ಟೋಕಿಯೊದಿಂದ ನೇತಾಜಿ ಅಸ್ಥಿ ಮರಳಿ ತರುವ ವಿಚಾರ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

Date:

ಜಪಾನ್‌ನ ಟೋಕಿಯೊದಲ್ಲಿರುವ ರೆಂಕೋಜಿ ದೇವಾಲಯದಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ‘ಅಸ್ಥಿ’ಯನ್ನು ಭಾರತಕ್ಕೆ ಮರಳಿ ತರಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ.

- Advertisement -

​ನೇತಾಜಿ ಅವರ ಪುತ್ರಿ ಅನಿತಾ ಬಿ. ಫಾಫ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

​ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ‘ಗೌರವಾನ್ವಿತವಾಗಿ ಮತ್ತು ಅಧಿಕೃತವಾಗಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವ ಉದ್ದೇಶದಿಂದ ತಮ್ಮ ತಂದೆಯ ಪಾರ್ಥಿವ ಶರೀರದ ಅವಶೇಷಗಳನ್ನು (ಅಸ್ಥಿ) ಭಾರತಕ್ಕೆ ಮರಳಿ ತರಬೇಕೆಂದು ಅನಿತಾ ಅವರು ನಿರಂತರವಾಗಿ ಮತ್ತು ಬಹಿರಂಗವಾಗಿ ಒತ್ತಾಯಿಸುತ್ತಾ ಬಂದಿದ್ದಾರೆ’ ಎಂದು ಪೀಠದ ಗಮನಕ್ಕೆ ತಂದರು.

​1945ರ ಆಗಸ್ಟ್‌ನಲ್ಲಿ ನೇತಾಜಿ ಅವರ ನಾಪತ್ತೆಯ ಸುತ್ತ ಹಲವು ವದಂತಿಗಳಿವೆ. ಟೋಕಿಯೊದ ರೆಂಕೋಜಿ ದೇವಾಲಯದಲ್ಲಿ ಅವರ ಅಸ್ಥಿಯನ್ನು ಸಂರಕ್ಷಿಸಿಡಲಾಗಿದೆ ಎಂದು ಕೆಲವು ವರದಿಗಳು ಸೂಚಿಸುತ್ತವೆ.

ಇದೇ ವರ್ಷದ ಮಾರ್ಚ್ ತಿಂಗಳಲ್ಲಿ, ನೇತಾಜಿ ಅವರ ಅಸ್ಥಿಯನ್ನು ಭಾರತಕ್ಕೆ ತರುವಂತೆ ಕೋರಿ ಅವರ ಸಂಬಂಧಿ (ಮೊಮ್ಮಗ) ಆಶಿಶ್ ರೇ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ‘ನೇತಾಜಿ ಅವರ ಪುತ್ರಿ ಅನಿತಾ ಅವರು ಖುದ್ದಾಗಿ ನ್ಯಾಯಾಲಯದ ಮೊರೆ ಹೋದರೆ ಮಾತ್ರ ಈ ಬಗ್ಗೆ ವಿಚಾರಣೆ ನಡೆಸಲಾಗುವುದು. ಅವರ ಭಾವನೆಗಳನ್ನು ನಾವು ಗೌರವಿಸುತ್ತೇವೆ ಹಾಗೂ ಆ ಭಾವನೆಗಳಿಗೆ ಕಾನೂನಿನ ಸ್ವರೂಪ ನೀಡಲು ಸಿದ್ಧರಿದ್ದೇವೆ. ಆದರೆ ಅವರೇ ಖುದ್ದಾಗಿ ಮುಂದೆ ಬರಬೇಕು’ ಎಂದು ನ್ಯಾಯಪೀಠ ಸೂಚಿಸಿತ್ತು. ತರುವಾಯ ವಕೀಲರು ಆ ಅರ್ಜಿಯನ್ನು ಹಿಂಪಡೆದಿದ್ದರು.

​ಇದಕ್ಕೂ ಮುನ್ನ, 2024ರಲ್ಲಿ ಇದೇ ರೀತಿಯ ಪ್ರಕರಣವೊಂದರ ವಿಚಾರಣೆ ನಡೆಸಿದ್ದ ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠ, ನೇತಾಜಿ ಸಾವಿನ ಬಗ್ಗೆ ತನಿಖೆ ಕೋರಿದ್ದ ಅರ್ಜಿದಾರ ಪಿನಾಕಿ ಪಾಣಿ ಮೊಹಂತಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ‘ಮೃತ ನಾಯಕರ ವಿರುದ್ಧ ಇಂತಹ ಆಧಾರರಹಿತ ಆರೋಪಗಳನ್ನು ಮಾಡಬಾರದು. ಮಹಾತ್ಮ ಗಾಂಧಿ, ನೆಹರೂ ಸೇರಿದಂತೆ ಯಾರ ಬಗ್ಗೆಯಾದರೂ ನೀವು ಮನಬಂದಂತೆ ಬರೆಯಲು ಹೇಗೆ ಸಾಧ್ಯ?’ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...