ಅನುಮತಿ ಇಲ್ಲದೆ ಬುಲ್ದೋಜರ್ ಕಾರ್ಯಾಚರಣೆಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್

Date:

Advertisements

ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ದೋಜರ್ ಕಾರ್ಯಾಚರಣೆಯನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ.

ಸಾರ್ವಜನಿಕ ರಸ್ತೆ, ಫುಟ್‌ಪಾತ್‌ಗಳು, ರೈಲು ಮಾರ್ಗಗಳು, ಜಲಮೂಲಗಳ ಒತ್ತುವರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಈ ಆದೇಶವು ಕನಿಷ್ಠ ಅಕ್ಟೋಬರ್ 1ರವರೆಗೆ ಮುಂದುವರೆಯಲಿದ್ದು, ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಅಂದು ನಡೆಸಲಿದೆ ಎಂದು ಹೇಳಿದೆ.

Advertisements

ಕಾನೂನು ಬಾಹಿರ, ಕ್ರಿಮಿನಲ್ ಮೊಕದ್ದಮೆಗಳಲ್ಲಿ ಆರೋಪಿಗಳ ಮನೆ ಅಥವಾ ಅಂಗಡಿಗಳನ್ನು ಬುಲ್ಡೋಜಿಂಗ್ ಮಾಡುವುದನ್ನು ತಡೆಯಲು ಕೇಂದ್ರ ಸರ್ಕಾರ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ಕೋರಿ ಸುಪ್ರೀಂ ಕೋರ್ಟಿನ ದ್ವಿಸದಸ್ಯ ಪೀಠವು ವಿಚಾರಣೆ ನಡೆಸುತ್ತಿದೆ. ಈ ವೇಳೆ ಈ ಆದೇಶವನ್ನು ಹೊರಡಿಸಿದೆ.

ಇದನ್ನು ಓದಿದ್ದೀರಾ? ಮಂಡ್ಯ | ಎಂಟು ಲಕ್ಷ ವ್ಯಯಿಸಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿಪಡಿಸಿದ ಪ್ರಾಥಮಿಕ ಶಾಲಾ ಶಿಕ್ಷಕ

“ಮುಂದಿನ ದಿನಾಂಕದವರೆಗೆ ಈ ನ್ಯಾಯಾಲಯದ ಅನುಮತಿ ಪಡೆಯದೆ ಯಾವುದೇ ನೆಲಸಮ ಕಾರ್ಯವನ್ನು ದೇಶದಲ್ಲಿ ಯಾರೂ ಮಾಡಬಾರದು. ಆದರೆ, ಸಾರ್ವಜನಿಕ ರಸ್ತೆಗಳು, ಫುಟ್‌ಪಾತ್‌ಗಳು, ರೈಲ್ವೆ ಮಾರ್ಗಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ನಿರ್ಮಾಣಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ” ಎಂದು ಇದೇ ವೇಳೆ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X