ರೈತರ ವಿರುದ್ಧ ಕ್ರಮ ಕೈಗೊಳ್ಳುವಂತೆ ‘ಸುಪ್ರೀಂ’ ಮುಖ್ಯ ನ್ಯಾಯಾಧೀಶರಿಗೆ ವಕೀಲರಿಂದ ಪತ್ರ

Date:

ದೆಹಲಿ ಚಲೋ ಪ್ರತಿಭಟನೆ ನಡೆಸಲು ಮುಂದಾಗಿರುವ ರೈತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್(ಎಸ್‌ಸಿಬಿಎ) ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದೆ.

- Advertisement -

ದೆಹಲಿಯಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ರಾಷ್ಟ್ರ ರಾಜಧಾನಿಯತ್ತ ಉತ್ತರ ಪ್ರದೇಶ, ಪಂಜಾಬ್ ಹಾಗೂ ಹರಿಯಾಣದಿಂದ ಪ್ರಯಾಣ ನಡೆಸುತ್ತಿರುವ ತಪ್ಪಿತಸ್ಥ ರೈತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್‌ಸಿಬಿಎ ಅಧ್ಯಕ್ಷ ಆದೀಶ್ ಅಗರ್‌ವಾಲಾ ಮುಖ್ಯ ನ್ಯಾಯಾಧೀಶರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪ್ರತಿಭಟನೆಯಿಂದ ನ್ಯಾಯಲಯದ ವಿಚಾರಣೆಗಳಿಗೆ ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಕಾರಣದಿಂದ ಕಲಾಪಗಳಿಗೆ ವಕೀಲರು ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಯಾವುದೇ ಪ್ರತಿಕೂಲ ಆದೇಶಗಳನ್ನು ನೀಡಬಾರದು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

200ಕ್ಕೂ ಹೆಚ್ಚು ರೈತ ಸಂಘಟನೆಗಳು ತಮ್ಮ ಹಲವು ಬೇಡಿಕೆಗಳಿಗಾಗಿ ದೆಹಲಿ ಚಲೋ ರೈತ ಹೋರಾಟ ನಡೆಸಲಿದ್ದಾರೆ. ಎಲ್ಲ ಬೆಳಗಳಿಗೆ ಕನಿಷ್ಠ ಬೆಂಬಲ ಬೆಲೆ, ಪೂರ್ಣ ಸಾಲ ಮನ್ನಾ, ರೈತರಿಗೆ ಪಿಂಚಣಿ ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವುದು ರೈತರ ಬೇಡಿಕೆಗಳಾಗಿದೆ.

ರೈತರ ಪ್ರತಿಭಟನೆ ಹಿನ್ನೆಲೆ, ದೆಹಲಿ ಪೊಲೀಸರು ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ, ಸಭೆಗಳಿಗೆ ನಿರ್ಬಂಧಗಳನ್ನು ಹೇರಿದ್ದಾರೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ರಾಜಧಾನಿ ಅಕ್ಕಪಕ್ಕದ ಗಡಿಗಳನ್ನು ಭದ್ರಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...