25 ಸಾವಿರ ಶಿಕ್ಷಕರ ವಜಾಗೊಳಿಸಿ ಸುಪ್ರೀಂ ಕೋರ್ಟ್‌ ಆದೇಶ, ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆಘಾತ

Date:

ಶಿಕ್ಷಕರ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆಘಾತ ನೀಡಿದ್ದು, ಗುರುವಾರ 25,000 ಶಿಕ್ಷಕರನ್ನು ವಜಾಗೊಳಿಸಿ ಆದೇಶಿಸಿದೆ.

- Advertisement -

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ರದ್ದುಗೊಳಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟ್ ನಿರ್ಧಾರ ಇದೀಗ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಶಾಕ್ ನೀಡಿದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,753 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಕ ಮಾಡಿದ್ದ ಶಾಲಾ ಸೇವಾ ಆಯೋಗದ(ಎಸ್ಎಸ್‌ಸಿ) ಪ್ರಕ್ರಿಯೆಯನ್ನು ಕೋಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ದೀದಿ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠ, ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ ಅಡಿಯಲ್ಲಿ ನೇಮಕಗೊಂಡ 25,000ಕ್ಕೂ ಅಧಿಕ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ವಂಚನೆಯಿಂದ ಕೂಡಿದೆ ಎಂದು ಹೇಳಿದ ಪೀಠ ಇಡೀ ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸಿದೆ. ಅಲ್ಲದೆ ಈಗಾಗಲೇ ನೇಮಕವಾಗಿದ್ದ ಎಲ್ಲ 25 ಸಾವಿರ ಶಿಕ್ಷಕರು ಮತ್ತು ಸಿಬ್ಬಂದಿಗಳನ್ನು ವಜಾ ಮಾಡಿದೆ.

ಹೈಕೋರ್ಟ್ ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಸೂಕ್ತ ಕಾರಣ ನಮಗೆ ಕಂಡು ಬಂದಿಲ್ಲ ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದ್ದು, ಮೂರು ತಿಂಗಳೊಳಗೆ ಹೊಸ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...