ಹಾವಿನ ವಿಷ ಪ್ರಕರಣ: ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Date:

2023ರಲ್ಲಿ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಹಾವಿನ ವಿಷ ಪ್ರಕರಣದಲ್ಲಿ ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ವನ್ಯಜೀವಿ (ರಕ್ಷಣೆ) ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಮತ್ತು ನಂತರದ ವಿಚಾರಣೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.

- Advertisement -

ವನ್ಯಜೀವಿ (ರಕ್ಷಣೆ) ಕಾಯ್ದೆಯಡಿಯಲ್ಲಿ ದೂರು ಅಧಿಕೃತ ವ್ಯಕ್ತಿಯಿಂದ ದಾಖಲಾಗಿಲ್ಲವಾದ್ದರಿಂದ ಪ್ರಕರಣವನ್ನು ಕಾನೂನುಬದ್ಧವಾಗಿ ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಎಂ ಎಂ ಸುಂದ್ರೇಶ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠ ಹೇಳಿದೆ. ಹಾಗೆಯೇ ಯಾದವ್ ವಿರುದ್ಧದ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಅಪರಾಧಗಳು ಈ ಹಿಂದೆ ಗುರುಗ್ರಾಮದಲ್ಲಿ ದಾಖಲಾಗಿರುವ ಎಫ್‌ಐಆರ್ ಅನ್ನು ಆಧರಿಸಿವೆ. ಆ ಪ್ರಕರಣದ ಅಂತಿಮ ವರದಿ ಈಗಾಗಲೇ ಸಲ್ಲಿಕೆಯಾಗಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಹಾವಿನ ವಿಷ ಪ್ರಕರಣ | ಬಲಪಂಥೀಯ ಯೂಟ್ಯೂಬರ್ ಎಲ್ವಿಶ್ ಯಾದವ್ ಬಂಧನ

ಇನ್ನು ವಶಪಡಿಸಿಕೊಂಡ ದ್ರವ ಪದಾರ್ಥವು ಅಂದರೆ ಹಾವಿನ ವಿಷ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ ಕಾಯ್ದೆ – NDPS ಅಡಿಯಲ್ಲಿ ಬರುವ ನಿಷೇಧಿತ ಮಾದಕ ವಸ್ತುವಲ್ಲ. ಆದ್ದರಿಂದ ಈ ಕಾಯ್ದೆ ಅನ್ವಯವಾಗಲ್ಲ ಎಂದೂ ಕೋರ್ಟ್ ಹೇಳಿದೆ

2023ರ ನವೆಂಬರ್ 22ರಂದು ಯಾದವ್ ವಿರುದ್ದ ಪ್ರಕರಣ ದಾಖಲಾಗಿದೆ. 2024ರ ಮಾರ್ಚ್ 17ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಹಾವಿನ ವಿಷವನ್ನು ಬಳಸಿದ ಆರೋಪದ ಮೇಲೆ ಯಾದವ್ ಬಂಧನ ಮಾಡಲಾಗಿತ್ತು.

ಈ ಅಲಹಾಬಾದ್ ಹೈಕೋರ್ಟ್ ಯಾದವ್ ವಿರುದ್ಧದ ಆರೋಪವನ್ನು ರದ್ದುಗೊಳಿಸಲು ನಿರಾಕರಿಸಿ ಇದು ಗಂಭೀರ ಅಪರಾಧ ಎಂದು ಪರಿಗಣಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಯಾದವ್ ಎಲ್ವಿಶ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ವರ್ಷ ಆಗಸ್ಟ್ 6ರಂದು ಸುಪ್ರೀಂ ಯಾದವ್ ವಿರುದ್ಧದ ವಿಚಾರಣೆಗೆ ತಡೆ ನೀಡಿತ್ತು. ಇದೀಗ ಕಾನೂನು ಚೌಕಟ್ಟಿನಲ್ಲಿ ಈ ಪ್ರಕರಣ ಬರದು ಎಂದು ಎಫ್‌ಐಆರ್ ರದ್ದುಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...