ಬಕ್ರೀದ್ ಹೊಸ್ತಿಲಲ್ಲಿ ‘ಗೋಹತ್ಯೆ ನಿಷೇಧ’ ಕಾಯ್ದೆ ಬಿಗಿ ಜಾರಿಗೆ ಕೋರಿಕೆ; ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Date:

ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್-ಉಲ್-ಅದ್ಹಾ (ಬಕ್ರೀದ್) ಆಚರಣೆಗೆ ಕೇವಲ ಎರಡು ದಿನಗಳಷ್ಟೇ ಬಾಕಿ ಇವೆ. ಇದೇ ಸಮಯದಲ್ಲಿ, ದೇಶಾದ್ಯಂತ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ಸಂಪೂರ್ಣ ನಿಷೇಧ ಹೇರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ‘ಅರ್ಜಿಯಲ್ಲಿ ಯಾವುದೇ ಅಸಾಧಾರಣ ತುರ್ತು ಇಲ್ಲ. ತುರ್ತಾಗಿ ವಿಚಾರಣೆ ನಡೆಸುವ ಅಗತ್ಯವೇನೂ ಕಾಣುತ್ತಿಲ್ಲ’ ಎಂದು ಹೇಳಿದೆ.

- Advertisement -

ಹಿಂದು ಮಹಾಸಭಾದ ಮಾಜಿ ಉಪಾಧ್ಯಕ್ಷ ಸತೀಶ್ ಕುಮಾರ್ ಅಗರ್ವಾಲ್ ಎಂಬಾತ ಸಲ್ಲಿಸಿದ್ದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಆಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಅರ್ಜಿದಾರ ಸತೀಶ್‌ ಅರ್ಗವಾಲ್ ಎಂಬಾತ ತಮ್ಮ ಅರ್ಜಿಯಲ್ಲಿ; “ಬಕ್ರೀದ್ ಹಬ್ಬದ ಅವಧಿಯಲ್ಲಿ ನಡೆಯಬಹುದಾದ ಕಾನೂನುಬಾಹಿರ ಕಸಾಯಿಖಾನೆಗಳ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಹಸುವನ್ನು ಮತ್ತು ಅದರ ಸಂತತಿಯನ್ನು ಹತ್ಯೆಯಿಂದ ರಕ್ಷಿಸಲು ದೇಶದಲ್ಲಿರುವ ಗೋಹತ್ಯೆ ವಿರೋಧಿ ಕಾಯ್ದೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು. ದೇಶದ ಪ್ರತಿಯೊಂದು ರಾಜ್ಯದಲ್ಲಿಯೂ ಅಸ್ತಿತ್ವದಲ್ಲಿರುವ ಕಾನೂನಿನ ಚೌಕಟ್ಟಿಗೆ ಅನುಗುಣವಾಗಿ ಕಸಾಯಿಖಾನೆಗಳನ್ನು ನಿಯಂತ್ರಿಸಲು ಮತ್ತು ನಿರ್ವಹಿಸಲು ಸೂಕ್ತ ಮಾರ್ಗಸೂಚಿಗಳನ್ನು ಪ್ರಕಟಿಸುವಂತೆ ರಾಜ್ಯ ಸರ್ಕಾರಗಳಿಗೆ ಆದೇಶಿಸಬೇಕು” ಎಂದು ಕೋರಿದ್ದರು.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ವಕೀಲ ಬರುಣ್ ಕುಮಾರ್ ಸಿನ್ಹಾ, “ನಾಡಿದ್ದು (ಮೇ 28) ಬಕ್ರೀದ್ ಹಬ್ಬ ಇರುವುದರಿಂದ ದೇಶಾದ್ಯಂತ ಗೋಹತ್ಯೆ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮಧ್ಯಂತರ ಆದೇಶದ ಅಗತ್ಯವಿದೆ. ಆದ್ದರಿಂದ ಈ ಅರ್ಜಿಯನ್ನು ಬುಧವಾರವೇ (ಮೇ 27) ತುರ್ತು ಪಟ್ಟಿಗೆ ಸೇರಿಸಿ ವಿಚಾರಣೆ ನಡೆಸಬೇಕು” ಎಂದು ಕೋರಿದರು.

ಅವರ ವಾದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, “ನಿಮಗೆ ಹಬ್ಬದ ಕೇವಲ ಒಂದು ದಿನದ ಮುಂಚೆಯಷ್ಟೇ ಈ ವಿಷಯ ನೆನಪಿಗೆ ಬಂದಿದೆಯೇ? ಇದರಲ್ಲಿ ನಮಗೆ ಯಾವುದೇ ತುರ್ತು ಅಗತ್ಯ ಕಾಣಿಸುತ್ತಿಲ್ಲ. ಧನ್ಯವಾದಗಳು” ಎಂದು ಹೇಳುವ ಮೂಲಕ ತುರ್ತು ವಿಚಾರಣೆಯ ಮನವಿಯನ್ನು ಕಠಿಣವಾಗಿಯೇ ತಿರಸ್ಕರಿಸಿದ್ದಾರೆ.

ವಿಸ್ತೃತವಾದ ಕಾನೂನು ಪರಿಶೀಲನೆ ಇಲ್ಲದೆ ಹಬ್ಬದ ಸಂದರ್ಭದಲ್ಲಿ ತರಾತುರಿಯಲ್ಲಿ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.

ಈ ಲೇಖನ ಓದಿದ್ದೀರಾ?: ಕನ್ನಡಿಗರೇ ಗಮನಿಸಿ: ನಿಮ್ಮ ಗ್ಯಾರಂಟಿ ಯೋಜನೆ, ಸರ್ಕಾರಿ ಸೌಲಭ್ಯಗಳನ್ನೂ ಕಸಿದುಕೊಳ್ಳುತ್ತದೆ ‘ಎಸ್‌ಐಆರ್’

ಗಮನಾರ್ಹವಾಗಿ, ಭಾರತದಲ್ಲಿ ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಯಾವುದೇ ಏಕರೂಪದ ಕೇಂದ್ರ ಕಾನೂನು ಇಲ್ಲ. ಇದು ಸಂಪೂರ್ಣವಾಗಿ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುತ್ತದೆ. ಉತ್ತರ ಪ್ರದೇಶ, ಗುಜರಾತ್, ಹರಿಯಾಣ, ಕರ್ನಾಟಕ ಹಾಗೂ ರಾಜಸ್ಥಾನ ಸೇರಿದಂತೆ ಕೆಲವು ರಾಜ್ಯಗಳು ಮಾತ್ರವೇ ತಮ್ಮದೇ ಆದ ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಹೊಂದಿವೆ.

ಇತ್ತೀಚೆಗಷ್ಟೇ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರವು ಬಕ್ರೀದ್ ಹಬ್ಬದ ಮುನ್ನ ಪ್ರಾಣಿ ಬಲಿ ಮತ್ತು ಕಸಾಯಿಖಾನೆಗಳನ್ನು ನಿಯಂತ್ರಿಸುವ ಆದೇಶ ಹೊರಡಿಸಿದೆ. ಈ ಆದೇಶಕ್ಕೆ ಸೂಕ್ತವಾಗಿ ಪ್ರತಿಕ್ರಿಯಿಸಿರುವ ಮುಸ್ಲಿಂ ಸಮುದಾಯವು, ನಾವು ಹಬ್ಬದಲ್ಲಿ ದನಗಳ ಹತ್ಯೆ ಮಾಡುವುದೂ ಇಲ್ಲ ಮತ್ತು ರೈತರಿಂದ ದನಗಳನ್ನು ಖರೀದಿಸುವುದೂ ಇಲ್ಲವೆಂದು ದೃಢ ನಿರ್ಧಾರ ಮಾಡಿದ್ದಾರೆ. ಹಸುಗಳನ್ನು ಮಾರಲು ಬಂದ ಹಿಂದು ರೈತರಿಗೆ, “ನಿಮ್ಮ ತಾಯಿ ಸ್ವರೂಪವಾದ ಹಸುಗಳನ್ನು ಯಾಕೆ ಮಾರಲು ಬಂದಿದ್ದಾರೆ. ಮರಳಿ ಮನೆಗೆ ಕೊಂಡೊಯ್ದು ಸಾಕಿರಿ” ಎಂದು ವಾಪಸ್‌ ಕಳಿಸುತ್ತಿದ್ದಾರೆ.

ಈ ನೂತನ ಪ್ರತಿಭಟನೆಯು ದೇಶವ್ಯಾಪ್ತಿ ವಿಸ್ತರಿಸುತ್ತಿದ್ದು, ಕರ್ನಾಟಕದ ಹಾಸನದಲ್ಲೂ ಇದೇ ರೀತಿಯಲ್ಲಿ ಮುಸ್ಲಿಂ ಸಮುದಾಯವು ನಿರ್ಧಾರ ಮಾಡಿದೆ. ಸಂತೆಗಳಲ್ಲಿ ಮುಸ್ಲಿಮರು ಹಸು/ದನಗಳ ಖರೀದಿಗೆ ಹೋಗಿಲ್ಲ. ಪರಿಣಾಮ, ರೈತರು ತಮ್ಮ ದನಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ಕರೆತಂದು, ಜಿಲ್ಲಾಡಳಿತವೇ ಖರೀದಿಸುವಂತೆ ಒತ್ತಾಯಿಸಿ, ಪ್ರತಿಭಟನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...