‘ಉದಯ್‌ಪುರ್ ಫೈಲ್ಸ್’ ಸಿನಿಮಾ ಮೇಲಿನ ತಡೆ ರದ್ದತಿಗೆ ಸುಪ್ರೀಂ ನಕಾರ; ತ್ವರಿತ ಕ್ರಮಕ್ಕಾಗಿ ಕೇಂದ್ರಕ್ಕೆ ಸೂಚನೆ

Date:

ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ತೇಲಿ ಹತ್ಯೆ ಪ್ರಕರಣವನ್ನು ಆಧರಿಸಿರುವ ‘ಉದಯ್‌ಪುರ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ. ಈ ತಡೆಯಾಜ್ಞೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ಕೂಡ ನಿರಾಕರಿಸಿದೆ. ತ್ವರಿತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಚಿಸಿರುವ ಸಮಿತಿಗೆ ಸೂಚನೆ ನೀಡಿದೆ

- Advertisement -

ದೆಹಲಿ ಹೈಕೋರ್ಟ್‌ನ ತಡೆ ಆದೇಶವನ್ನು ಪ್ರಶ್ನಿಸಿ ಚಿತ್ರತಂಡವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಸೂರ್ಯಕಾಂತ್ ಮತ್ತು ಜಾಯ್ ಮಾಲಾ ಬಾಗ್ಚಿ ಅವರಿದ್ದ ಪೀಠವು, ಹೈಕೋರ್ಟ್‌ ಆದೇಶವನ್ನು ರದ್ದುಗೊಳಿಸಲು ನಿರಾಕರಿಸಿದೆ. ಸಿನಿಮಾದ ಪರಿಶೀಲನೆಯನ್ನು ಮುಂದುವರೆಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ಒದಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಅಲ್ಲದೆ, ಸಿನಿಮಾದ ತುಣುಕುಗಳ ಬಗ್ಗೆ ಹೈಕೋರ್ಟ್‌ ಯಾವುದೇ ಅಭಿಪ್ರಾಯ, ಆಕ್ಷೇಪ ವ್ಯಕ್ತಪಡಿಸಿಲ್ಲ ಎಂಬುದನ್ನು ಚಿತ್ರತಂಡವು ಸುಪ್ರೀಂ ಕೋರ್ಟ್‌ ಗಮನಕ್ಕೆ ತಂದಿತು. ಇದನ್ನು, ಗಮನಿಸಿದ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರದಿಂದ ಪರಿಹಾರ ಪಡೆದುಕೊಳ್ಳುವಂತೆ ಸೂಚಿಸಿದೆ.

ಅಲ್ಲದೆ, ಉದಯ್‌ಪುರ್ ಫೈಲ್ ಸಿನಿಮಾ ಕುರಿತು ಬಂದಿರುವ ಆಕ್ಷೇಪಗಳನ್ನು ವಿಶ್ಲೇಷಿಸಲು ಕೇಂದ್ರ ಸರ್ಕಾರವು ರಚಿಸಿರುವ ಸಮಿತಿಯು ತ್ವರಿತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ.

‘ಉದಯ್‌ಪುರ್ ಫೈಲ್ಸ್’ ಸಿನಿಮಾ ಜುಲೈ 11ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಸಿನಿಮಾದ ಕುರಿತು ಆಕ್ಷೇಪಗಳು ವ್ಯಕ್ತವಾಗಿದ ಕಾರಣ, ಸಿನಿಮಾ ಬಿಡುಗಡೆಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ.

ಈ ಲೇಖನ ಓದಿದ್ದೀರಾ?: ತಮಿಳು ಚಿತ್ರರಸಿಕರು ಮೆಚ್ಚಿದ ‘ಕನ್ನಡತ್ತು ಪೈಂಕಿಳಿ’ ಬಿ. ಸರೋಜಾದೇವಿ

ಅಂದಹಾಗೆ, ಕನ್ಹಯ್ಯ ಲಾಲ್ ತೇಲಿ ಅವರು ಉದಯಪುರದ ಭೂತ್ ಮಹಲ್ ಮಾಲ್ದಾಸ್ ಬೀದಿಯಲ್ಲಿ ತಮ್ಮದೇ ಟೈಲರ್ ಅಂಗಡಿ ಹೊಂದಿದ್ದರು. ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಮುಹಮ್ಮದ್ ಪೈಗಂಬರ್ ಕುರಿತು ಮಾಡಿದ್ದ ಟೀಕೆಯನ್ನು ತೇಲಿ ಬೆಂಬಲಿಸಿದ್ದು, ಇಸ್ಲಾಂ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೇ ಕಾರಣಕ್ಕಾಗಿ, 2022ರ ಜೂನ್ 28ರಂದು ತೇಲಿ ಅವರ ಶಿರಚ್ಛೇದ ಮಾಡಿ ಇಬ್ಬರು ದಾಳಿಕೋರರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಪ್ರಕರಣವನ್ನು ಆಧರಿಸಿ ‘ಉದಯ್‌ಪುರ್ ಫೈಲ್ಸ್‌’ ಸಿನಿಮಾ ಮಾಡಲಾಗಿದೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...