ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಕಾರ: ಸುಪ್ರೀಂ ಕೋರ್ಟ್ ವಕೀಲರ ತಕರಾರು

Date:

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದ್ದು, ಕೋರ್ಟ್‌ನ ಈ ನಿರ್ಧಾರದ ಬಗ್ಗೆ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಸಂಜಯ್ ಆರ್. ಹೆಗ್ಡೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisement -

ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನೀಡಿಲ್ಲ. ಪ್ರಕರಣದ ಇತರ ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಂ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನು ಓದಿದ್ದೀರಾ? ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ

ಉಮರ್ ಮತ್ತು ಇಮಾಮ್‌ಗೆ ಜಾಮೀನು ನೀಡದ ಸುಪ್ರೀಂ, “ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯೇ ಹೆಚ್ಚು ಮುಖ್ಯವಾದುದು. ಇತರ ಆರೋಪಿಗಳಿಗೆ ಹೋಲಿಸಿದರೆ ಇವರಿಬ್ಬರ ಪಾತ್ರ ಭಿನ್ನವಾದುದ್ದು” ಎಂದು ಹೇಳಿದೆ.

ಸುಪ್ರೀಂನ ಈ ಆದೇಶದ ಬಗ್ಗೆ ತಕರಾರು ವ್ಯಕ್ತಪಡಿಸಿರುವ ವಕೀಲ ಸಂಜಯ್ ಆರ್. ಹೆಗ್ಡೆ, “ನಾನು ಭಿನ್ನಾಭಿಪ್ರಾಯ ಹೊಂದಿದ್ದೇನೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೆಯೇ “ಅಂತಿಮ ಹಂತದ ನ್ಯಾಯಾಲಯದಲ್ಲಿನ ಭಿನ್ನಾಭಿಪ್ರಾಯವು ಕಾನೂನಿನ ಆಳವಾದ ಚೇತನಕ್ಕೆ ಮತ್ತು ಭವಿಷ್ಯದ ಬುದ್ಧಿವಂತಿಕೆಗೆ ಮಾಡುವ ಮನವಿಯಾಗಿದೆ. ಆ ಭವಿಷ್ಯದ ದಿನದಂದು ಕಾನೂನಿನ ತಪ್ಪುಗಳನ್ನು ತಿದ್ದುವ ಸಾಧ್ಯತೆ ಇರುತ್ತದೆ ಎಂದು ನ್ಯಾಯಾಧೀಶರು ನಂಬುತ್ತಾರೆ; ಯಾವ ತಪ್ಪುಗಳಿಗೆ ನ್ಯಾಯಾಲಯವು ಬಲಿಯಾಗಿದೆ ಎಂದು ಭಿನ್ನಾಭಿಪ್ರಾಯ ಹೊಂದಿರುವ ನ್ಯಾಯಾಧೀಶರು ಭಾವಿಸುತ್ತಾರೋ, ಅವುಗಳನ್ನು ಸರಿಪಡಿಸುವ ಆಶಯವದು” ಎಂಬ ಅಮೆರಿಕದ ಪ್ರಮುಖ ರಾಜಕೀಯ ಮುತ್ಸದ್ದಿ ಮತ್ತು ನ್ಯಾಯಶಾಸ್ತ್ರಜ್ಞ, ನ್ಯಾಯಮೂರ್ತಿ ಚಾರ್ಲ್ಸ್ ಇವಾನ್ಸ್ ಹ್ಯೂಸ್ ಹೇಳಿಕೆಯನ್ನೂ ಉಲ್ಲೇಖಿಸಿದ್ದಾರೆ.

ಚಾರ್ಲ್ಸ್ ಇವಾನ್ಸ್ ಹ್ಯೂಸ್ ಅವರು ನ್ಯಾಯಾಲಯದ ತೀರ್ಪಿಗೆ ಭಿನ್ನಾಭಿಪ್ರಾಯ ವ್ಯಕ್ತವಾಗುವ ಬಗ್ಗೆ ಹೇಳಿಕೆ ನೀಡುತ್ತಾ, “ಇಂದಿನ ಬಹುಮತದ ತೀರ್ಪು ತಪ್ಪಾಗಿರಬಹುದು ಮತ್ತು ಭವಿಷ್ಯದ ಪೀಳಿಗೆಯು ಅದನ್ನು ಸರಿಪಡಿಸಬಹುದು” ಎಂಬ ಆಶಯದೊಂದಿಗೆ “ಭವಿಷ್ಯದ ಬುದ್ಧಿವಂತಿಕೆಗೆ ಮಾಡುವ ಮನವಿ” (ಭವಿಷ್ಯದ ಬುದ್ಧಿವಂತರು ಸರಿಪಡಿಸಲು ಮನವಿ) ಎಂಬ ವಾಕ್ಯ ಬಳಸಿದ್ದರು. ಇದೀಗ ಈ ಹೇಳಿಕೆ ಉಲ್ಲೇಖಿಸುವ ಮೂಲಕ ಇಂದಿನ ತಪ್ಪಾದ ತೀರ್ಪನ್ನು ಮುಂದಿನ ಪೀಳಿಗೆ ಸರಿಪಡಿಸಬಹುದು ಎಂಬ ಭರವಸೆಯನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಸಂಜಯ್ ಆರ್. ಹೆಗ್ಡೆ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...

ಸಿಜೆಪಿ ಪ್ರತಿಭಟನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

SIR | ಸಿಜೆಪಿ ಪ್ರತಿಭಟನೆ – ದೆಹಲಿ ದಿಗ್ಭಂದನ; ‘ಸರ್ಕಾರದ ದಮನ ತುರ್ತು ಪರಿಸ್ಥಿತಿಗಿಂತಲೂ ಭೀಕರವಾಗಿದೆ’: ಅಭಿಜಿತ್ ದೀಪ್ಕೆ ಕಿಡಿ

ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿರುವ ಎಸ್‌ಐಆರ್...