ಲಕ್ಷಾಂತರ ಹೆಣ್ಣುಮಕ್ಕಳ ಆರೋಗ್ಯದ ಪ್ರಶ್ನೆ: ಎಚ್‌ಪಿವಿ ಲಸಿಕೆ ವಿರುದ್ಧದ ಅರ್ಜಿಗೆ ಸುಪ್ರೀಂ ಕೋರ್ಟ್ ತರಾಟೆ

Date:

ದೇಶಾದ್ಯಂತ ಹದಿಹರೆಯದ ಹೆಣ್ಣುಮಕ್ಕಳಲ್ಲಿ ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟಲು ಕೇಂದ್ರ ಸರ್ಕಾರ ಕೈಗೊಂಡಿರುವ ‘ಹ್ಯೂಮನ್ ಪ್ಯಾಪಿಲೋಮವೈರಸ್’ (ಎಚ್‌ಪಿವಿ) ಲಸಿಕೆ ಅಭಿಯಾನದ ವಿರುದ್ಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಪುರಸ್ಕರಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ಪೀಠವು ಯುನಿವರ್ಸಲ್ ಹೆಲ್ತ್ ಆರ್ಗನೈಸೇಶನ್ ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಉದ್ದೇಶವನ್ನು ಪ್ರಶ್ನಿಸಿದ ನ್ಯಾಯಪೀಠವು, “ಇದು ನಮ್ಮ ಲಕ್ಷಾಂತರ ಹೆಣ್ಣುಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಅತ್ಯಂತ ಗಂಭೀರ ವಿಚಾರವಾಗಿದೆ. ಅರ್ಜಿದಾರರ ಪೈಕಿ ವೈದ್ಯರೇ ಇದ್ದರೂ ಇಂತಹ ಅಭಿಯಾನವನ್ನು ಹಳಿ ತಪ್ಪಿಸಲು ಯತ್ನಿಸುತ್ತಿರುವುದು ಸರಿಯಲ್ಲ” ಎಂದು ಮೌಖಿಕವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿ: ಮಹಿಳೆಯರನ್ನು ಗರ್ಭಕೋಶ ಕ್ಯಾನ್ಸರ್‌ನಿಂದ ರಕ್ಷಿಸಲು ಎಚ್‌ಪಿವಿ ಲಸಿಕೆ ಅತ್ಯಗತ್ಯ: ಡಾ. ಮಂಗಳ

ಅರ್ಜಿಯಲ್ಲಿ ಯಾವುದೇ ಸದ್ಭಾವನೆ ಇಲ್ಲ ಮತ್ತು ದುರುದ್ದೇಶದಿಂದ ಕೂಡಿದೆ ಎಂದು ನ್ಯಾಯಾಲಯ ಹೇಳಿದಾಗ, ಅರ್ಜಿದಾರರ ಪರ ವಕೀಲರು ತಾವು ಲಸಿಕೆಯನ್ನು ವಿರೋಧಿಸುತ್ತಿಲ್ಲ, ಬದಲಾಗಿ ಲಸಿಕೆಯಿಂದಾಗುವ ಅಡ್ಡಪರಿಣಾಮಗಳು ಮತ್ತು ಪರಿಹಾರದ ನಿಯಮಗಳ ಬಗ್ಗೆ ಮಾತ್ರ ಗಮನ ಸೆಳೆಯುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಯಾವುದಾದರೂ ತಪ್ಪಾದ ಲಸಿಕೆ ನೀಡಿಕೆ ಅಥವಾ ಅಡ್ಡಪರಿಣಾಮಗಳ ಪ್ರಕರಣಗಳಲ್ಲಿ ಸಾಮಾನ್ಯ ಪರಿಹಾರ ನಿಯಮಗಳು ಅನ್ವಯಿಸುತ್ತವೆ ಎಂದು ಸ್ಪಷ್ಟಪಡಿಸಿದ ಸುಪ್ರೀಂ ಕೋರ್ಟ್, ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿತು. ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ನಿಲುವಿನ ಬಳಿಕ ಅರ್ಜಿದಾರರು ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...