ಯೂಸುಫ್ ಮಲಿಕ್‌ ವಿರುದ್ಧದ ಎನ್‌ಎಸ್‌ಎ ಆರೋಪಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

Date:

  • ಜನವರಿಯಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಯೂಸುಫ್‌ ಮಲಿಕ್
  • ಯೂಸುಫ್‌ ಅವರನ್ನು ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಆದೇಶ

ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಯೂಸುಫ್ ಮಲಿಕ್‌ ಅವರ ವಿರುದ್ಧದ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಉಲ್ಲಂಘನೆ ಆರೋಪಗಳನ್ನು ಸುಪ್ರೀಂ ಕೋರ್ಟ್‌ ಮಂಗಳವಾರ (ಏಪ್ರಿಲ್‌ 11) ರದ್ದುಗೊಳಿಸಿದೆ.

- Advertisement -

ಯಾವುದೇ ಆಧಾರವಿಲ್ಲದೆ ಪಾಲಿಕೆ ತೆರಿಗೆ ವಸೂಲಾತಿ ಪ್ರಕರಣದಲ್ಲಿ ಎನ್‌ಎಸ್‌ಎ ಜಾರಿಗೊಳಿಸುವುದು ಸೇಡಿನ ರಾಜಕಾರಣಕ್ಕೆ ಕಾರಣವಾಗಬಹುದು ಎಂದು ನ್ಯಾಯಾಲಯ ಉತ್ತರ ಪ್ರದೇಶ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ನೇತೃತ್ವದ ಪೀಠ ವಿಚಾರಣೆ ನಡೆಸಿ, ರಾಮ್‌ಪುರ ಜೈಲಿನಿಂದ ಯೂಸುಫ್‌ ಮಲಿಕ್‌ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಎನ್‌ಎಸ್‌ಎ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಯೂಸುಫ್‌ ಮಲಿಕ್‌ ಅರ್ಜಿ ಸಲ್ಲಿಸಿದ್ದರು

“ಆದಾಯ ಬಾಕಿಗಳ ಮರುಪಡೆಯುವಿಕೆಗಾಗಿ ಎನ್‌ಎಸ್‌ಎ ವಿಧಿಸಿರುವುದು ನಮಗೆ ಆಶ್ಚರ್ಯವಾಗಿದೆ. ಪ್ರಕರಣದಲ್ಲಿ ಯಾವುದೇ ಆಧಾರವಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ ಎನ್‌ಎಸ್‌ಎ ರದ್ದುಗೊಳಿಸಲಾಗುತ್ತಿದೆ. ಅರ್ಜಿದಾರರಾಗಿರುವ ಯೂಸುಫ್ ಮಲಿಕ್‌ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶಿಸುತ್ತೇವೆ” ಎಂದು ಪೀಠ ಹೇಳಿದೆ.

ಯೂಸುಫ್‌ ಮಲಿಕ್‌ ಅವರನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ತಡಮಾಡದೆ ರಾಮ್‌ಪುರ ಜಿಲ್ಲಾ ನ್ಯಾಯಾಧೀಶರಿಗೆ ಮಾಹಿತಿ ರವಾನಿಸುವಂತೆ ರಾಜ್ಯ ಸರ್ಕಾರಕ್ಕೆ ಪೀಠ ಸೂಚಿಸಿತು.

ಹಿಂದಿನ ವಿಚಾರಣೆಗಳಲ್ಲಿ ನ್ಯಾಯಾಲಯದ ಸಲಹೆಯ ಹೊರತಾಗಿಯೂ ಯೂಸುಫ್‌ ವಿರುದ್ಧದ ಎನ್‌ಎಸ್‌ಎ ಆರೋಪಗಳನ್ನು ಹಿಂತೆಗೆದುಕೊಳ್ಳಲು ರಾಜ್ಯ ಸರ್ಕಾರ ನಿರಾಸಕ್ತಿ ವಹಿಸಿದೆ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

ನ್ಯಾಯಾಲಯದ ಆದೇಶವನ್ನು ತಕ್ಷಣವೇ ರವಾನಿಸುವಂತೆ ಯೂಸುಫ್‌ ಮಲಿಕ್‌ ಅವರ ಪರ ಹಿರಿಯ ವಕೀಲ ಎಸ್‌ಡಬ್ಲ್ಯುಎ ಖಾದ್ರಿ ಪೀಠಕ್ಕೆ ಮನವಿ ಮಾಡಿದರು. ಪೀಠ ಅವರ ಮನವಿಯನ್ನು ಪುರಸ್ಕರಿಸಿತು.

ಈ ಸುದ್ದಿ ಓದಿದ್ದೀರಾ? ಸಚಿನ್‌ ಪೈಲಟ್‌ ಸತ್ಯಾಗ್ರಹ; ಕಾಂಗ್ರೆಸ್‌ ವರಿಷ್ಠರೊಂದಿಗೆ ಮಾತುಕತೆ ಸಾಧ್ಯತೆ

ತಮ್ಮ ವಿರುದ್ಧ ಎನ್‌ಎಸ್‌ಎ ಜಾರಿಗೊಳಿಸಿರುವ ಉತ್ತರಪ್ರದೇಶ ಸರ್ಕಾರದ ವಿರುದ್ಧ ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್ ವಿಚಾರಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಎಸ್‌ಪಿ ನಾಯಕ ಅಜಂ ಖಾನ್ ಅವರ ಆಪ್ತ ಸಹಾಯಕ ಯೂಸುಫ್‌ ಅವರು ಜನವರಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...