ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Date:

ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧದ ಅರ್ಜಿಯ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಈ ವಿಚಾರವನ್ನು ಅಷ್ಟೊಂದು ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ ಎಂದು ಅರ್ಜಿದಾರರಿಗೆ ಹೇಳಿದೆ.

- Advertisement -

ಉದ್ಯೋಗ ಸಿಗದ ಕೆಲವು ಯುವಕರು ‘ಜಿರಳೆಗಳಂತೆ’ ಹೆಚ್ಚುತ್ತಾ, ಸಮಾಜದಲ್ಲಿ ವ್ಯವಸ್ಥೆಯ ಮೇಲೆ ದಾಳಿ ಮಾಡಲು ಆರಂಭಿಸುತ್ತಾರೆ ಎಂಬ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೇಳಿಕೆಯು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಎಂಬ ವಿಡಂಬನಾತ್ಮಕ ಸಾಮಾಜಿಕ ಮಾಧ್ಯಮ ಚಳವಳಿಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನು ಓದಿದ್ದೀರಾ? ‘ಕಾಕ್ರೋಚ್‌ ಪಾರ್ಟಿ’ ಹವಾ: ಪ್ರತಿಪಕ್ಷಗಳಿಗೆ ಕೊಟ್ಟ ಎಚ್ಚರಿಕೆ ಏನು?

ಸಿಜೆಐ ತಾವು ನಕಲಿ ಪದವೀಧರರನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದು ಎಂದು ಹೇಳಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಖಾತೆ ತೆರೆದ ಕೆಲವೇ ದಿನಗಳಲ್ಲಿ ಲಕ್ಷಾಂತರ ಫಾಲೋವರ್ಸ್ ಆಗಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರವು ಗುಪ್ತಚರ ಇಲಾಖೆಯ ಸಲಹೆ ಎಂಬ ನೆಪ ನೀಡಿ ಈ ಖಾತೆಯನ್ನು ಬ್ಯಾನ್ ಮಾಡಿದೆ.

ಈ ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯೂ ಸಲ್ಲಿಕೆಯಾಗಿದೆ. ಕಾಕ್ರೋಚ್ ಜನತಾ ಪಾರ್ಟಿಗೆ ಸಂಬಂಧಿಸಿದ ವ್ಯಕ್ತಿಗಳ ಚಟುವಟಿಕೆಗಳ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕೆಂದು ಈ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಎನ್ ಕೆ ಗೋಸ್ವಾಮಿ, ಈ ಸಿಜೆಪಿ ನ್ಯಾಯಾಂಗದ ವರ್ಚಸ್ಸಿಗೆ ಕಳಂಕ ತರುತ್ತಿದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಎಂ ಪಾಂಚೋಲಿ ಅವರನ್ನು ಒಳಗೊಂಡ ಪೀಠವು, “ಈ ವಿಚಾರವನ್ನು ಅಷ್ಟೊಂದು ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ. ಅಂತಹ ಗಂಭೀರ ತುರ್ತು ಏನಿಲ್ಲ. ನಾವು ನೋಡುತ್ತೇವೆ” ಎಂದು ಅರ್ಜಿದಾರರಿಗೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...