಮ್ಮುವಿಗೆ ಹೋಗಿದ್ದಾರೆ. ಹಾಗಿರುವಾಗ ನೀವು 376 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ಹೇಗೆ? ಈ ಮಹಿಳೆ ಜಮ್ಮುವಿಗೆ ಏಳು ಬಾರಿ ಹೋಗಿದ್ದು ಆ ವಿಚಾರದಲ್ಲಿ ಆಕೆಯ ಪತಿಗೆ ಯಾವುದೇ ತೊಂದರೆಯಿಲ್ಲ” ಎಂದು ಪೀಠ ಹೇಳಿದೆ.

“ಆರೋಪಿಯನ್ನು ವಿಚಾರಣಾ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು. ನಿಯಮ, ಷರತ್ತು ಅನ್ವಯಿಸಿ ಮಧ್ಯಂತರ ಜಾಮೀನು ನೀಡಬೇಕು. ಆತ ತನ್ನ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಬಾರದು. ಮಹಿಳೆಯನ್ನು ಸಂಪರ್ಕಿಸಲು ಪ್ರಯತ್ನಿಸಬಾರದು” ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಇದು ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶವಾದರೂ ಸದ್ಯ ಚರ್ಚೆಗೆ ಗ್ರಾಸವಾಗುತ್ತಿದೆ.

ಏನಿದು ಪ್ರಕರಣ?

ಮಹಿಳೆ ಮೊದಲು 2021ರಲ್ಲಿ ತನ್ನ ಬಟ್ಟೆ ಬ್ರ್ಯಾಂಡ್ ಅನ್ನು ಪ್ರಚಾರ ಮಾಡುವ ಸಲುವಾಗಿ ಸಾಮಾಜಿಕ ಮಾಧ್ಯಮದಲ್ಲಿ ಆರೋಪಿಯ ಸಂಪರ್ಕ ಮಾಡಿದ್ದಾರೆ. ಆರಂಭದಲ್ಲಿ ಆರೋಪಿ ಬ್ರ್ಯಾಂಡ್ ಪ್ರಚಾರಕ್ಕಾಗಿ ಐಪೋನ್ ನೀಡುವಂತೆ ಮಹಿಳೆ ಬಳಿ ವಿನಂತಿಸಿದ್ದು ಮಹಿಳೆ ಜಮ್ಮುವಿನ ಅಧಿಕೃತ ಆಪಲ್ ಸ್ಟೋರ್ ಮೂಲಕ ಖರೀದಿಸಿಕೊಟ್ಟಿದ್ದಾರೆ.

ಆದರೆ ಆರೋಪಿ ಈ ಫೋನ್ ಅನ್ನು ಮರು ಮಾರಾಟ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕೊನೆಗೆ ಮಾರಾಟಗಾರ ಮಹಿಳೆಯ ಖಾತೆಗೆ ಹಣ ಜಮೆ ಮಾಡಿದ್ದಾನೆ, ಆದರೆ ಸುಮಾರು 20 ಸಾವಿರ ರೂಪಾಯಿ ಕಡಿತಗೊಳಿಸಿದ್ದಾನೆ. ಆತ ಹಣವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದರೂ ಆಕೆ ಆತನೊಂದಿಗೆ ಎಲ್ಲಾ ಸಂಬಂಧವನ್ನು ಕೊನೆಗೊಳಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಕರಣ: ಮಧ್ಯಂತರ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

2021ರ ಡಿಸೆಂಬರ್‌ನಲ್ಲಿ ಆರೋಪಿ ನೋಯ್ಡಾದಲ್ಲಿರುವ ಮಹಿಳೆಯ ಮನೆಗೆ 20 ಸಾವಿರ ರೂಪಾಯಿಗಳನ್ನು ಹಿಂದಿರುಗಿಸಿ ಕ್ಷಮೆ ಕೇಳಲೆಂದು ಭೇಟಿ ನೀಡಿದ್ದಾರೆ. ಹಾಗೆಯೇ ಬ್ರ್ಯಾಂಡ್ ಪ್ರಚಾರದ ಚಿತ್ರೀಕರಣಕ್ಕೆ ತೆರಳುವಂತೆ ಮನವೊಲಿಸಿದ್ದಾನೆ. ಪ್ರಯಾಣದ ವೇಳೆ ಆರೋಪಿ ಮಾದಕ ದ್ರವ್ಯವಿದ್ದ ಸಿಹಿತಿಂಡಿ ತಿನಿಸಿ ಆಕೆ ಪ್ರಜ್ಞೆ ಕಳೆದುಕೊಳ್ಳುತ್ತಿದ್ದಾಗ ಆಸ್ಪತ್ರೆಗೆ ಕರೆದೊಯ್ಯುವುದಾಗಿ ಹೇಳಿ ಆಸ್ಪತ್ರೆಯ ಹಿಂದಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ಆಕೆಯ ಪರ್ಸ್‌ನಿಂದ ಹಣವನ್ನು ಕದ್ದಿರುವುದಾಗಿ, ನಗ್ನ ಛಾಯಾಚಿತ್ರಗಳನ್ನು ಸೆರೆಹಿಡಿದಿರುವುದಾಗಿ ಆರೋಪಿಸಲಾಗಿದೆ.

ನಂತರ ಜಮ್ಮುವಿಗೆ ಪ್ರಯಾಣಿಸುವಂತೆ ಮಹಿಳೆಯ ಮನವೊಲಿಸಿ ಅಲ್ಲಿ ಎರಡೂವರೆ ವರ್ಷಗಳ ಕಾಲ ನಿರಂತರ ಲೈಂಗಿಕ ದೌರ್ಜನ್ಯ, ಸುಲಿಗೆ ಮಾಡಿರುವುದಾಗಿ ಮತ್ತು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(ಅತ್ಯಾಚಾರ), 354(ಮಹಿಳೆಯ ಮೇಲೆ ಹಲ್ಲೆ), 323(ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506(ಕ್ರಿಮಿನಲ್ ಬೆದರಿಕೆ), 509 (ಮಹಿಳೆಯ ಘನತೆಗೆ ಧಕ್ಕೆ) ಮತ್ತು 34ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X