ಅಧಿಕಾರಿಗಳ ಅಮಾನವೀಯ ವರ್ತನೆ: ಇ.ಡಿ ವಿರುದ್ಧ ಸುಪ್ರೀಂ ಕೋರ್ಟ್ ತರಾಟೆ

Date:

ಕಾಂಗ್ರೆಸ್‌ ನಾಯಕರೊಬ್ಬರನ್ನು ಮಧ್ಯರಾತ್ರಿ ಕಳೆದರೂ ಸುಮಾರು 15 ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಮಾನವೀಯ ವರ್ತನೆಯನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅದರ ತನಿಖಾ ವಿಧಾನದ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದೆ.

- Advertisement -

ಹೇಳಿಕೆ ನೀಡುವಂತೆ ಇ.ಡಿ ವ್ಯಕ್ತಿಯೊಬ್ಬರ ಮೇಲೆ ಅಕ್ಷರಶಃ ಒತ್ತಡವನ್ನು ಹೇರಿದ್ದು ಆಘಾತಕಾರಿಯಾಗಿದೆ ಎಂದು ಗುರುವಾರ ವಿಚಾರಣೆ ಸಂದರ್ಭದಲ್ಲಿ ಹೇಳಿದ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಮತ್ತು ಎ.ಜಿ.ಮಸಿಹ್ ಅವರ ಪೀಠವು, ಕಾನೂನುಬಾಹಿರ ಗಣಿಗಾರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯಿಂದ ಹರಿಯಾಣದ ಮಾಜಿ ಕಾಂಗ್ರೆಸ್ ಶಾಸಕ ಸುರೇಂದ್ರ ಪನ್ವಾರ್ ಅವರ ಬಂಧನವನ್ನು ರದ್ದುಗೊಳಿಸಿದ್ದನ್ನು ಎತ್ತಿ ಹಿಡಿಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ಇ.ಡಿ ಜುಲೈನಲ್ಲಿ ಸುಮಾರು 15 ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಮಧ್ಯರಾತ್ರಿ 1.40ಕ್ಕೆ ಪನ್ವಾರ್‌ರನ್ನು ಬಂಧಿಸಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಪನ್ವಾರ್ ಅವರ ಬಂಧನವನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇ.ಡಿ. ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ಗೆಲುವನ್ನು ಮಾರ್ಕೆಟಿಂಗ್ ಮಾಡಿಕೊಳ್ಳಬೇಕೇ ಸರ್ಕಾರ?

ಇ.ಡಿ ಪರ ವಕೀಲ ರೆಹೆಬ್ ಹುಸೇನ್ ಅವರು, ಹೈಕೋರ್ಟ್ ಪನ್ವಾರ್‌ರನ್ನು 14 ಗಂಟೆ 40 ನಿಮಿಷಗಳ ಕಾಲ ನಿರಂತರವಾಗಿ ಪ್ರಶ್ನಿಸಲಾಗಿತ್ತು ಎಂದು ತನ್ನ ಆದೇಶದಲ್ಲಿ ತಪ್ಪಾಗಿ ದಾಖಲಿಸಿದೆ. ವಿಚಾರಣೆ ಸಂದರ್ಭದಲ್ಲಿ ಅವರಿಗೆ ಭೋಜನ ವಿರಾಮವನ್ನು ನೀಡಲಾಗಿತ್ತು ಎಂದು ಹೇಳಿದರು. ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ಜನರನ್ನು ನಸುಕಿನ ವೇಳೆಯಲ್ಲಿ ವಿಚಾರಣೆಗೆ ಒಳಪಡಿಸದಿರಲು ಇ.ಡಿ ಈಗಾಗಲೇ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ಸುಪ್ರಿಂ ಕೋರ್ಟ್‌ಗೆ ಮನವರಿಕೆ ಮಾಡಿದರು.

ಇ.ಡಿ ವಾದವನ್ನು ತಿರಸ್ಕರಿಸಿದ ಪೀಠವು, ವ್ಯಕ್ತಿಗೆ ವಿರಾಮವನ್ನು ನೀಡದೆ ಇಷ್ಟೊಂದು ದೀರ್ಘ ಅವಧಿಗೆ ವಿಚಾರಣೆ ನಡೆಸುವ ಮೂಲಕ ಚಿತ್ರಹಿಂಸೆ ನೀಡಲು ಹೇಗೆ ಸಾಧ್ಯ ಎಂದು ತನಿಖಾ ಸಂಸ್ಥೆಯನ್ನು ಪ್ರಶ್ನಿಸಿತು. ಆದಾಗ್ಯೂ ಹೈಕೋರ್ಟ್ ಆದೇಶವು ಜಾಮೀನು ಮಂಜೂರು ಮಾಡುವ ವಿಷಯಕ್ಕೆ ಮಾತ್ರ ಸಂಬಂಧಿಸಿವೆಯೇ ಹೊರತು ಪ್ರಕರಣದ ಅರ್ಹತೆಗಲ್ಲ ಎಂದು ಅದು ಸ್ಪಷ್ಟಪಡಿಸಿತು.

ಜು.19ರಂದು ಬೆಳಿಗ್ಗೆ 11 ಗಂಟೆಗೆ ಇ.ಡಿ ಕಚೇರಿಯಲ್ಲಿ ಹಾಜರಾಗಿದ್ದ ಪನ್ವಾರ್‌ರನ್ನು ಜು.21ರ ಮಧ್ಯರಾತ್ರಿ 1.40 ಗಂಟೆಯವರಗೆ ನಿರಂತರವಾಗಿ ವಿಚಾರಣೆ ನಡೆಸಿದ್ದು ತನಿಖಾ ಸಂಸ್ಥೆಯ ಅಮಾನವೀಯ ನಡೆಯಾಗಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು. ಹಾಗೆಯೇ ಇ.ಡಿ ತನ್ನ ತನಿಖಾ ವಿಧಾನವನ್ನು ಬದಲಿಸಿಕೊಳ್ಳುವ ಅಗತ್ಯವಿದೆ ಎಂದು ನಿರ್ದೇಶನ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ 2027 |ಸೀಟು ಹಂಚಿಕೆ ಮಾತುಕತೆ ನಡುವೆಯೇ ಎಸ್‌ಪಿ ಐದು ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕಾಂಗ್ರೆಸ್‌ ಜೊತೆ ಸೀಟು ಹಂಚಿಕೆ ಮಾತುಕತೆ ನಡುವೆಯೇ, ಸಮಾಜವಾದಿ ಪಕ್ಷ ಮಂಗಳವಾರ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ...

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...