ತಮ್ಮ ಆಸ್ತಿ ವಿವರವನ್ನು ಕೋರ್ಟ್‌ ವೆಬ್‌ಸೈಟ್‌ನಲ್ಲಿ ಹಂಚಿಕೊಳ್ಳಲು ಸುಪ್ರೀಂ ನ್ಯಾಯಾಧೀಶರ ನಿರ್ಧಾರ

Date:

ಸುಪ್ರೀಂ ಕೋರ್ಟ್‌ನ ಎಲ್ಲ 33 ಹಾಲಿ ನ್ಯಾಯಾಧೀಶರು ತಮ್ಮ ಆಸ್ತಿಗಳ ವಿವರಗಳನ್ನು ಸರ್ವೋಚ್ಛ ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸುವ ಮೂಲಕ ಸಾರ್ವಜನಿಕವಾಗಿ ಬಹಿರಂಗಪಡಿಸಲು ಒಪ್ಪಿಕೊಂಡಿದ್ದಾರೆ. ಈ ಮೂಲಕ ನ್ಯಾಯಾಧೀಶರು ಪಾರದರ್ಶಕತೆ ತೋರಿಸಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ.

- Advertisement -

ಏಪ್ರಿಲ್ 1 ರಂದು ನಡೆದ ನ್ಯಾಯಾಲಯದ ಪೂರ್ಣ ನ್ಯಾಯಾಧೀಶರ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ನಿರ್ಣಯವನ್ನು ಅಂಗೀಕರಿಸಲಾಗಿದೆ. ಈ ನಿರ್ಧಾರವು ಭವಿಷ್ಯದಲ್ಲಿ ಸುಪ್ರೀಂ ಕೋರ್ಟ್‌ಗೆ ನೇಮಕವಾಗುವ ನ್ಯಾಯಾಧೀಶರಿಗೂ ಅನ್ವಯಿಸುತ್ತದೆ ಎಂದು ಕೋರ್ಟ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಅಪಾರದರ್ಶಕತೆ ಇದೆ ಎಂಬ ಇತ್ತೀಚಿನ ಆರೋಪಗಳು ಮತ್ತು ವಿವಾದಗಳು ಹಾಗೂ ವಿಶೇಷವಾಗಿ ಪ್ರಸ್ತುತ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ ಎಂದು ವರದಿಯಾದ ಬಳಿಕ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ವರದಿ ಓದಿದ್ದೀರಾ?: ಸುಪ್ರೀಂ ಕೋರ್ಟ್‌ ತೀರ್ಪು ಮತ್ತು ‘ಬುಲ್ಡೋಜರ್ ನ್ಯಾಯ’: ದಂಡನೆಯ ಹೆಸರಿನಲ್ಲಿ ದ್ವೇಷ ಸಾಧನೆ

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಆಸ್ತಿಗಳನ್ನು ಪ್ರಕಟಿಸುವುದು ಈ ಹಿಂದೆ ಕಡ್ಡಾಯವಾಗಿರಲಿಲ್ಲ. ಆದರೆ, ಅದು ನ್ಯಾಯಾಧೀಶನ ವಿವೇಚನೆಗೆ ಒಳಪಟ್ಟಿತ್ತು. ನ್ಯಾಯಾಧೀಶರು ತಮ್ಮ ಇಚ್ಛೆಯಂತೆ ವೆಬ್‌ಸೈಟ್‌ನಲ್ಲಿ ತಮ್ಮ ಆಸ್ತಿಯ ವಿವರಗಳನ್ನು ಬಹಿರಂಗಪಡಿಸಬಹುದಿತ್ತು.

1997ರಲ್ಲಿ ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಧೀಶರ ಸಭೆಯು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ತಮ್ಮ ಆಸ್ತಿಗಳ ಕುರಿತ ವರದಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ)ಗೆ ಸಲ್ಲಿಸುವುದು ಕಡ್ಡಾಯವೆಂದು ನಿರ್ಧರಿಸಿತ್ತು. ಆನಂತರ, 2009ರಲ್ಲಿ ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಾಧೀಶರ ಸಭೆಯು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು. ಆ ವರ್ಷದ ಆಗಸ್ಟ್‌ 26ರಂದು, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಸ್ತಿಗಳ ವಿವರಗಳನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೂ, ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಆಸ್ತಿ ವಿವರ ಅಪ್‌ಲೋಡ್‌ ಮಾಡುವುದು ನ್ಯಾಯಾಧೀಶರ ವಿವೇಚನೆಯಂತೆಯೇ ನಡೆಯುತ್ತಿತ್ತು. ಇದೀಗ, ಆಸ್ತಿ ಘೋಷಿಸುವುದನ್ನು ಕಡ್ಡಾಯವೆಂದು ನಿರ್ಧರಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...