ಇಶಾ ಫೌಂಡೇಶನ್ ವಿರುದ್ಧದ ಪೊಲೀಸ್ ತನಿಖೆಗೆ ಸುಪ್ರೀಂ ತಡೆಯಾಜ್ಞೆ

Date:

ಕೊಯಮತ್ತೂರಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರು ನಡೆಸುತ್ತಿರುವ ಇಶಾ ಫೌಂಡೇಶನ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಪೊಲೀಸರಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

- Advertisement -

ತನ್ನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ವಿವರಗಳನ್ನು ಸಂಗ್ರಹಿಸುವಂತೆ ಕೊಯಮತ್ತೂರು ಪೊಲೀಸರಿಗೆ ನಿರ್ದೇಶನ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಶಾ ಫೌಂಡೇಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಮುಂದೆ ಯಾವುದೇ ಕ್ರಮ ಕೈಗೊಳ್ಳದಂತೆ ತಮಿಳುನಾಡು ಪೊಲೀಸರಿಗೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅಲ್ಲದೆ ಇಶಾ ಫೌಂಡೇಶನ್‌ನಲ್ಲಿರುವ ತಮ್ಮ ಇಬ್ಬರು ಪುತ್ರಿಯರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಡಾ ಎಸ್ ಕಾಮರಾಜ್ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ತನಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್, ಮದ್ರಾಸ್ ಹೈಕೋರ್ಟ್‌ಗೆ ಸೂಚಿಸಿದೆ.
ಮದ್ರಾಸ್ ಹೈಕೋರ್ಟ್ ನೀಡಿದ ನಿರ್ದೇಶನಗಳನ್ನು ಅನುಸರಿಸಿ ತಮಿಳುನಾಡು ಪೊಲೀಸರು ಇಶಾ ಫೌಂಡೇಶನ್‌ ಮೇಲೆ ದಾಳಿ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು

ಇಶಾ ಫೌಂಡೇಶನ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಹೈಕೋರ್ಟ್ ಆದೇಶಕ್ಕೆ ತಡೆ ಕೋರಿದರು ಮತ್ತು ಸುಮಾರು 500 ಪೊಲೀಸ್ ಅಧಿಕಾರಿಗಳು ಪ್ರತಿಷ್ಠಾನದ ಆಶ್ರಮದ ಮೇಲೆ ದಾಳಿ ನಡೆಸಿದ್ದಾರೆ ಮತ್ತು ಪ್ರತಿ ಮೂಲೆಮೂಲೆಯಲ್ಲೂ ಶೋಧ ನಡೆಸುತ್ತಿದ್ದಾರೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ, ಇಶಾ ಫೌಂಡೇಶನ್‌ನಲ್ಲಿ ತಮ್ಮ ಇಬ್ಬರು ಪುತ್ರಿಯರು ಅಕ್ರಮ ಬಂಧನದಲ್ಲಿದ್ದಾರೆ ಎಂದು ಆರೋಪಿಸಿ ಅವರ ತಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಆ ಇಬ್ಬರು ಮಹಿಳೆಯರಿಂದ ವಿವರಗಳನ್ನು ಪಡೆಯಲು ಪ್ರಯತ್ನಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...