ಲೋಹದ ಪೆಲೆಟ್ ಗನ್ ನಿಷೇಧ, ಪರಿಹಾರಕ್ಕೆ ಆಗ್ರಹ: ಸುಪ್ರೀಂ ಮೆಟ್ಟಿಲೇರಿದ ಸಂತ್ರಸ್ತರು!

Date:

ಪ್ರತಿಭಟನೆ ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಲೋಹದ ಪೆಲೆಟ್ ಗನ್‌ಗಳನ್ನು (Metallic Pellet Guns) ಬಳಸುವುದನ್ನು ಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿ ಇಬ್ಬರು ಸಂತ್ರಸ್ತರು ಹಾಗೂ ಮಾಜಿ ಐಪಿಎಸ್ ಅಧಿಕಾರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದಾರೆ.

- Advertisement -

ಇತ್ತೀಚೆಗೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ನೀಟ್ ಸೋರಿಕೆ ಸೇರಿದಂತೆ ಹಲವು ಅಧ್ವಾನಗಳ ಹೊಣೆ ಹೊತ್ತು ಸಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ವೇಳೆ ರ‍್ಯಾಪಿಡ್ ಆಕ್ಷನ್ ಫೋರ್ಸ್ (RAF) ನಡೆಸಿದ ಪೆಲೆಟ್ ಫೈರಿಂಗ್‌ನಲ್ಲಿ ಗಾಯಗೊಂಡಿದ್ದ ಪ್ರಶಾಂತ್ ಕುಮಾರ್ ಸಿಂಗ್ ಮತ್ತು ಶೇಖ್ ಇರ್ಷಾದ್ ಮನ್ಸೂರಿ ಹಾಗೂ ಗುಪ್ತಚರ ಇಲಾಖೆಯ (IB) ಮಾಜಿ ವಿಶೇಷ ನಿರ್ದೇಶಕ ಯಶೋವರ್ಧನ್ ಆಜಾದ್ ಜಂಟಿಯಾಗಿ ಈ ಅರ್ಜಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಕಗ್ಗೊಲೆ: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಇದನ್ನೂ ಓದಿ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್ ಗನ್’ ಬಳಕೆಗೆ ಅನುಮತಿ ಕೊಟ್ಟವರು ಯಾರು?: ಅಮಿತ್ ಶಾಗೆ ರಾಹುಲ್ ಗಾಂಧಿ ಪತ್ರ

ಪೆಲೆಟ್‌ಗಳು ಶರೀರಕ್ಕೆ ತೂರಿಕೊಂಡು ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಾಗಿದ್ದು, ಲೇಡಿ ಹಾರ್ಡಿಂಗ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಅವುಗಳನ್ನು ಹೊರತೆಗೆಯಲಾಗಿದೆ ಎಂದು ಸಂತ್ರಸ್ತರು ಅರ್ಜಿಯಲ್ಲಿ ವಿವರಿಸಿದ್ದಾರೆ. ಪೆಲೆಟ್ ಗನ್‌ನಿಂದ ಹೊರಬರುವ ನೂರಾರು ಸಣ್ಣ ಹರಳುಗಳು ಅನಿರ್ದಿಷ್ಟ ದಿಕ್ಕಿನಲ್ಲಿ ಹರಡುವುದರಿಂದ ಕಣ್ಣುಗಳು ಮತ್ತು ಸೂಕ್ಷ್ಮ ಅಂಗಾಂಗಗಳಿಗೆ ಶಾಶ್ವತ ಹಾನಿಯಾಗುವ ಅಪಾಯ ಹೆಚ್ಚಾಗಿರುತ್ತದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರನ್ನು ಚದುರಿಸಲು ಭಾಗಶಃ ಅಥವಾ ಸಂಪೂರ್ಣವಾಗಿ ಲೋಹದಿಂದ ಮಾಡಿದ ಪೆಲೆಟ್‌ಗಳನ್ನು ಹಾರಿಸುವ ‘ಪಂಪ್ ಆ್ಯಕ್ಷನ್ ರೈಫಲ್’ ಹಾಗೂ ‘ಪ್ರಾಜೆಕ್ಟೈಲ್ ಆ್ಯಕ್ಷನ್ ಗನ್’ಗಳ ಬಳಕೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಸಾರ್ವಜನಿಕರ ಮೇಲೆ ಪೆಲೆಟ್ ಗನ್ ಬಳಸುವುದು ಸಂವಿಧಾನ ನೀಡಿರುವ ಅಗತ್ಯತೆ, ಪ್ರಮಾಣಾನುಪಾತ ಮತ್ತು ನೈತಿಕತೆಯ ತತ್ವಗಳಿಗೆ ವಿರುದ್ಧವಾಗಿದೆ. 2020 ರ ವಿಶ್ವಸಂಸ್ಥೆಯ (UN) ಮಾರ್ಗದರ್ಶನ ಸೂತ್ರಗಳ ಪ್ರಕಾರ, ಸಾರ್ವಜನಿಕರ ಮೇಲಿನ ಕಾರ್ಯಾಚರಣೆಯಲ್ಲಿ ಲೋಹದ ಪೆಲೆಟ್‌ಗಳನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಅರ್ಜಿದಾರರು ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಹಾಗೆಯೇ ಜುಲೈ 20 ರಂದು ನಡೆದ ಘಟನೆಯಲ್ಲಿ ಗಾಯಗೊಂಡ ಸಂತ್ರಸ್ತರಿಗೆ ಸೂಕ್ತ ನಷ್ಟಪರಿಹಾರ, ಉಚಿತ ವೈದ್ಯಕೀಯ ಚಿಕಿತ್ಸೆ ಮತ್ತು ಪುನರ್ವಸತಿ ಕಲ್ಪಿಸಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...

ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ,...

ಔಷಧ ಮಾರಾಟದಲ್ಲಿ ಲೂಟಿ! MRP-ಮಾರಾಟ ದರದ ನಡುವೆ ಇಷ್ಟೊಂದು ಅಂತರವೇಕೆ?: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ಭಾರತದಲ್ಲಿ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಮತ್ತು ಚಿಲ್ಲರೆ ವ್ಯಾಪಾರಿಗಳು...

ಅಂತಿಮ ಮತದಾರರ ಪಟ್ಟಿ ಪ್ರಕಟ: ಧಾರವಾಡ ಜಿಲ್ಲೆಯಲ್ಲಿ 13.78 ಲಕ್ಷ ಮತದಾರರು

15,151 ಯುವ ಮತದಾರರ ಮೊದಲ ಬಾರಿ ನೋಂದಣಿ, 6,305 ಹೆಸರು ಡಿಲೀಟ್,...