ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ‘ನಿಮ್ಮ ಹೆಸರಿನಿಂದ ಡಾಕ್ಟರ್ ಪದ ತೆಗೆದು ಹಾಕಿ’; ವೈದ್ಯರ ವಿರುದ್ಧ ಸುಪ್ರೀಂ ಕಿಡಿ

Date:

4 ವರ್ಷದ ಅತ್ಯಾಚಾರ ಸಂತ್ರಸ್ತ ಬಾಲಕಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ವಿಫಲವಾಗಿ, ಆಕೆಯ ಸಾವಿಗೆ ಕಾರಣವಾದ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಎರಡು ಖಾಸಗಿ ಆಸ್ಪತ್ರೆಗಳು ಮತ್ತು ಅಲ್ಲಿನ ವೈದ್ಯರ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ‘ನಿಮ್ಮ ಹೆಸರಿನಿಂದ ಡಾಕ್ಟರ್ ಪದವನ್ನು ಕಿತ್ತೊಗೆಯಿರಿ’ ಎಂದು ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದೆ.

- Advertisement -

ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ನೇತೃತ್ವದ ಪೀಠವು ಆಸ್ಪತ್ರೆಗಳ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದೆ. “ಬಾಲಕಿ ಬಡವಳಾಗಿದ್ದರಿಂದಲೇ ನೀವು ಆಕೆಯನ್ನು ನಿರ್ಲಕ್ಷಿಸಿದ್ದೀರಿ. ನಿಮ್ಮ ಕರ್ತವ್ಯವನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ನಿಮ್ಮ ಹೆಸರಿನಿಂದ ‘ಡಾಕ್ಟರ್’ ಎಂಬ ಪದವನ್ನು ಕಿತ್ತೊಗೆಯಿರಿ” ಎಂದು ತೀಕ್ಷ್ಣವಾಗಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಮಾರ್ಚ್ 16ರಂದು ಗಾಜಿಯಾಬಾದ್‌ನಲ್ಲಿ ಬಾಲಕಿಯ ಅತ್ಯಾಚಾರ ನಡೆದಿತ್ತು. ಚಾಕೊಲೇಟ್ ಕೊಡಿಸುವುದಾಗಿ ನಂಬಿಸಿ ನೆರೆಹೊರೆಯ ವ್ಯಕ್ತಿಯೊಬ್ಬ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದನು. ಬಾಲಕಿಗಾಗಿ ಮನೆಯವರು ಹುಡುಕಾಟ ನಡೆಸಿದಾಗ, ಆಕೆ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಪೋಷಕರು ಚಿಕಿತ್ಸೆಗಾಗಿ ಆಕೆಯನ್ನು ತಕ್ಷಣವೇ ಎರಡು ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದರೂ, ಆಸ್ಪತ್ರೆಗಳು ಬಾಲಕಿಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದವು. ತದನಂತರ ಗಾಜಿಯಾಬಾದ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ಬಾಲಕಿ ಸಿಕ್ಕ ನಂತರವೂ ಎರಡು ಗಂಟೆಗಳ ಕಾಲ ಜೀವಂತವಾಗಿದ್ದಳು, ಸಕಾಲದಲ್ಲಿ ಚಿಕಿತ್ಸೆ ಸಿಕ್ಕಿದ್ದರೆ ಆಕೆ ಬದುಕುತ್ತಿದ್ದಳು ಎಂದು ಬಾಲಕಿಯ ತಂದೆ ಆಕ್ರೋಶ ಹೊರಹಾಕಿದ್ದರು.

ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ನೇಮಿಸಿದ್ದ ವಿಶೇಷ ತನಿಖಾ ತಂಡದ (SIT) ತನಿಖೆಯಲ್ಲಿ, “ಆಸ್ಪತ್ರೆಗಳು ಸಕಾಲದಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿವೆ” ಎಂಬುದು ದೃಢಪಟ್ಟಿತ್ತು.

ಎಸ್‌ಐಟಿ ಸಲ್ಲಿಸಿದ ವರದಿ ಆಧಾರದ ಮೇಲೆ ಆಸ್ಪತ್ರೆಗಳ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಮುಖ್ಯ ನ್ಯಾಯಮೂರ್ತಿಗಳು, “ನಿಮ್ಮ ಆಸ್ಪತ್ರೆಯಲ್ಲಿ ಸೌಲಭ್ಯಗಳಿಲ್ಲದಿದ್ದರೆ, ಮಾನವೀಯತೆ ದೃಷ್ಟಿಯಿಂದ ಮಗುವನ್ನು ಮತ್ತೊಂದು ಆಸ್ಪತ್ರೆಗೆ ನೀವೇ ಕರೆದೊಯ್ಯಬೇಕಿತ್ತು. ಮಗು ಬಡ ಕುಟುಂಬದ್ದಾಗಿದ್ದರಿಂದ ಮತ್ತು ನಿಮ್ಮ ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಕಾರಣಕ್ಕೆ ನೀವು ನಿರ್ಲಕ್ಷಿಸಿದ್ದೀರಿ. ಈ ನಿರ್ಲಕ್ಷ್ಯಕ್ಕೆ ದಂಡವಾಗಿ ಸಂತ್ರಸ್ತೆಯ ಕುಟುಂಬಕ್ಕೆ ಸ್ವಯಂಪ್ರೇರಿತವಾಗಿ ಆರ್ಥಿಕ ನೆರವು ನೀಡಬೇಕು” ಎಂದು ಆಸ್ಪತ್ರೆಗಳಿಗೆ ಆದೇಶಿಸಿದ್ದಾರೆ.

ಕೇವಲ ಪರಿಹಾರ ನೀಡುವುದಷ್ಟೇ ಅಲ್ಲ, ವ್ಯವಸ್ಥೆಯಲ್ಲಿನ ಹೊಣೆಗಾರಿಕೆಯನ್ನು ಸರಿಪಡಿಸಬೇಕಾಗಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಈ ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ನಡೆಯ ಬಗ್ಗೆಯೂ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಘಟನೆ ನಡೆದ ತಕ್ಷಣ ಪೋಷಕರು ಠಾಣೆಗೆ ಧಾವಿಸಿದಾಗ ಪೊಲೀಸರು ಕ್ರಮ ಕೈಗೊಳ್ಳುವ ಬದಲು ಅವರ ಮೇಲೆಯೇ ದೈಹಿಕ ಹಲ್ಲೆ ನಡೆಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಾರ್ವಜನಿಕ ಆಕ್ರೋಶದ ನಂತರ ಮಾರ್ಚ್ 17 ರಂದು ಎಫ್‌ಐಆರ್ ದಾಖಲಿಸಿ, ಮಾರ್ಚ್ 18 ರಂದು ಆರೋಪಿಯನ್ನು ಬಂಧಿಸಲಾಗಿತ್ತು. ಆದರೆ, ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಪೋಕ್ಸೋ ಅಥವಾ ಅತ್ಯಾಚಾರದ ಸೆಕ್ಷನ್ 376 ಅನ್ನು ಉಲ್ಲೇಖಿಸಿರಲಿಲ್ಲ.

ಪೊಲೀಸರ ಈ ಬೇಜವಾಬ್ದಾರಿತನವನ್ನು ಏಪ್ರಿಲ್‌ನಲ್ಲೇ ಖಂಡಿಸಿದ್ದ ಸುಪ್ರೀಂ ಕೋರ್ಟ್, ಗಾಜಿಯಾಬಾದ್ ಪೊಲೀಸ್ ಕಮಿಷನರ್ ಮತ್ತು ತನಿಖಾಧಿಕಾರಿಗೆ ಸಮನ್ಸ್ ಜಾರಿ ಮಾಡಿತ್ತು. ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಗಳು ಹಾಗೂ ಸ್ಥಳೀಯ ಪೊಲೀಸರ ಸಂಪೂರ್ಣ ಉದಾಸೀನತೆ ಮತ್ತು ಸೂಕ್ಷ್ಮತೆಯ ಕೊರತೆ ಅತ್ಯಂತ ದಿಗ್ಭ್ರಮೆ ಮೂಡಿಸುವಂತದ್ದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರ ವಿಷಾದ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಶಿವಮೊಗ್ಗ | ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಜಾಗೃತಿ ಘೋಷಣೆಗಳೊಂದಿಗೆ ಜಾಥಾ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...