ಇಸ್ಲಾಂಗೆ ಮತಾಂತರಗೊಂಡ ಒಬಿಸಿ, ಪರಿಶಿಷ್ಟರಿಗೆ ಮೀಸಲಾತಿ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Date:

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ಒಬಿಸಿ ಅಥವಾ ಪರಿಶಿಷ್ಟ ಸಮುದಾಯದವರು ತಮಿಳುನಾಡಿನ ‘ಹಿಂದುಳಿದ ವರ್ಗ–ಮುಸ್ಲಿಂ’ (BC-Muslim) ಮೀಸಲಾತಿ ಸೌಲಭ್ಯ ಪಡೆಯುವುದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತನ್ನ ತೀರ್ಪನ್ನು ಕಾಯ್ದಿರಿಸಿದೆ.

- Advertisement -

ಇಸ್ಲಾಂಗೆ ಮತಾಂತರಗೊಂಡ ಮಾತ್ರಕ್ಕೆ ನಿರ್ದಿಷ್ಟವಾಗಿ ಅಧಿಸೂಚಿತ ಮುಸ್ಲಿಂ ಹಿಂದುಳಿದ ಸಮುದಾಯಕ್ಕೆ ಸೇರಿದವರೆಂದು ಪರಿಗಣಿಸಿ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಈ ಹಿಂದೆ ತೀರ್ಪು ನೀಡಿತ್ತು. ವ್ಯಕ್ತಿಯೊಬ್ಬರು ‘ಹಿಂದುಳಿದ ವರ್ಗ-ಮುಸ್ಲಿಂ’ ಮೀಸಲಾತಿ ಕೋರಿ ಸಲ್ಲಿಸಿದ್ದ ಅರ್ಜಿ ಮತ್ತು ತಮಿಳುನಾಡು ಸರ್ಕಾರ ಜಾರಿಗೊಳಿಸಿದ್ದ ಮುಸ್ಲಿಂ ಮೀಸಲಾತಿ ಆದೇಶವನ್ನು ಮದ್ರಾಸ್‌ ಹೈಕೋರ್ಟ್‌ ರದ್ದುಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ತಮಿಳು ಸರ್ಕಾರದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಶ್ರೀ ಚಂದ್ರಶೇಖರ್ ಅವರ ಪೀಠ ವಿಚಾರಣೆ ನಡೆಸಿದೆ. ತಮಿಳುನಾಡು ಸರ್ಕಾರದ ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿ, “ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳ ಸದಸ್ಯರು ಇಸ್ಲಾಂಗೆ ಮತಾಂತರಗೊಂಡ ಕಾರಣಕ್ಕೆ ಅವರು ಮೀಸಲಾತಿ ಸೌಲಭ್ಯಗಳಿಂದ ವಂಚಿತರಾಗಬಾರದು. ಆದ್ದರಿಂದ, ಮದ್ರಾಸ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಬೇಕು” ಎಂದು ಮನವಿ ಮಾಡಿದರು. ಅಂತೆಯೇ, ಪ್ರಕರಣದ ಮೂಲ ಅರ್ಜಿದಾರರಾಗಿರುವ ಸಮೀರ್ ಅಹಮದ್ ಪರವಾಗಿ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ವಾದ ಮಂಡಿಸಿ, ಹೈಕೋರ್ಟ್‌ ಆದೇಶವನ್ನು ರದ್ದುಗೊಳಿಸಬೇಕೆಂದು ಕೋರಿದರು.

ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್‌, ತನ್ನ ತೀರ್ಪನ್ನು ಕಾಯ್ದಿರಿಸಿದೆ.

ಪ್ರಕರಣದ ಹಿನ್ನೆಲೆ

ಈ ಪ್ರಕರಣದ ಕೇಂದ್ರ ಬಿಂದುವಾಗಿರುವವರು ಸಮೀರ್ ಅಹಮದ್. ಅವರು 2015ರಲ್ಲಿ ಹಿಂದು ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದರು. ಅವರ ಮತಾಂತರದ ಕುರಿತು 2016ರಲ್ಲಿ ಗೆಜೆಟ್ ಅಧಿಸೂಚನೆಯೂ ಪ್ರಕಟವಾಗಿತ್ತು. ನಂತರ ಇಸ್ಲಾಮಿಕ್ ಸಂಪ್ರದಾಯದಂತೆ ವಿವಾಹವಾಗಿದ್ದ ಅವರು, ಮೀಸಲಾತಿ ಸೌಲಭ್ಯ ಪಡೆಯುವ ಉದ್ದೇಶದಿಂದ ತಮ್ಮನ್ನು ‘ಮುಸ್ಲಿಂ ಲೆಬ್ಬೈ’ (Muslim Lebbai) ಸಮುದಾಯಕ್ಕೆ ಸೇರಿದವರೆಂದು ಗುರುತಿಸುವ ಹಿಂದುಳಿದ ವರ್ಗದ ಸಮುದಾಯ ಪ್ರಮಾಣಪತ್ರ ನೀಡುವಂತೆ ಅರ್ಜಿ ಸಲ್ಲಿಸಿದ್ದರು.

ಆದರೆ, ತಹಶೀಲ್ದಾರ್ ಅವರ ಅರ್ಜಿಯನ್ನು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಸಮೀರ್ ಅಹಮದ್ ಅವರು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, “ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಅಧಿಸೂಚಿತ ನಿರ್ದಿಷ್ಟ ಮುಸ್ಲಿಂ ಹಿಂದುಳಿದ ಸಮುದಾಯಕ್ಕೆ ಸೇರಿದವರೆಂದು ಪರಿಗಣಿಸಲಾಗದು” ಎಂದು ಹೇಳಿತ್ತು.

ಮುಂದುವರೆದು, “ಮತಾಂತರಗೊಂಡ ವ್ಯಕ್ತಿಯನ್ನು ಮುಸ್ಲಿಂ ಎಂದು ಪರಿಗಣಿಸಬಹುದಾದರೂ, ಮತಾಂತರವೊಂದನ್ನೇ ಆಧಾರವಾಗಿಟ್ಟುಕೊಂಡು ಅವರನ್ನು ‘ಮುಸ್ಲಿಂ ಲೆಬ್ಬೈ’ ಅಥವಾ ಮತ್ತೊಂದು ನಿರ್ದಿಷ್ಟ ಹಿಂದುಳಿದ ಮುಸ್ಲಿಂ ಸಮುದಾಯಕ್ಕೆ ಸೇರಿಸಲು ಸಾಧ್ಯವಿಲ್ಲ” ಎಂಬುದು ಹೈಕೋರ್ಟ್‌ನ ನಿಲುವಾಗಿತ್ತು.

ತಮಿಳುನಾಡು ಸರ್ಕಾರದ ಆದೇಶ

ಆದಾಗ್ಯೂ, ಈ ವಿವಾದದ ಮತ್ತೊಂದು ಪ್ರಮುಖ ಅಂಶ ತಮಿಳುನಾಡು ಸರ್ಕಾರ 2024ರ ಮಾರ್ಚ್ 9ರಂದು ಹೊರಡಿಸಿದ್ದ ಸರ್ಕಾರಿ ಆದೇಶ ಸಂಖ್ಯೆ 31. ಈ ಆದೇಶದಲ್ಲಿ ತಮಿಳುನಾಡು ಸರ್ಕಾರವು ‘ಹಿಂದುಳಿದ ವರ್ಗಗಳ ಆಯೋಗ’ದ ಶಿಫಾರಸಿನ ಆಧಾರದಲ್ಲಿ ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಡಿನೋಟಿಫೈಡ್ ಸಮುದಾಯಗಳು ಹಾಗೂ ಪರಿಶಿಷ್ಟ ಜಾತಿಗಳಿಂದ ಇಸ್ಲಾಂಗೆ ಮತಾಂತರಗೊಂಡ ಅರ್ಹ ವ್ಯಕ್ತಿಗಳಿಗೆ ‘ಹಿಂದುಳಿದ ವರ್ಗ–ಮುಸ್ಲಿಂ’ ಸಮುದಾಯ ಪ್ರಮಾಣಪತ್ರ ನೀಡಬೇಕು ಎಂದು ಆದೇಶ ಹೊರಡಿಸಿತ್ತು.

ಈ ಆದೇಶವನ್ನೂ ಅಸಂವಿಧಾನಿ ಎಂದು ಘೋಷಿಸಿದ್ದ ಮದ್ರಾಸ್‌ ಹೈಕೋರ್ಟ್‌, ಆದೇಶವನ್ನು ರದ್ದುಗೊಳಿಸಿತ್ತು. ಬಳಿಕ, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ತಮಿಳುನಾಡು ಸರ್ಕಾರ, “ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರು ಧರ್ಮ ಬದಲಿಸಿಕೊಂಡರು ಎಂಬ ಒಂದೇ ಕಾರಣಕ್ಕೆ ಮೀಸಲಾತಿಯಂತಹ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬುದು ಈ ಆದೇಶದ ಉದ್ದೇಶ” ಎಂದು ವಾದಿಸಿದೆ.

“ಧರ್ಮ ಬದಲಾದರೂ ವ್ಯಕ್ತಿಯ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ವಾಸ್ತವತೆ ತಕ್ಷಣಕ್ಕೆ ಬದಲಾಗುವುದಿಲ್ಲ. ಹೀಗಾಗಿ, ಇಸ್ಲಾಂಗೆ ಮತಾಂತರಗೊಂಡ ಕಾರಣಕ್ಕೆ ಮಾತ್ರವೇ ಹಿಂದಿನ ಸಾಮಾಜಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ದೊರೆಯುತ್ತಿದ್ದ ಮೀಸಲಾತಿ ಸೌಲಭ್ಯವನ್ನು ಕಳೆದುಕೊಳ್ಳಬಾರದು” ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.

ಇದಲ್ಲದೆ, “ಈ ನೀತಿಯನ್ನು ಸರ್ಕಾರ ಏಕಪಕ್ಷೀಯವಾಗಿ ರೂಪಿಸಿಲ್ಲ; ತಮಿಳುನಾಡು ಹಿಂದುಳಿದ ವರ್ಗಗಳ ಆಯೋಗವು 2024ರ ಫೆಬ್ರವರಿ 6ರಂದು ನೀಡಿದ ಶಿಫಾರಸಿನ ಆಧಾರದಲ್ಲಿಯೇ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಧರ್ಮಾಂತರದ ಬಳಿಕ ಮೀಸಲಾತಿ ಸೌಲಭ್ಯ ಮುಂದುವರಿಸುವುದಕ್ಕೆ ಸಂಬಂಧಿಸಿದ ಕಾನೂನು ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಶಾಸನಬದ್ಧ ತಜ್ಞ ಆಯೋಗ ಈ ಶಿಫಾರಸು ಮಾಡಿತ್ತು” ಎಂದು ಸರ್ಕಾರ ವಾದಿಸಿದೆ.

ಮೂಲ ಅರ್ಜಿದಾರರು ಮತ್ತು ತಮಿಳುನಾಡು ಸರ್ಕಾರದ ವಾದಗಳನ್ನು ಆಲಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಈ ತೀರ್ಪು ಕೇವಲ ಸಮೀರ್ ಅಹಮದ್ ಅವರ ಸಮುದಾಯ ಪ್ರಮಾಣಪತ್ರದ ವಿವಾದಕ್ಕೆ ಸೀಮಿತವಾಗದೆ, ಧರ್ಮಾಂತರದ ನಂತರ ಸಾಮಾಜಿಕ ಹಿಂದುಳಿದಿರುವಿಕೆಯ ಆಧಾರದ ಮೀಸಲಾತಿ ಹಕ್ಕು ಮುಂದುವರಿಯಬಹುದೇ ಮತ್ತು ಮತಾಂತರಗೊಂಡ ವ್ಯಕ್ತಿಯನ್ನು ನಿರ್ದಿಷ್ಟ ಹಿಂದುಳಿದ ಮುಸ್ಲಿಂ ಸಮುದಾಯದ ಸದಸ್ಯರೆಂದು ಯಾವ ಆಧಾರದಲ್ಲಿ ಗುರುತಿಸಬೇಕು ಎಂಬ ವಿಶಾಲ ಕಾನೂನು ಪ್ರಶ್ನೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...