ಉಮರ್-ಶಾರ್ಜೀಲ್ ಜಾಮೀನು ಅರ್ಜಿ ವಿಚಾರಣೆ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ತರಾಟೆ

Date:

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನದಲ್ಲಿರುವ ವಿದ್ಯಾರ್ಥಿ ನಾಯಕರಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡದ ದೆಹಲಿ ಪೊಲೀಸರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹಾಗೆಯೇ ಈ ಸಂದರ್ಭದಲ್ಲೇ ಜಾಮೀನು ಅರ್ಜಿ ವಿಚಾರಣೆಯನ್ನು ಉನ್ನತ ನ್ಯಾಯಾಲಯ ಅಕ್ಟೋಬರ್ 31ಕ್ಕೆ ಮುಂದೂಡಿಕೆ ಮಾಡಿದೆ.

- Advertisement -

ಯುಎಪಿಎ ಪ್ರಕರಣದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಮತ್ತು ಮೀರನ್ ಹೈದರ್ ಅವರ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ಆದರೆ ಈವರೆಗೂ ದೆಹಲಿ ಪೊಲೀಸರು ಪ್ರತಿಕ್ರಿಯಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಸೋಮವಾರ ಸುಪ್ರೀಂ ಕೋರ್ಟ್‌ನಿಂದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ

ಇದೀಗ ಮತ್ತೆ ಎರಡು ವಾರಗಳ ಕಾಲಾವಕಾಶವನ್ನು ಕೋರಿದ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ಎನ್‌ವಿ ಅಂಜಾರಿಯಾ ಅವರ ದ್ವಿಸದಸ್ಯ ಪೀಠವು, “ಅರ್ಜಿಗೆ ಪ್ರತಿಕ್ರಿಯಿಸಲು ದೆಹಲಿ ಪೊಲೀಸರಿಗೆ ಸಾಕಷ್ಟು ಸಮಯವನ್ನು ನೀಡಲಾಗಿದೆ. ಅಕ್ಟೋಬರ್ 27ರಂದು ವಿಚಾರಣೆ ನಡೆಸಲಾಗುವುದು ಎಂದು ಈ ಹಿಂದೆಯೇ ಸ್ಪಷ್ಟಪಡಿಸಲಾಗಿತ್ತು” ಎಂದು ಹೇಳಿದೆ.

ಇನ್ನಷ್ಟು ಸಮಯಾವಕಾಶ ಕೋರಿದ ಹೆಚ್ಚುವರಿ ಸಾಲಿಟರ್ ಜನರಲ್ ಎಸ್‌ವಿ ರಾಜು ಅವರಿಗೆ, “ಇಲ್ಲ, ಸಾಧ್ಯವೇ ಇಲ್ಲ. ಮುಂದಿನ ವಿಚಾರಣೆಯಲ್ಲಿ ನಿಮ್ಮ ವಾದ ಮಂಡಿಸಿ” ಎಂದು ಹೇಳಿದ್ದಾರೆ.

2022ರ ಆರಂಭದಲ್ಲಿ ಬಂಧಿತರಾಗಿರುವ ಈ ನಾಯಕರುಗಳು ಹಲವು ಬಾರಿ ದೆಹಲಿ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದರೆ ಪ್ರತಿ ಬಾರಿಯೂ ಅರ್ಜಿ ತಿರಸ್ಕೃತಗೊಂಡಿದೆ. ಸೆಪ್ಟೆಂಬರ್ 2ರಂದು ದೆಹಲಿ ಹೈಕೋರ್ಟ್ ಅರ್ಜಿ ತಿರಸ್ಕರಿಸುವುದನ್ನು ಪ್ರಶ್ನಿಸಿ ವಿದ್ಯಾರ್ಥಿ ನಾಯಕರುಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು 53 ಜನರು ಸಾವನ್ನಪ್ಪಿದ್ದಾರೆ. 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಆ ಗಲಭೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪದಲ್ಲಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಸೇರಿದಂತೆ 18 ಮಂದಿಯನ್ನು 2020ರ ಸೆಪ್ಟೆಂಬರ್‌ನಲ್ಲಿ ದೆಹಲಿ ಪೊಲೀಸರು ಬಂಧಿಸಿದರು. ಧಾರ್ಮಿಕ ಭಾವನೆ ಕದಡಿದ್ದಾರೆ ಎಂಬ ಆರೋಪ ಹೊರಿಸಿ, ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ’ (ಯುಎಪಿಎ) ಅಡಿ ಪ್ರಕರಣವನ್ನೂ ದಾಖಲಿಸಿದರು. ಆದರೆ ಈವರೆಗೂ ಬಿಡುಗಡೆ ಮಾಡಲಾಗಿಲ್ಲ. ಜತೆಗೆ ಸಂಪೂರ್ಣ ಚಾರ್ಜ್‌ಶೀಟ್‌ ಕೂಡಾ ಸಲ್ಲಿಸಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...