ಕರ್ನಲ್ ಖುರೇಷಿ ಕುರಿತು ಅವಹೇಳನ: ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಆದೇಶ

Date:

ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಚಿವರ ಹೇಳಿಕೆಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಆದರೆ ಸದ್ಯ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದೆ.

- Advertisement -

“ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಿದ್ದ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು” ಎಂದು ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ವಿಜಯ್ ಶಾ ನೀಡಿದ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೂರೂ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನು ಓದಿದ್ದೀರಾ? ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು: ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ

ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ಈ ವಿಷಯದ ತನಿಖೆಗಾಗಿ ಮಧ್ಯಪ್ರದೇಶ ಕೇಡರ್‌ನ ಮೂವರು ಐಪಿಎಸ್ ಅಧಿಕಾರಿಗಳ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಆದೇಶಿಸಿದೆ. ನಾಳೆಯೊಳಗೆ ಎಸ್‌ಐಟಿ ರಚಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದೆ. “ನಾವು ಈ ತನಿಖೆಯನ್ನು ಬಹಳ ನಿಕಟವಾಗಿ ಪರಿಶೀಲಿಸಲು ಬಯಸುತ್ತೇವೆ” ಎಂದು ನ್ಯಾಯಾಲಯ ಹೇಳಿದೆ.

ಈ ನಡುವೆ ನ್ಯಾಯಾಲಯವು ಶಾ ಅವರ ಬಂಧನಕ್ಕೆ ತಡೆ ನೀಡಿದೆ. ಆದರೆ ವಿಜಯ್ ಶಾ ಕ್ಷಮೆಯಾಚಿಸಿರುವುದನ್ನು ಪ್ರಶ್ನಿಸಿದ ಉನ್ನತ ನ್ಯಾಯಾಲಯವು, “ಕ್ಷಮೆಯಾಚಿಸಲು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ” ಎಂದು ಹೇಳಿದೆ.

“ನೀವು ಸಂಪೂರ್ಣವಾಗಿ ಯೋಚಿಸದೆ ಮಾಡಿದ ರೀತಿಯ ಕೀಳು ಹೇಳಿಕೆಗಳು, ನಮಗೆ ಈ ಕ್ಷಮೆಯಾಚನೆ ಅಗತ್ಯವಿಲ್ಲ” ಎಂದು ನ್ಯಾಯಾಲಯವು ಟೀಕಿಸಿದೆ. ಹಾಗೆಯೇ ಈ ಹೇಳಿಕೆಯ ಪರಿಣಾಮದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಎಂದಿದೆ. ಕ್ಷಮೆಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...

ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ನೀತಿ ಜಾರಿ: ಆದೇಶ ಪಾಲಿಸದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಮೂಲಭೂತ ಋತುಚಕ್ರ ನೈರ್ಮಲ್ಯ ಸೌಲಭ್ಯಗಳು ಮತ್ತು ಉಚಿತ...