‘ಲಕ್ಷಾಂತರ ಜನರ ಹಕ್ಕು ಕಿತ್ತುಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ’: SIR ತೀರ್ಪಿಗೆ ಅರ್ಜಿದಾರರ ಆಕ್ರೋಶ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ನಿರ್ಧಾರವು ಸಾಂವಿಧಾನಿಕವಾಗಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ನ್ಯಾಯಾಲಯದ ಈ ತೀರ್ಪನ್ನು ಅರ್ಜಿದಾರರು ಖಂಡಿಸಿದ್ದಾರೆ. “ಎಸ್‌ಐಆರ್‌ ಪ್ರಕ್ರಿಯೆಯು ಅಸ್ಸಂಬದ್ಧದಿಂದ ಕೂಡಿದ, ಉದ್ವೇಗದ ಹಾಗೂ ತಾರತಮ್ಯದ ಪ್ರಕ್ರಿಯೆಯಾಗಿದೆ. ಇದು ಲಕ್ಷಾಂತರ ಮತದಾರರ ಹಕ್ಕನ್ನು ಕಸಿದುಕೊಳ್ಳುತ್ತದೆ. ಈ ಜನವಿರೋಧಿ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌ ಅಧಿಕೃತ ಮುದ್ರೆ ಒತ್ತಿದೆ. ಜನರ ಹಕ್ಕು ಕಸಿದುಕೊಳ್ಳಲು ಅನುಮತಿ ನೀಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಕಳೆದ ವರ್ಷ ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಆರಂಭವಾದ, ಈ ಪ್ರಕ್ರಿಯೆಯನ್ನು ಪ್ರಶ್ನಿಸಿ ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್’ (ADR) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಅನಿಲ್ ವರ್ಮಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಎಸ್‌ಐಆರ್‌ ಮತ್ತು ಈ ಪ್ರಕ್ರಿಯೆಯಲ್ಲಿನ ಚುನಾವಣಾ ಆಯೋಗದ ಕ್ರಮಗಳನ್ನು ಸಮ್ಮತಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಸುಪ್ರೀಂ ಕೋರ್ಟ್‌ ತೀರ್ಪಿಗೆ ಪ್ರತಿಕ್ರಿಯಿಸಿರುವ ಅನಿಲ್ ವರ್ಮಾ, “ನ್ಯಾಯಾಲಯದ ಈ ತೀರ್ಪು ಅತ್ಯಂತ ನಿರಾಶಾದಾಯಕವಾಗಿದೆ” ಎಂದಿದ್ದಾರೆ.

ಇದೇ ಎಸ್‌ಐಆರ್‌ ವಿರುದ್ಧ ಮತ್ತೊಂದು ಅರ್ಜಿ ಸಲ್ಲಿಸಿದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, “ಬಿಹಾರದ ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪು, ಚುನಾವಣಾ ಆಯೋಗದ ತರ್ಕಹೀನ, ಆತುರದ ಹಾಗೂ ತಾರತಮ್ಯದ ಕಾರ್ಯಾಚರಣೆಗೆ ಒಪ್ಪಿಗೆ ನೀಡಿದಂತಾಗಿದೆ. ಇಂತಹ ಕ್ರಮಗಳಿಂದಾಗಿ, ಪಶ್ಚಿಮ ಬಂಗಾಳದ ಬರೋಬ್ಬರಿ 27 ಲಕ್ಷ ಎಲ್ಲ ದಾಖಲೆಗಳುಳ್ಳ ಮತದಾರರು ಮತ ಚಲಾಯಿಸಲು ಸಾಧ್ಯವಾಗದೆ ವಂಚಿತರಾಗಿದ್ದಾರೆ. ಅವರ ಭವಿಷ್ಯ ಈಗಲೂ ಅನಿಶ್ಚಿತತೆಯಲ್ಲಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

“ನ್ಯಾಯವು ಕೇವಲ ಸಿಗುವುದಷ್ಟೇ ಅಲ್ಲ, ಅದು ಸಿಕ್ಕಿದೆ ಎಂಬುದು ಎಲ್ಲರಿಗೂ ಕಾಣಿಸುವಂತಿರಬೇಕು” ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಕನ್ನಡಿಗರೇ ಗಮನಿಸಿ: ನಿಮ್ಮ ಗ್ಯಾರಂಟಿ ಯೋಜನೆ, ಸರ್ಕಾರಿ ಸೌಲಭ್ಯಗಳನ್ನೂ ಕಸಿದುಕೊಳ್ಳುತ್ತದೆ ‘ಎಸ್‌ಐಆರ್’

ಮತ್ತೊಬ್ಬ ಅರ್ಜಿದಾರರಾದ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್, “ಈ ಪ್ರಕರಣದ ಭವಿಷ್ಯ ಕಳೆದ ವರ್ಷ ಆಗಸ್ಟ್‌ನಲ್ಲೇ ನಿರ್ಧಾರವಾಗಿತ್ತೆಂದು ಅನ್ನಿಸುತ್ತಿತ್ತು. ಈ ಪ್ರಕರಣದಲ್ಲಿ ಯಾವುದೇ ಅಂತಿಮ ತೀರ್ಪು ನೀಡದೇ, ಪ್ರಕ್ರಿಯೆಯಲ್ಲಿನ ಅತ್ಯಂತ ಗಂಭೀರವಾದ ದೋಷಗಳನ್ನು ಸರಿಪಡಿಸುವಂತೆ ಚುನಾವಣಾ ಆಯೋಗಕ್ಕೆ ಯಾವುದೇ ಕಡ್ಡಾಯ ಆದೇಶ ನೀಡದೆಯೇ ಬಿಹಾರ ವಿಧಾನಸಭಾ ಚುನಾವಣೆಯನ್ನು ಆತುರವಾಗಿ ನಡೆಸಲು ಆಯೋಗಕ್ಕೆ ಅನುಮತಿ ನೀಡಿದಾಗಲೇ ಈ ಪ್ರಕರಣದ ಹಣೆಬರಹ ನಿರ್ಧಾರವಾಗಿತ್ತು” ಎಂದಿದ್ದಾರೆ.

“ಯಾವುದೇ ಕಾನೂನು ಜಟಿಲತೆಗಳಿಲ್ಲದೆ ಸರಳವಾಗಿ ಹೇಳಬೇಕೆಂದರೆ, ಸಾಂವಿಧಾನಿಕ ಪ್ರಜಾಪ್ರಭುತ್ವದ ಅತ್ಯುನ್ನತ ನ್ಯಾಯಾಲಯವು ದೇಶದ ಲಕ್ಷಾಂತರ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಅಧಿಕಾರ ನೀಡಿದೆ. ಇದುವರೆಗೆ ಕನಿಷ್ಠ 5.9 ಕೋಟಿ ಜನರು ಈ ಹಕ್ಕಿನಿಂದ ವಂಚಿತರಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ 10 ಕೋಟಿಗೆ ಏರಿಕೆಯಾಗುವ ಸಾಧ್ಯತೆಯಿದೆ” ಎಂದು ಯಾದವ್ ಆತಂಕ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗವು ಕಳೆದ ವರ್ಷ ಜುಲೈನಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭಿಸಿತ್ತು. ನಂತರ, 2025ರ ನವೆಂಬರ್‌ನಲ್ಲಿ ಪಶ್ಚಿಮ ಬಂಗಾಳ ಸೇರಿದಂತೆ ಇತರ 12 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೊಳಿಸಿತು. ಈ ಒಟ್ಟು 13 ರಾಜ್ಯಗಳಲ್ಲಿ ಬರೋಬ್ಬರಿ 5.9 ಕೋಟಿ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ. ಇದೀಗ, 16 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ಆರಂಭಿಸುವುದಾಗಿ ಆಯೋಗ ಘೋಷಿಸಿದೆ. ಈ ಪೈಕಿ, ಕರ್ನಾಟಕದಲ್ಲಿಯೂ ಕನಿಷ್ಠ 85 ಲಕ್ಷ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...