ಇದು ಮುಕ್ತ ಮಾರುಕಟ್ಟೆ: ಇಂಟರ್‌ನೆಟ್ ಬೆಲೆ ನಿಯಂತ್ರಿಸಲು ಕೋರಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

Date:

ಇಂಟರ್‌ನೆಟ್ ಬೆಲೆ ನಿಯಂತ್ರಿಸಲು ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, “ಇದು ಮುಕ್ತ ಮಾರುಕಟ್ಟೆ” ಎಂದು ಹೇಳಿದೆ. ಸದ್ಯ ದೇಶದಲ್ಲಿ ಬಹುತೇಕ ಎಲ್ಲಾ ಸಂಸ್ಥೆಗಳು ಇಂಟರ್‌ನೆಟ್ ಬೆಲೆಯನ್ನು ಏರಿಸಿವೆ. ಈ ಬೆಲೆಯನ್ನು ನಿಯಂತ್ರಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

- Advertisement -

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್‌ ಅವರ ದ್ವಿಸದಸ್ಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಹಲವು ಸಂಸ್ಥೆಗಳ ಇಂಟರ್‌ನೆಟ್ ಸೇವೆಯನ್ನು ಬಳಸುತ್ತಿರುವ ಗ್ರಾಹಕರಾದ ರಜತ್ ಎಂಬವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ವಾಟ್ಸಾಪ್‌ನಲ್ಲಿ ಇಂಟರ್‌ನೆಟ್ ಇಲ್ಲದೆ ಫೈಲ್‌ಗಳು, ಇಮೇಜ್‌ಗಳ ಶೇರಿಂಗ್ ಆಯ್ಕೆ

“ಇದು ಮುಕ್ತ ಮಾರುಕಟ್ಟೆಯಾಗಿದೆ. ಇಂಟರ್‌ನೆಟ್ ಬಳಸಲು ಹಲವು ಆಯ್ಕೆಗಳಿವೆ. ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ ಕೂಡಾ ಇಂಟರ್‌ನೆಟ್ ಸೇವೆಯನ್ನು ನೀಡುತ್ತದೆ” ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

ಆದರೆ ಇಂಟರ್‌ನೆಟ್ ಮಾರುಕಟ್ಟೆಯಲ್ಲಿ ಬಹುತೇಕ ಷೇರುಗಳನ್ನು ಜಿಯೋ ಮತ್ತು ರಿಲಯನ್ಸ್ ನಿಯಂತ್ರಿಸುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್ ಪೀಠವು, “ನೀವು ಕೇಂದ್ರೀಕರಣದ ಬಗ್ಗೆ ಆರೋಪ ಮಾಡುವುದಾದರೆ, ಭಾರತದ ಸ್ಪರ್ಧಾ ಆಯೋಗಕ್ಕೆ ಅರ್ಜಿ ಸಲ್ಲಿಸಿ” ಎಂದು ಪೀಠವು ಸಲಹೆ ನೀಡಿದೆ.

ದೇಶದಲ್ಲಿ ರಿಲಯನ್ಸ್ ಜಿಯೋ ಇಂಟರ್‌ನೆಟ್ ಮಾರುಕಟ್ಟೆಯನ್ನು ತನ್ನ ಹತೋಟಿಗೆ ಪಡೆದುಕೊಂಡಿದೆ. ಆರಂಭದಲ್ಲಿ ಉಚಿತ ಸಿಮ್, ಉಚಿತ ಇಂಟರ್‌ನೆಟ್ ನೀಡುವ ಮೂಲಕ ಜನರು ಇತರೆ ಇಂಟರ್‌ನೆಟ್ ತೊರೆದು ಜಿಯೋ ಇಂಟರ್‌ನೆಟ್‌ ಅನ್ನು ಬಳಸುವಂತೆ ಮಾಡಿದ ರಿಲಯನ್ಸ್ ಬಳಿಕ ಇಂಡಸ್ಟ್ರಿಯನ್ನು ಆವರಿಸಿಕೊಂಡಿದೆ. ಬಿಎಸ್‌ಎನ್‌ಎಲ್ ಸೇವೆಗೆ ಪ್ರಾಧಾನ್ಯತೆ ನೀಡಬೇಕಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ರಿಲಯನ್ಸ್ ಸಂಸ್ಥೆಗೆ ಸಹಾಯ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...