ಹಿಮಾಚಲ ಪ್ರದೇಶ ವಿಧಾನಸಭೆಯ ಸ್ಪೀಕರ್ ಸದನದ ನಿಯಮಗಳನ್ನು ಉಲ್ಲಂಘಿಸಿದ 6 ಶಾಸಕರನ್ನು ಅನರ್ಹಗೊಳಿಸಿದ ನಿರ್ಧಾರ ಕ್ರಮಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅನರ್ಹತೆಗೊಂಡ ಆರು ಶಾಸಕರ ಸಂಬಂಧಿತ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಸ್ಪೀಕರ್ ಅನರ್ಹತೆಗೊಳಿಸಿದ ಕ್ರಮ ಪ್ರಶ್ನಿಸಿ ಕಾಂಗ್ರೆಸ್‌ನ 6 ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ವಿಚಾರಣೆ ಇಂದು ನಡೆಯಿತು. ಬಂಡಾಯ ಶಾಸಕರ ಪರ ನ್ಯಾಯವಾದಿ ಹರೀಶ್ ಸಾಳ್ವೆ ವಾದ ಮಂಡಿಸಿದರು.
ಇತ್ತೀಚಿಗೆ ಕೆಲವು ದಿನಗಳ ಹಿಂದೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಪರವಾಗಿ ಮತ ಚಲಾಯಿಸಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು
ಬಂಡಾಯ ಶಾಸಕರು ಅಡ್ಡ ಮತದಾನ ಮಾಡಿದ ಪರಿಣಾಮ ರಾಜ್ಯಸಭೆಯ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಸೋಲು ಅನುಭವಿಸಿದ್ದರು.
ನಂತರದಲ್ಲಿ ಸ್ಪೀಕರ್ ಕುಲ್‌ದೀಪ್ ಸಿಂಗ್ ಪಟಾನಿಯಾ ಅವರು ಪಕ್ಷದ ವಿಪ್ ಉಲ್ಲಂಘಿಸಿದ 6 ಶಾಸಕರನ್ನು ಅನರ್ಹಗೊಳಿಸಿದ್ದರು. ಇದೇ ಸಂದರ್ಭದಲ್ಲಿ ಸದನದಲ್ಲಿ ಗದ್ದಲ ಉಂಟು ಮಾಡಿದ ಕಾರಣಕ್ಕಾಗಿ 15 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿತ್ತು.
