ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ ಕೋರ್ಟ್, ರೇಬೀಸ್ ಸೋಂಕಿತ ನಾಯಿಗಳನ್ನು ಹೊರತುಪಡಿಸಿ ಇನ್ನುಳಿದ ಬೀದಿ ನಾಯಿಗಳನ್ನು ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು ಎಂದು ಆದೇಶಿಸಿದೆ.
ದೆಹಲಿಯ ಎಲ್ಲಾ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಮುಕ್ತಗೊಳಿಸಬೇಕು ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಆದರೆ ಈ ಆದೇಶಕ್ಕೆ ಪ್ರಾಣಿ ಪ್ರಿಯರು, ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು.
ಇದನ್ನು ಓದಿದ್ದೀರಾ? ಬೀದಿ ನಾಯಿಗಳ ದಾಳಿಗೆ ಉದ್ಯಮಿ ಪರಾಗ್ ದೇಸಾಯಿ ಬಲಿ
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್‌ವಿ ಅಂಜಾರಿಯಾ ಅವರ ತ್ರಿಸದಸ್ಯ ಪೀಠವು ಜಂತುಹುಳು ನಿವಾರಣೆ ಮತ್ತು ಲಸಿಕೆ ಹಾಕಿದ ನಂತರ ನಾಯಿ ಆಶ್ರಯ ತಾಣಗಳಿಂದ ನಾಯಿಗಳನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದೆ. ಆದರೆ ರೇಬೀಸ್ ಸೋಂಕಿತ, ಆಕ್ರಮಣಕಾರಿ ನಾಯಿಗಳನ್ನು ಆಶ್ರಯ ತಾಣಗಳಿಂದ ಸಾರ್ವಜನಿಕ ಸ್ಥಳಗಳಿಗೆ ಬಿಡುವಂತಿಲ್ಲ ಎಂದು ತಿಳಿಸಿದೆ.
ಇದಲ್ಲದೆ, ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡಲು ಅವಕಾಶವಿಲ್ಲ. ಆಹಾರ ಸ್ಥಳಗಳನ್ನು ರಚಿಸಬೇಕಾಗುವುದು. ಹೀಗೆ ಆಹಾರ ನೀಡುವ ಕಾರಣದಿಂದಾಗಿಯೇ ಕೆಲವು ಘಟನೆಗಳು ನಡೆದಿವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
