ವಿವಿಪ್ಯಾಟ್ ಪರಿಶೀಲನಾ ಗುರುತಿನ ಚೀಟಿ, ಮತಪತ್ರ ಚುನಾವಣಾ ಪ್ರಕ್ರಿಯೆಗೆ ಸುಪ್ರೀಂ ತಿರಸ್ಕಾರ

Date:

ಇವಿಎಂನಲ್ಲಿ ಮತ ಚಲಾಯಿಸಿದ ನಂತರ ಮತದಾರರಿಗೆ ವಿವಿಪ್ಯಾಟ್ ಮೂಲಕ ಪರಿಶೀಲನಾ ಚೀಟಿ ನೀಡುವ ಪ್ರಕ್ರಿಯೆಗೆ ಕೋರಲಾಗಿದ್ದ ಎಲ್ಲ ಮನವಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತಾ ನೇತೃತ್ವದ ದ್ವಿಸದಸ್ಯ ಪೀಠ ಚುನಾವಣೆಗಳಲ್ಲಿ ಮತಪತ್ರಕ್ಕೆ ಹಿಂತಿರುಗುವ ಬೇಡಿಕೆಯನ್ನು ಸಹ ತಿರಸ್ಕರಿಸಿತು.

- Advertisement -

“ನಾವು ಮತ್ತೆ ಮತಪತ್ರ ತರುವ ಸಂಬಂಧಿತ ಅರ್ಜಿಗಳನ್ನು ತಿರಸ್ಕರಿಸಿದ್ದೇವೆ” ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸಂಜೀವ್‌ ಖನ್ನಾ ತಮ್ಮ ಆದೇಶದಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಮತದಾರರರಿಗೆ ವಿವಿ ಪ್ಯಾಟ್ ಪರಿಶೀಲನಾ ಗುರುತಿನ ಚೀಟಿ ಹಾಗೂ ಮತಪತ್ರ ಚುನಾವಣಾ ವ್ಯವಸ್ಥೆ ಜಾರಿಗೊಳಿಸುವಂತೆ ಸ್ವಯಂಸೇವಾ ಸಂಸ್ಥೆ ಎಡಿಆರ್ ಹಾಗೂ ಅಭಯ್‌ ಭಕ್‌ಚಾಂದ್‌ ಮತ್ತು ಅರುಣ್ ಕುಮಾರ್ ಅಗರ್‌ವಾಲ್‌ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಭಾರತದ ಚುನಾವಣಾ ಆಯೋಗ ಎರಡು ನಿರ್ದೇಶನಗಳನ್ನು ನೀಡಿದ್ದು, ಮತದಾನದ ನಂತರ ಚಿಹ್ನೆ ಬರುವ ಪ್ರಕ್ರಿಯೆ(ಎಸ್‌ಎಲ್‌ಯು) ಪೂರ್ಣಗೊಂಡ ನಂತರ ಎಸ್‌ಎಲ್‌ಯುವನ್ನು ಮುಚ್ಚಿಡಲಾಗುತ್ತದೆ. ಎಸ್‌ಎಲ್‌ಯು ಕನಿಷ್ಠ 45 ದಿನಗಳ ಅವಧಿಯವರೆಗೂ ಸಂಗ್ರಹಿಸಡಿಲಾಗುತ್ತದೆ ಎಂದು ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಫಲಿತಾಂಶದ ನಂತರ ಅಭ್ಯರ್ಥಿಗಳು ಮನವಿ ಮಾಡಿದರೆ ಇಂಜಿನಿಯರ್‌ಗಳ ತಂಡ ಇವಿಎಂನ ಮೈಕ್ರೋ ಕಂಟ್ರೋಲರ್‌ಗಳಲ್ಲಿರುವ ಮತದಾನದ ಮಾಹಿತಿಯನ್ನು ಪರಿಶೀಲಿಸಬೇಕು. ಅಂತಹ ಮನವಿಗಳು ಫಲಿತಾಂಶ ಪ್ರಕಟಗೊಂಡ 7 ದಿನಗಳೊಳಗೆ ನಿರ್ಧಾರವಾಗಬೇಕು. ಮನವಿ ಮಾಡಿದ ಅಭ್ಯರ್ಥಿಗಳೇ ಪರಿಶೀಲನಾ ವೆಚ್ಚವನ್ನು ಭರಿಸಬೇಕು. ಒಂದು ವೇಳೆ ಇವಿಎಂನಲ್ಲಿ ಮಾಹಿತಿ ಅಳಿಸಿಹೋಗಿದ್ದರೆ ವೆಚ್ಚಗಳನ್ನು ವಾಪಸ್‌ ಮಾಡಬೇಕು ಎಂದು ನ್ಯಾಯಮೂರ್ತಿಗಳಾದ ಸಂಜಯ್‌ ಖನ್ನಾ ತಮ್ಮ ಆದೇಶದಲ್ಲಿ ತಿಳಿಸಿದರು.

ಒಂದು ವ್ಯವಸ್ಥೆಯನ್ನು ಕುರುಡಾಗಿ ಅಪನಂಬಿಕೆ ಮಾಡುವುದು ಅನಗತ್ಯ ಅನುಮಾನಗಳಿಗೆ ಕಾರಣವಾಗಬಹುದು. ಪ್ರಜಾಪ್ರಭುತ್ವವನ್ನು ಎಲ್ಲ ಆಧಾರಸ್ತಂಭಗಳ ನಡುವೆ ಸಾಮರಸ್ಯ ಹಾಗೂ ಶಾಂತಿಯೊಂದಿಗೆ ಕಾಪಾಡಿಕೊಳ್ಳಬೇಕು. ನಂಬಿಕೆ ಹಾಗೂ ಸಹಯೋಗದ ಸಂಸ್ಖೃತಿಯನ್ನು ಪೋಷಿಸುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಧನಿಯನ್ನು ನಾವು ಬಲಪಡಿಸಬೇಕು ಎಂದು ನ್ಯಾಯಮೂರ್ತಿ ದೀಪಂಕರ್‌ ದತ್ತಾ ತನ್ನ ತೀರ್ಪಿನಲ್ಲಿ ತಿಳಿಸಿದರು.

ಈ ವ್ಯವಸ್ಥೆಯು ಮತದಾರನನ್ನು ವಿಫಲಗೊಳಿಸುವುದಿಲ್ಲ ಎಂದು ಭರವಸೆಯಿಡುತ್ತೇನೆ ಹಾಗೂ ನಂಬುತ್ತೇನೆ. ಸಾರ್ವಜನಿಕರು ಮತ ಚಲಾಯಿಸುವ ಹಾಗೂ ಮತ ಎಣಿಕೆಯ ಸಂದರ್ಭದಲ್ಲಿ ಇದು ಸಂಪೂರ್ಣವಾಗಿ ಪ್ರತಿಫಲಿಸಲಿದೆ ಎಂದು ನ್ಯಾಯಮೂರ್ತಿ ದೀಪಂಕರ್‌ ದತ್ತಾ ಅವರು ತಮ್ಮ ಆದೇಶದಲ್ಲಿ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ ಸರ್ಕಾರದಲ್ಲಿ ಭಿನ್ನಮತ ಸ್ಫೋಟ; ಮುಖ್ಯಮಂತ್ರಿ ವಿರುದ್ಧವೇ ತಿರುಗಿಬಿದ್ದ ಯುಡಿಎಫ್ ಸಂಚಾಲಕ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ...

ಸಾಮಾನ್ಯರಿಗೆ ಮತ್ತೆ ‘ಇಎಂಐ’ ಬರೆ: ರೆಪೊ ದರ ಶೇ. 0.25ರಷ್ಟು ಹೆಚ್ಚಳಕ್ಕೆ ಆರ್‌ಬಿಐ ಒಲವು

ದೇಶದಲ್ಲಿ ಏರಿಕೆಯಾಗುತ್ತಿರುವ ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...