ವಿವಾದಾತ್ಮಕ ಸಿನಿಮಾ ‘ಹಮಾರೆ ಬಾರಹ್’ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Date:

ಇಸ್ಲಾಂ ನಂಬಿಕೆ ಹಾಗೂ ಮುಸ್ಲಿಂ ಮಹಿಳೆಯರ ವಿವಾಹದ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿರುವ ಆರೋಪಗಳ ಮೇಲೆ ಜೂನ್‌ 14 ರಂದು ಬಿಡುಗಡೆಯಾಗಬೇಕಿರುವ ಅನ್ನು ಕಪೂರ್‌ ಅವರ ‘ಹಮಾರೆ ಬಾರಹ್’ ಸಿನಿಮಾಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಹಾಗೂ ಸಂದೀಪ್‌ ಮರಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠ ವಕೀಲರಾದ ಫೌಜಿಯಾ ಶಕೀಲ್ ಅವರ ಸಲ್ಲಿಸಿದ್ದ ಅರ್ಜಿಯನ್ನು ಗಮನಿಸಿತು. ಹಾಗೆಯೇ ಈ ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಬಾಂಬೆ ಹೈಕೋರ್ಟ್‌ಗೆ ಸೂಚಿಸಿತು.

“ನಾವು ಇಂದು ಮುಂಜಾನೆ ಸಿನಿಮಾದ ಟ್ರೈಲರ್‌ಅನ್ನು ನೋಡಿದ್ದೇವೆ. ಚಿತ್ರದಲ್ಲಿರುವ ಎಲ್ಲ ಪ್ರಚೋದನಾಕಾರಿ ಸಂಭಾಷಣೆಗಳು ಹಾಗೆಯೇ ಮುಂದುವರೆದಿವೆ” ಎಂದು ಗಮನಿಸಿದ ಪೀಠ ಸಿನಿಮಾ ಬಿಡುಗಡೆಗೆ ತಡೆ ನೀಡಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಈ ವಿವಾದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವ ತನಕ ಸುಪ್ರೀಂ ಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ.

ಸೂಕ್ತ ಕಾರಣ ನೀಡದೆ ಬಾಂಬೆ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದೆ ಎಂದು ತಡೆಯಾಜ್ಞೆಗೆ ಕೋರಿ ಸಲ್ಲಿಸಿದ ಅರ್ಜಿದಾರರಾದ ಅಜರ್‌ ಭಾಷ ತಂಬೊಲೈ ಪರ ವಕೀಲ ಶಕೀಲ್‌ ಅವರು ಕೋರ್ಟ್‌ಗೆ ಮಾಹಿತಿ ನೀಡಿದರು.

“ಪ್ರಕರಣದಲ್ಲಿ ಕೇಂದ್ರೀಯ ಸಿನಿಮಾ ಪ್ರಮಾಣಪತ್ರ ಮಂಡಳಿ(ಸಿಬಿಎಫ್‌ಸಿ) ಕೂಡ ಕಕ್ಷಿದಾರರಾಗಿರುವ ಕಾರಣ ಬಾಂಬೆ ಹೈಕೋರ್ಟ್ ಸಿಬಿಎಫ್‌ಸಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ” ಎಂದು ವಕೀಲರಾದ ಶಕೀಲ್‌ ತಿಳಿಸಿದರು.

ವಿವಾದಿತ ಹಮಾರಾ ಬರಹ್‌ ಸಿನಿಮಾವನ್ನು ಈಗಾಗಲೇ ಕರ್ನಾಟಕದಲ್ಲಿ ನಿಷೇಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇದಾರನಾಥ ದೇಗುಲದಿಂದ 228 ಕೆಜಿ ಚಿನ್ನ ನಾಪತ್ತೆ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

"ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ...

ಕೇರಳ | ಆಸ್ಪತ್ರೆಗೆ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ!

ವ್ಯಕ್ತಿಯೊಬ್ಬರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಗೆಂದು ತೆರಳಿ 2 ದಿನಗಳ...

ಮೋದಿ ನೇತೃತ್ವದಲ್ಲಿ ಟೈಟಾನಿಕ್ ಹಡಗಿನಂತೆ ಶಾಶ್ವತವಾಗಿ ಮುಳಗಲಿರುವ ಬಿಜೆಪಿ: ಸುಬ್ರಮಣಿಯನ್ ಸ್ವಾಮಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಟೈಟಾನಿಕ್ ಹಡಗಿನಂತೆ ಮುಳುಗುತ್ತದೆ...

ಅರವಿಂದ್ ಕೇಜ್ರಿವಾಲ್ ಕೋಮಾಗೆ ಜಾರಬಹುದು ಎಂದ ಎಎಪಿ, ತಿಹಾರ್ ಜೈಲು ಹೇಳುವುದೇನು?

ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಸೋಮವಾರ...