ಮೇ.10 ರಂದು ಸುಪ್ರೀಂನಿಂದ ಕೇಜ್ರಿವಾಲ್ ಮಧ್ಯಂತರ ಜಾಮೀನು ಆದೇಶ

Date:

ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಮೇ 10 ರಂದು ಪ್ರಕಟಿಸಲಿದೆ.

- Advertisement -

ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ ನೇತೃತ್ವದ ಪೀಠವು ಜಾರಿ ನಿರ್ದೇಶನಾಲಯದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಟರ್‌ ಜನರಲ್‌ ಎಸ್‌ ವಿ ರಾಜು ಅವರಿಗೆ ತಿಳಿಸಿತು. ಅಂದು ತಮ್ಮ ಸಲ್ಲಿಕೆಗಳೊಂದಿಗೆ ಸಿದ್ಧವಾಗಿರಿ ಎಂದು ಸೂಚಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಶುಕ್ರವಾರದಂದು ನಾವು ಮಧ್ಯಂತರ ಆದೇಶ ನೀಡುತ್ತೇವೆ. ಅದೇ ದಿನ ಬಂಧನಕ್ಕೆ ಸಂಬಂಧಿಸಿದ ಅರ್ಜಿಗೂ ನಿರ್ಧಾರ ಕೈಗೊಳ್ಳಲಾಗುವುದು” ಎಂದು ನ್ಯಾಯಮೂರ್ತಿಗಳಾದ ಖನ್ನಾ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ಮಂಗಳವಾರ ನಡೆದ ವಿಚಾರಣೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರು ಲೋಕಸಭೆ ಚುನಾವಣೆ ಪ್ರಚಾರ ನಡೆಸುವ ಸಂಬಂಧ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತಾ ಅವರಿದ್ದ ಪೀಠದಿಂದ ಯಾವುದೇ ಮಧ್ಯಂತರ ಆದೇಶವನ್ನು ಪಡೆದುಕೊಳ್ಳಲಿಲ್ಲ.

ಒಂದು ವೇಳೆ ಮಧ್ಯಂತರ ಜಾಮೀನು ಪಡೆದುಕೊಂಡರೆ ಅರವಿಂದ್‌ ಕೇಜ್ರಿವಾಲ್‌ ಅವರು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಬಾರದು ಎಂದು ಪೀಠವು ವಿಚಾರಣೆಯ ಸಂದರ್ಭದಲ್ಲಿ ತಿಳಿಸಿತು.

“ಒಂದು ವೇಳೆ ಚುನಾವಣೆಯ ಕಾರಣದಿಂದ ನಿಮಗೆ ಮಧ್ಯಂತರ ಜಾಮೀನು ನೀಡಿದರೆ ನೀವು ಎಲ್ಲೇ ಇದ್ದರೂ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಬಾರದು. ಇದು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆ. ನಾವು ನಿಮ್ಮ ಸರ್ಕಾರದ ಕಾರ್ಯಕಲಾಪಗಳಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ” ಎಂದು ಪೀಠ ತಿಳಿಸಿತ್ತು.

ಅರವಿಂದ್‌ ಕೇಜ್ರಿವಾಲ್‌ ಮಾ.21 ರಂದು ಇ.ಡಿಯಿಂದ ಬಂಧಿತರಾಗಿದ್ದು, ಏ.1ರಿಂದ ತಿಹಾರ್‌ ಸೆರೆಮನೆಯಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...