UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

Date:

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ ಮೇಲಿನ ‘ಮರ್ಚೆಂಟ್ ಡಿಸ್ಕೌಂಟ್ ರೇಟ್’ (MDR) ವ್ಯವಸ್ಥೆಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

- Advertisement -

ಡಿಜಿಟಲ್ ಪಾವತಿ ವ್ಯವಸ್ಥೆಗೆ ಕೇಂದ್ರ ಸರ್ಕಾರ ತಂದಿರುವ ಹೊಸ ನಿಯಮಾವಳಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿದೆ. ಯುಪಿಐ ವಹಿವಾಟಿನ ಮೇಲಿನ ಶುಲ್ಕಕ್ಕೆ ಮಧ್ಯಂತರ ತಡೆ ನೀಡಲು ನಿಕಾರಿಸಿದ ನ್ಯಾಯಾಲಯವು, ಕೇಂದ್ರ ಸರ್ಕಾರ, ರಿಸರ್ವ್ ಬ್ಯಾಂಕ್ (RBI) ಹಾಗೂ ಎನ್‌ಪಿಸಿಐ (NPCI) ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿದೆ. 4 ವಾರಗಳ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ವಿಚಾರಣೆ ವೇಳೆ ವಾದ ಮಂಡಿಸಿದ ವಕೀಲ ಅಂಜನ್ ದತ್ತಾ, “ಸರ್ಕಾರವೇ ಹಣವನ್ನು ಸಂಗ್ರಹಿಸದಿರುವಾಗ ಈ ಶುಲ್ಕವನ್ನು ವಿಧಿಸಲು ಇರುವ ಶಾಸನಬದ್ಧ ಆಧಾರವೇನು” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರದ ಹೆಚ್ಚುವರಿ ಸೊಲಿಸಿಟರ್ ಜನರಲ್ ಎನ್. ವೆಂಕಟರಾಮನ್, “ಈ ಎಂಡಿಆರ್ ಶುಲ್ಕವು ಸರ್ಕಾರ ಸಂಗ್ರಹಿಸುವ ಯಾವುದೇ ರೀತಿಯ ತೆರಿಗೆಯಲ್ಲ. ಈ ಶುಲ್ಕವು ಪಾವತಿ ವ್ಯವಸ್ಥೆಯೊಳಗಿನ ಬ್ಯಾಂಕುಗಳು, ಪಾವತಿ ಸೇವಾ ಪೂರೈಕೆದಾರರು ಹಾಗೂ ತಾಂತ್ರಿಕ ಪ್ಲಾಟ್‌ಫಾರ್ಮ್‌ಗಳ ನಡುವೆ ಹಂಚಿಕೆಯಾಗಲಿದೆ” ಎಂದು ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ ಭಾರತ

ಅಕ್ಟೋಬರ್ 15ರಿಂದ ಹೊಸ ನಿಯಮಗಳ ಜಾರಿಯಾಗಲಿದ್ದು; ಇಬ್ಬರು ವ್ಯಕ್ತಿಗಳ (P2P – Person to Person) ನಡುವೆ ನಡೆಯುವ ಹಣ ವರ್ಗಾವಣೆಗೆ ಮೊತ್ತದ ಮಿತಿ ಇಲ್ಲದೆ ಸಂಪೂರ್ಣ ಉಚಿತವಾಗಿರುತ್ತದೆ. ಆದರೆ, 2,000 ರೂ.ಗಿಂತ ಹೆಚ್ಚಿನ ವ್ಯಾಪಾಯ ವಹಿವಾಟಿನಲ್ಲಿ ವ್ಯಕ್ತಿಯಿಂದ ವರ್ತಕನಿಗೆ (P2M) ನಡೆಯುವ ವಹಿವಾಟುಗಳಿಗೆ 0.4%ರಷ್ಟು ಎಂಡಿಆರ್ ಶುಲ್ಕ ಅನ್ವಯಿಸುತ್ತದೆ. 75,000 ರೂ.ಗಿಂತ ಹೆಚ್ಚಿನ ಮೊತ್ತದ ವಹಿವಾಟುಗಳಿಗೆ ಗರಿಷ್ಠ 300 ರೂ.ರವರೆಗೆ ಶುಲ್ಕದ ಮಿತಿ ಇರಲಿದೆ. ಈ ಶುಲ್ಕ ವ್ಯವಸ್ಥೆಯನ್ನು ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ವಿಪಕ್ಷಗಳು ಆರೋಪಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...