ಒಬ್ಬರೇ ಅಭ್ಯರ್ಥಿ ಕಣದಲ್ಲಿದ್ದರೂ ‘ನೋಟಾ’ ಚಲಾವಣೆಯ ಅವಕಾಶಕ್ಕಾಗಿ ಮತದಾನ; ಸುಪ್ರೀಂ ಕೋರ್ಟ್‌ ಪರಿಶೀಲನೆ

Date:

ಚುನಾವಣಾ ಸ್ಪರ್ಧೆಯಲ್ಲಿ ಒಬ್ಬರೇ ಅಭ್ಯರ್ಥಿ ಕಣದಲ್ಲಿದ್ದರೂ, ‘ನನ್ ಆಫ್‌ ದಿ ಅಬೌ’ (ನೋಟಾ)ಗೆ ಮತ ಚಲಾಯಿಸಲು ಇಚ್ಛಿಸುವ ಮತದಾರರ ಹಕ್ಕನ್ನು ಖಾತ್ರಿ ಪಡಿಸುವ ಪ್ರಸ್ತಾಪವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ. ಒಂದು ವೇಳೆ, ಪ್ರಸ್ತಾಪಕ್ಕೆ ಸುಪ್ರೀಂ ಕೋರ್ಟ್‌ ಸಮ್ಮತಿ ನೀಡಿದರೆ, ಏಕೈಕ ಅಭ್ಯರ್ಥಿ ಸ್ಪರ್ಧೆಯಲ್ಲಿದ್ದಾರೆ ಎಂಬ ಕಾರಣಕ್ಕಾಗಿ ಚುನಾವಣೆ ನಡೆಸದೆ ಅವಿರೋಧವಾಗಿ ಆಯ್ಕೆ ಮಾಡುವ ಪದ್ದತಿ ರದ್ದಾಗಲಿದೆ.

- Advertisement -

2013ರಲ್ಲಿ ಮತದಾನದಲ್ಲಿ ಮತದಾರರ ಪರಿಪೂರ್ಣ ಹಕ್ಕನ್ನು ಖಾತ್ರಿ ಪಡಿಸುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಬ್ಯಾಲೆಟ್‌ ಪೇಪರ್ ಅಥವಾ ಇವಿಎಂಗಳಲ್ಲಿ ‘ನೋಟಾ’ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಅಂದಿನಿಂದ ಎಲ್ಲ ಚುನಾವಣೆಗಳಲ್ಲಿಯೂ ಮತಪತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯ ಜೊತಗೆ ನೋಟಾವನ್ನು ಅಳವಡಿಸಲಾಗುತ್ತಿದೆ. ಆದಾಗ್ಯೂ, ನೋಟಾಗೆ ಮತದಾರರಿಂದ ಉತ್ತಮ ಸ್ಪಂದನೆ ಇಲ್ಲ. ನೋಟಾ ವ್ಯವಸ್ಥೆಯು ವಿಫಲ ಪರಿಕಲ್ಪನೆ ಎಂದು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ವಾದಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

ಇದೀಗ, ಏಕೈಕ ಅಭ್ಯರ್ಥಿ ಇದ್ದಾರೆ ಎಂಬ ಕಾರಣಕ್ಕೆ ಮತದಾನ ನಡೆಸದೇ ಇರುವುದು, ಆ ಸ್ಪರ್ಧಿಯ ವಿರುದ್ಧವಾಗಿ ಮತಚಲಾಯಿಸುವವರ ಮತ್ತು ನೋಟಾಗೆ ಮತಚಲಾಯಿಸಲು ಬಯಸುವವರ ಹಕ್ಕನ್ನು ಕಸಿದುಕೊಳ್ಳುತ್ತದೆ. ನೋಟಾವನ್ನು ಸ್ಪರ್ಧಿಯಾಗಿ ಪರಿಗಣಿಸುವ ಮತ್ತು ಮತದಾರರ ಹಕ್ಕನ್ನು ಖಾತ್ರಿಪಡಿಸುವ ಉದ್ದೇಶದಿಂದ ಏಕೈಕ ಅಭ್ಯರ್ಥಿ ಇದ್ದರೂ, ಮತದಾನ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪದ ಅರ್ಜಿ ಸಲ್ಲಿಸಲಾಗಿದೆ.

ಆ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಸೂರ್ಯಕಾಂತ, ಉಜ್ಜಲ್ ಭೂಯಾನ್ ಹಾಗೂ ಎನ್.ಕೆ ಸಿಂಗ್ ಅವರಿದ್ದ ಪೀಠವು ವಿಚಾರಣೆ ನಡೆಸಿದೆ. “ಇದೊಂದು ಆಸಕ್ತಿದಾಯಕ ಪ್ರಶ್ನೆಯಾಗಿದೆ. ಕಣದಲ್ಲಿರುವ ಏಕೈಕ ಅಭ್ಯರ್ಥಿಯನ್ನೂ ಮತದಾರ ಒಪ್ಪಿಕೊಳ್ಳುವುದಿಲ್ಲ ಎಂದಾದರೆ, ಲೋಕಸಭೆ ಮತ್ತು ವಿಧಾನಸಭೆಯಲ್ಲಿ ತಮ್ಮ ಪ್ರತಿನಿಧಿಯಾಗಿ ಯಾರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರದಲ್ಲಿ ಎದುರಾಳಿಗಳ ಕೈಕಾಲು ಕಟ್ಟಿ, ತಾನು ಗೆಲ್ಲುವುದು ಬಿಜೆಪಿ ಹುನ್ನಾರ

“ಸ್ಪರ್ಧೆಯಲ್ಲಿರುವ ಏಕೈಕ ಅಭ್ಯರ್ಥಿ ಕುರಿತು ಮತದಾರರಲ್ಲಿ ಅಸಮಾಧಾನ ಇದ್ದರೆ, ಮತದಾರರು ದೊಡ್ಡ ಸಂಖ್ಯೆಯಲ್ಲಿ ಬಂದು ನೋಟಾ ಆಯ್ಕೆ ಮಾಡಬಹುದು. ಅಭ್ಯರ್ಥಿಗಿಂತ ಹೆಚ್ಚು ಮತಗಳು ನೋಟಾಗೆ ಚಲಾವಣೆಯಾದರೆ, ಆ ಸಂದರ್ಭದಲ್ಲಿ ಏನು ಮಾಡಬೇಕು? ಇದರ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ” ಎಂದು ಅವರು ಹೇಳಿದ್ದಾರೆ.

ಅಭ್ಯರ್ಥಿಗಿಂತ ಹೆಚ್ಚು ಮತಗಳು ನೋಟಾಗೆ ಚಲಾವಣೆ ಆದ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಂಭೀರ ಅಧ್ಯಯನ ನಡೆದು, ನಿರ್ಧಾರಗಳು ಬಂದರೆ, ಬಹುಶಃ ಕಣದಲ್ಲಿದ್ದ ಏಕೈಕ ಅಭ್ಯರ್ಥಿಯ ಆಯ್ಕೆಯನ್ನೂ ರದ್ದಪಡಿಸುವ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆಗಳಿವೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

ಯುಪಿ ಚುನಾವಣೆ | ಎಸ್‌ಪಿ-ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಮಾತುಕತೆ ಆರಂಭ; 2-4 ದಿನಗಳಲ್ಲಿ ಅಂತಿಮ ನಿರ್ಧಾರ ಸಾಧ್ಯತೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಇಂಡಿಯಾ ಮೈತ್ರಿಕೂಟದ...

ಹಸೀನಾ ತಾಯ್ನಾಡಿಗೆ ಮರಳಿದರೆ ಜೈಲು ಖಂಡಿತ: ಬಾಂಗ್ಲಾ ಸರ್ಕಾರದ ಎಚ್ಚರಿಕೆ ಬೆನ್ನಲ್ಲೇ ಭುಗಿಲೆದ್ದ ಹಿಂಸೆ!

ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಡಿಸೆಂಬರ್‌ನಲ್ಲಿ...