ರೈಲ್ವೇ ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆ ಕುರಿತ ಅರ್ಜಿ ಆಲಿಸಲು ಸುಪ್ರೀಂ ನಕಾರ

Date:

ರೈಲ್ವೇ ತತ್ಕಾಲ್ ಟಿಕೆಟ್‌ ಬುಕಿಂಗ್ ವ್ಯವಸ್ಥೆಯಲ್ಲಿ ಎದುರಾಗುತ್ತಿರುವ ತಾಂತ್ರಿಕ ದೋಷಗಳನ್ನು ಗುರುತಿಸಲು ಮತ್ತು ಸರಿಪಡಿಸಲು ‘ಐಆರ್‌ಸಿಟಿಸಿ ತತ್ಕಾಲ್ ಬುಕಿಂಗ್ ವ್ಯವಸ್ಥೆ’ಯ ಸಂಪೂರ್ಣ ಲೆಕ್ಕಪರಿಶೋಧನೆ ನಡೆಸಲುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಅರ್ಜಿ ಆಲಿಸಲು ನಿರಾಕರಿಸಿದೆ.

- Advertisement -

ರೈಲು ಪ್ರಯಾಣಕ್ಕೆ ಒಂದು ದಿನ ಮೊದಲು ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಅವಕಾಶವಿದೆ. ಈ ವರ್ಗದ ಅಡಿಯಲ್ಲಿ ಸೀಮಿತ ಸಂಖ್ಯೆಯ ಸೀಟುಗಳನ್ನು ನೀಡಲಾಗುತ್ತದೆ. ಆದಾಗ್ಯೂ, ತತ್ಕಾಲ್ ಟಿಕೆಟ್ ಬುಕಿಂಗ್‌ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷವೂ ಸೇರಿದಂತೆ ನಾನಾ ಸಮಸ್ಯೆಗಳು ಎದುರಾಗುತ್ತಿವೆ ಎಂಬ ಅಭಿಪ್ರಾಯವಿದೆ. ಹೀಗಾಗಿ, ಅರ್ಜಿದಾರರು ಐಆರ್‌ಸಿಟಿಸಿಯಲ್ಲಿನ ತತ್ಕಾಲ್ ಬುಕಿಂಗ್‌ ವ್ಯವಸ್ಥೆಯ ಸಂಪೂರ್ಣ ಮೇಲ್ವಿಚಾರಣೆಯನ್ನು ಕೇಂದ್ರ ಸರ್ಕಾರ ನಡೆಸಬೇಕು ಮತ್ತು ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ವಾದಿಸಿ, ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆದರೆ, ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಅರ್ಜಿಯನ್ನು ತರಿಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠವು, ‘ಸಮಸ್ಯೆಯ ಕುರಿತು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬಹುದು’ ಎಂದು ಅರ್ಜಿದಾರರಿಗೆ ಸೂಚನೆ ನೀಡಿದೆ.

“ಹೈಕೋರ್ಟ್‌ಗೆ ಹೋಗಿ. ನೀವು ಒಂದು ಅಂಶವನ್ನು ಎತ್ತಿದ್ದೀರಿ. ತತ್ಕಾಲ್ ಬುಕಿಂಗ್ ವ್ಯವಸ್ಥೆಯಲ್ಲಿ ಕೆಲವು ಸಮಸ್ಯೆಗಳಿವೆ ಎಂದು ನೀವು ಹೇಳುತ್ತಿದ್ದೀರಿ. ರ್ಜಿಯ ಅರ್ಹತೆಯ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.ದಯವಿಟ್ಟು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ” ಎಂದು ಹೇಳಿದ್ದಾರೆ.

ಅನಧಿಕೃತ ಏಜೆಂಟ್‌ಗಳು, ಸ್ವಯಂಚಾಲಿತ ಬಾಟ್‌ಗಳು ಮತ್ತು ಅಕ್ರಮ ಸಾಫ್ಟ್‌ವೇರ್ ಕಾರ್ಯಕ್ರಮಗಳ ಮೂಲಕ ತತ್ಕಾಲ್ ಬುಕಿಂಗ್ ವ್ಯವಸ್ಥೆಯಲ್ಲಿ ಸಮಸ್ಯೆಯಾಗುತ್ತಿದೆ. ಇದನ್ನು ತಡೆಯಲು ಬಲವಾದ ಸೈಬರ್-ಭದ್ರತಾ ಕ್ರಮಗಳನ್ನು ಜಾರಿಗೆ ತರಲು ಭಾರತೀಯ ರೈಲ್ವೇ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...